'ದೇಶದ್ರೋಹಿಗಳು...' ಟಿಕೆಟ್‌ ಮಿಸ್‌ ಆದ ಬಳಿಕ ವದಂತಿಗೆ ತೆರೆ ಎಳೆದ ಸದಾನಂದಗೌಡ!

By Santosh NaikFirst Published Mar 13, 2024, 8:18 PM IST
Highlights

ಬೆಂಗಳೂರು ಉತ್ತರ ಕ್ಷೇತ್ರದಿಂದ ಮಾಜಿ ಸಿಎಂ ಡಿವಿ ಸದಾನಂದ ಗೌಡ ಅವರಿಗೆ ಟಿಕೆಟ್‌ ಮಿಸ್‌ ಆಗಿದೆ. ಇದರ ಬೆನ್ನಲ್ಲಿಯೇ ಅವರು ಮಾಡಿರುವ ಟ್ವೀಟ್‌ ಎಲ್ಲರ ಕುತೂಹಲ ಕೆರಳಿಸಿದೆ.
 

ಬೆಂಗಳೂರು  (ಮಾ.13): ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬದಲಾವಣೆ ಮಾಡಿದೆ. ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದೆಯಾಗಿರುವ ಶೋಭಾ ಕರಂದ್ಲಾಜೆ ಅವರಿಗೆ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್‌ಅನ್ನು ಬಿಜೆಪಿ ನೀಡಿದೆ. ಈ ಕ್ಷೇತ್ರದಲ್ಲಿ ತಮಗೆ ಟಿಕೆಟ್‌ ಬೇಕು ಎಂದು ಸದಾನಂದ ಗೌಡ ಪಟ್ಟು ಹಿಡಿದಿದ್ದರು. ಆದರೆ, ಬಿಜೆಪಿ ಹೈಕಮಾಂಡ್‌ ಮಾತ್ರ ಇದಕ್ಕೆ ಕ್ಯಾರೇ ಎಂದಿಲ್ಲ. ಇದರ ಬೆನ್ನಲ್ಲಿಯೇ ಸದಾನಂದ ಗೌಡ ಅವರು ಮಾಡಿರುವ ಟ್ವೀಟ್‌ ಎಲ್ಲರ ಕುತೂಹಲ ಕೆರಳಿಸಿದೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಟಿಕೆಟ್‌ ತಪ್ಪಿಸಿಕೊಂಡಿರುವ ಸದಾನಂದ ಗೌಡ ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಾರೆ ಎನ್ನುವ ವದಂತಿಗಳು ಜೋರಾಗಿದ್ದವು. ಇದಕ್ಕೆ ಟ್ವೀಟ್‌ ಮೂಲಕವೇ ಅವರು ಉತ್ತರ ನೀಡಿದಲ್ಲದೆ, ಇಂಥ ವದಂತಿಗಳನ್ನು ಹಬ್ಬಿಸುತ್ತಿರುವವರು ದೇಶದ್ರೋಹಿಗಳು ಎಂದು ಕರೆದಿದ್ದಾರೆ. 'ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುವುದಾಗಿ ಕೆಲವರು ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾದುದು. ಹಾರಿಕೆ ಸುದ್ದಿಯನ್ನು ಹಬ್ಬುವವರು ದೇಶದ್ರೋಹಿಗಳು' ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಕರ್ನಾಟಕದಲ್ಲಿ ಟಿಕೆಟ್ ಕೈ ತಪ್ಪಿದವರ ಕೋಲಾಹಲ; ಮುನಿಸು ಕೈಬಿಟ್ಟ ಸಿಂಹ, ಸಿಡಿದೇಳುತ್ತಾರಾ ಈಶ್ವರಪ್ಪ!

ಈ ಬಗ್ಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರು ಉತ್ತರಕ್ಕೆ ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡಿರುವ ವಿಚಾರದಲ್ಲಿ ಮಾತನಾಡಿದ ಅವರು,  ಸದಾನಂದಗೌಡರು ಕಾಂಗ್ರೆಸ್ ಗೆ ಬರುತ್ತಾರಾ ಎಂಬ ಪ್ರಶ್ನೆಗೆ ಉತ್ತರ ನೀಡಿದರು. ಊಹಾಪೋಹಗಳ ಬಗ್ಗೆ ನಾನು ಮಾತನಾಡುವುದಿಲ್ಲ. ನಮಗೆ ಅಭ್ಯರ್ಥಿಗಳ ಕೊರತೆ ಇಲ್ಲ. ಕಾಂಗ್ರೆಸ್ ಗೆ ಹಲವರು ಸೇರ್ಪಡೆ ಆಗಲಿದ್ದಾರೆ' ಎಂದಷ್ಟೇ ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ.

Breaking: ಬಿಜೆಪಿ 2ನೇ ಪಟ್ಟಿ ಪ್ರಕಟ, ಪ್ರತಾಪ್‌ ಸಿಂಹಗೆ ಟಿಕೆಟ್‌ ಮಿಸ್‌, ಬೊಮ್ಮಾಯಿಗೆ ಹಾವೇರಿ ಟಿಕೆಟ್‌

ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುವುದಾಗಿ ಕೆಲವರು ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾದುದು. ಹಾರಿಕೆ ಸುದ್ದಿಯನ್ನು ಹಬ್ಬುವವರು ದೇಶದ್ರೋಹಿಗಳು.

— Sadananda Gowda ( Modi Ka Parivar ) (@DVSadanandGowda)
click me!