ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಹತ್ವದ ಸಂದೇಶ ರವಾನಿಸಿದ ಯಡಿಯೂರಪ್ಪ

By Kannadaprabha News  |  First Published Jan 8, 2023, 3:30 AM IST

2-3 ದಿನದಲ್ಲಿ ಸಚಿವ ಸಂಪುಟ ವಿಸ್ತರಣೆ, ಯಾರನ್ನು ಮಂತ್ರಿ ಮಾಡಬೇಕೆಂದು ವರಿಷ್ಠರ ನಿರ್ಧಾರ, ಬಿಜೆಪಿ ಗೆಲುವು ಯಾರಿಂದಲೂ ತಡೆಯಲಾಗದು: ಬಿಎಸ್‌ವೈ 


ಶಿವಮೊಗ್ಗ(ಜ.08):  ಇನ್ನು ಎರಡ್ಮೂರು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಕೇಂದ್ರ ನಾಯಕರು ಈ ಸಂಬಂಧ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಶಿಕಾರಿಪುರದಲ್ಲಿ ಪತ್ರಕರ್ತರೊಂದಿಗೆ ಶನಿವಾರ ಮಾತನಾಡಿ, ಯಾರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂಬುದು ಪ್ರಧಾನಿಗಳಿಗೆ ಮತ್ತು ಕೇಂದ್ರ ನಾಯಕರಿಗೆ ಬಿಟ್ಟಿದ್ದು ಎಂದರು.

Tap to resize

Latest Videos

ಆರ್‌ಎಸ್‌ಎಸ್‌ ಬಗ್ಗೆ ಸಿದ್ದರಾಮಯ್ಯ ಕಪಿಚೇಷ್ಟೆ: ಕೆ.ಎಸ್‌.ಈಶ್ವರಪ್ಪ ಟೀಕೆ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕನಿಷ್ಠ 140 ರಿಂದ 150 ಸ್ಥಾನದಲ್ಲಿ ಗೆಲುವು ಸಾಧಿಸುತ್ತೇವೆ. ಈ ಗೆಲುವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಸೂರ್ಯ ಚಂದ್ರರಿರುವುದು ಎಷ್ಟು ಸತ್ಯವೋ, ನಮ್ಮ ಗೆಲುವು ಅಷ್ಟೇ ಸತ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಕಾಂಗ್ರೆಸ್‌ ಮಾತ್ರ ತಿರುಕನ ಕನಸು ಕಾಣುತ್ತಿದೆ. ಆ ಪಕ್ಷದ ಹಲವು ನಾಯಕರು ತಾವೇ ಮುಖ್ಯಮಂತ್ರಿ ಎಂದು ಕನಸು ಕಾಣುತ್ತಿದ್ದಾರೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ನಿಂತಿರುವ ನೆಲವೇ ಕುಸಿಯುತ್ತಿದೆ. ಆದರೆ ಈ ಬಗ್ಗೆ ಅರಿವಿಲ್ಲದೆ ಹಗುರ ಮಾತುಗಳಲ್ಲಿ ಮುಖ್ಯಮಂತ್ರಿಗಳನ್ನು, ಆರ್‌ಎಸ್‌ಎಸ್‌ ಅನ್ನು ಟೀಕಿಸುತ್ತಿದ್ದಾರೆ. ಇದು ಅವರಿಗೆ ಹವ್ಯಾಸವಾದಂತಿದೆ. ಆದರೆ ಈ ಮಾತುಗಳಿಗೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕಿಡಿಕಾರಿದರು.
 

click me!