ಆರ್‌.ಆರ್‌.ನಗರ ಉಪಚುನಾವಣೆ: ಮೈತ್ರಿ ಬಗ್ಗೆ ಕುಮಾರಸ್ವಾಮಿ ಪ್ರತಿಕ್ರಿಯೆ

By Kannadaprabha NewsFirst Published Oct 1, 2020, 9:03 AM IST
Highlights

ಮೈತ್ರಿ ಇಲ್ಲ ಎಂದು ಸ್ಪಷ್ಟಪಡಿಸಿದ ಕಾಂಗ್ರೆಸ್‌ ನಾಯಕರು| ಕಾಂಗ್ರೆಸ್‌ ನಾಯಕರ ಹೇಳಿಕೆಗಳನ್ನು ಗಮನಿಸಿದ್ದೇನೆ. ನಮ್ಮ ಪಕ್ಷದ ಅಸ್ತಿತ್ವ ಮತ್ತು ಕಾರ್ಯಕರ್ತರಿಗಾಗಿ ಏಕಾಂಗಿ ಸ್ಪರ್ಧೆ ಮಾಡುತ್ತೇವೆ| ಎರಡು ರಾಷ್ಟ್ರೀಯ ಪಕ್ಷಗಳ ನಡವಳಿಕೆ ಗಮನಿಸಿದ್ದೇವೆ. ರಾಜ್ಯದ ಉಳಿವಿಗಾಗಿ ನಮ್ಮ ಹೋರಾಟ ಇರುತ್ತದೆ. ಯಾವುದೇ ಕಾರಣಕ್ಕೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದ ಎಚ್‌ಡಿಕೆ| 

ಬೆಂಗಳೂರು(ಅ.01): ಉಪಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಆರ್‌.ಆರ್‌.ನಗರ ವಿಧಾನಸಭಾ ಉಪಚುನಾವಣೆ ಸಂಬಂಧ ಜೆಡಿಎಸ್‌ ಕಚೇರಿ ಜೆ.ಪಿ.ಭವನದಲ್ಲಿ ಬುಧವಾರ ಸಭೆ ನಡೆಸಿದರು.ಈ ವೇಳೆ ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕರು ಈಗಾಗಲೇ ಮೈತ್ರಿ ಇಲ್ಲ ಎಂಬುದಾಗಿ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್‌ ನಾಯಕರ ಹೇಳಿಕೆಗಳನ್ನು ಗಮನಿಸಿದ್ದೇನೆ. ನಮ್ಮ ಪಕ್ಷದ ಅಸ್ತಿತ್ವ ಮತ್ತು ಕಾರ್ಯಕರ್ತರಿಗಾಗಿ ಏಕಾಂಗಿ ಸ್ಪರ್ಧೆ ಮಾಡುತ್ತೇವೆ. ಎರಡು ರಾಷ್ಟ್ರೀಯ ಪಕ್ಷಗಳ ನಡವಳಿಕೆ ಗಮನಿಸಿದ್ದೇವೆ. ರಾಜ್ಯದ ಉಳಿವಿಗಾಗಿ ನಮ್ಮ ಹೋರಾಟ ಇರುತ್ತದೆ. ಯಾವುದೇ ಕಾರಣಕ್ಕೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ತಿಳಿಸಿದರು.

ನರೇಂದ್ರ ಮೋದಿಯೇ ಆಫರ್ ಮಾಡಿದ್ದರು: ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ

ಆರ್‌.ಆರ್‌.ನಗರ ಕ್ಷೇತ್ರದ ಕಾರ್ಯಕರ್ತರು, ಮುಖಂಡರು ಮತ್ತು ಟಿಕೆಟ್‌ ಆಕಾಂಕ್ಷಿಗಳ ಜತೆ ಸಭೆ ನಡೆಸಿ ಮಾಹಿತಿ ಪಡೆದುಕೊಳ್ಳಲಾಗಿದೆ. ಶೀಘ್ರದಲ್ಲಿಯೇ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗುವುದು ಎಂದರು.
 

click me!