ಕೇಂದ್ರವು ಸರ್ಕಾರಿ ಆಡಳಿತದಲ್ಲಿ ಕನ್ನಡ ಸೇರಿ ಇತರ ಭಾಷೆಗಳನ್ನು ಸೇರಿಸಬೇಕು| ಸಂವಿಧಾನದ ಪರಿಚ್ಛೇದ 343, 344, 345ರಲ್ಲಿ ಹಿಂದಿಗೆ ಉತ್ತೇಜನ ನೀಡುವ ಅಂಶಗಳಿವೆ| ಇದೇ ನೆಪದಲ್ಲಿ ಹಿಂದಿ ಹೇರುವ ಪ್ರಯತ್ನ ಕೇಂದ್ರ ಸರ್ಕಾರಗಳಿಂದ ನಿರಂತರವಾಗಿ ನಡೆದಿದೆ ಎಂದ ಕುಮಾರಸ್ವಾಮಿ|
ಬೆಂಗಳೂರು(ಸೆ.18): ಕನ್ನಡವೂ ಸೇರಿ ಪ್ರಾದೇಶಿಕ ಭಾಷೆಗಳಿಗೆ ಹಿಂದಿಯಷ್ಟೇ ಸ್ಥಾನಮಾನ ನೀಡಲು ಸಾಂವಿಧಾನಿಕ ತಿದ್ದುಪಡಿ ತರಲಾಗುವುದಿಲ್ಲ ಎಂಬುದಾಗಿ ಕೇಂದ್ರ ಸರ್ಕಾರ ಹೇಳಿರುವುರು ಭಾಷಾ ತಿರಸ್ಕಾರದ ಸಂಕೇತ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಹಿಂದಿಯಂತೆ ಕನ್ನಡವೂ ದೇಶದ ಅಧಿಕೃತ ಭಾಷೆ. ಕನ್ನಡ ರಾಷ್ಟ್ರಭಾಷೆಯೇ, ಕೇಂದ್ರವು ಸರ್ಕಾರಿ ಆಡಳಿತದಲ್ಲಿ ಕನ್ನಡ ಸೇರಿ ಇತರ ಭಾಷೆಗಳನ್ನು ಸೇರಿಸಬೇಕಷ್ಟೆ. ಸಂವಿಧಾನದ ಪರಿಚ್ಛೇದ 343, 344, 345ರಲ್ಲಿ ಹಿಂದಿಗೆ ಉತ್ತೇಜನ ನೀಡುವ ಅಂಶಗಳಿವೆ. ಇದೇ ನೆಪದಲ್ಲಿ ಹಿಂದಿ ಹೇರುವ ಪ್ರಯತ್ನ ಕೇಂದ್ರ ಸರ್ಕಾರಗಳಿಂದ ನಿರಂತರವಾಗಿ ನಡೆದಿದೆ ಎಂದು ತಿಳಿಸಿದ್ದಾರೆ.
'ನಿರ್ಮಲಾ ಸೀತಾರಾಮನ್ ಹೇಳಿದಂತೆ ದೇವರೇ ಬಿಎಸ್‌ವೈ ಸರ್ಕಾರ ಕಾಪಾಡಬೇಕು'
ಸಂವಿಧಾನವನ್ನು ಬದಲಿಸುವ ಮಾತನಾಡುವ ಬಿಜೆಪಿ ನಾಯಕರು ಕನ್ನಡ ಮತ್ತು ಇತರ ಭಾಷೆಗಳಿಗೆ ಹಿಂದಿಯಷ್ಟೇ ಸ್ಥಾನಮಾನ ನೀಡಲು ಸಾಂವಿಧಾನಿಕ ತಿದ್ದುಪಡಿ ತರಲು ಪ್ರಯತ್ನಿಸಲಿ ಎಂದು ಅವರು ಗುರುವಾರ ಟ್ವೀಟರ್‌ನಲ್ಲಿ ಒತ್ತಾಯಿಸಿದ್ದಾರೆ.