
ಶಿವಮೊಗ್ಗ(ಮಾ.19): ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟದಿಂದ 28 ಅಭ್ಯರ್ಥಿಗಳನ್ನೂ ಗೆಲ್ಲಿಸಿಕೊಂಡು ನಿಮ್ಮನ್ನು ನೋಡಲು ದೆಹಲಿಗೆ ಬರುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಪ್ರಧಾನಿ ಮೋದಿಗೆ ಭರವಸೆ ನೀಡಿದರು.
ನಗರದಲ್ಲಿ ಸೋಮವಾರ ನಡೆದ ಮೋದಿ ಅವರ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಾತನಾಡಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ದೂರವಾಣಿ ಕರೆ ಮಾಡಿದ್ದರು. ನಾನು ಕೂಡ ಶಿವಮೊಗಕ್ಕೆ ಬರುತ್ತೇನೆ. ಎಲ್ಲ ಕಡೆ ಪ್ರಚಾರ ಮಾಡಿ ಅಭ್ಯರ್ಥಿಗಳನ್ನು ಗೆಲ್ಲಿಸೋಣ ಎಂದು ಹೇಳಿದ್ದಾರೆ. ಬಿಜೆಪಿ-ಜೆಡಿಎಸ್ ಪಕ್ಷಗಳು ಒಟ್ಟಿಗೆ ಸೇರಿ 28 ಕ್ಷೇತ್ರಗಳನ್ನೂ ಗೆಲ್ಲಲಿದ್ದೇವೆ ಎಂದರು.
ಕಾಂಗ್ರೆಸ್ ಸರ್ಕಾರದ ಆಡಳಿತದಿಂದ ಜನರು ಹತಾಶ: ಕರ್ನಾಟಕದ ಮನಸ್ಥಿತಿಯನ್ನು ನಾನು ಕಂಡೆ, ಪ್ರಧಾನಿ ಮೋದಿ
ಪ್ರಧಾನಿ ಮೋದಿ ಅವರನ್ನು ಹಿಂದಿ ಭಾಷೆಯಲ್ಲೇ ಸ್ವಾಗತಿಸಿ, ಹಾಡಿ ಹೊಗಳಿದ ಯಡಿಯೂರಪ್ಪ, ರಾಜ್ಯದಲಿ ಮೋದಿ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ. ಮೊನ್ನೆ ಕಲಬುರಗಿಯಲ್ಲಿ ಚುನಾವಣಾ ಪ್ರಚಾರ ಮಾಡಿದ್ದರು. ಮೋದಿಯವರು ಕೇವಲ ಚುನಾವಣೆಗೆ ಮಾತ್ರ ಕೆಲಸ ಮಾಡಲ್ಲ. ದೇಶಕ್ಕಾಗಿ ಒಂದು ದಿನವೂ ವಿಶ್ರಾಂತಿ ಪಡೆಯದೆ ಕೆಲಸ ಮಾಡುತ್ತಿದ್ದಾರೆ ಎಂದು ಗುಣಗಾನ ಮಾಡಿದರು.
ದೇಶದ ಗಡಿ ಕಾಯುವ ರಕ್ಷಣಾ ವ್ಯವಸ್ಥೆ ಜೊತೆಗೆ ಕಿಸಾನ್ ಸಮ್ಮಾನ್ ಮೂಲಕ ರೈತರಿಗೆ 6 ಸಾವಿರ ರು. ಕೊಡುತ್ತಿದ್ದಾರೆ. ನಾನು ಅಧಿಕಾರದಲ್ಲಿ ಇದ್ದಾಗ ಕೇಂದ್ರದಿಂದ 6 ಸಾವಿರ ರು. ಜೊತೆಗೆ ರಾಜ್ಯ ಸರ್ಕಾರದಿಂದ 4 ಸಾವಿರ ರು. ಸೇರಿಸಿ 10 ಸಾವಿರ ರು. ಕೊಡುತ್ತಿದ್ದೇವು. ಆದರೆ, ಈಗ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಅದನ್ನು ನಿಲ್ಲಿಸಿದ್ದಾರೆ ಎಂದು ಆರೋಪಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.