ಕುಮಾರಸ್ವಾಮಿ ಆರೋಗ್ಯದಲ್ಲಿ ವ್ಯತ್ಯಯ, ಐದು ದಿನ ವಿಶ್ರಾಂತಿ!

Published : Dec 05, 2019, 09:32 AM ISTUpdated : Dec 05, 2019, 04:20 PM IST
ಕುಮಾರಸ್ವಾಮಿ ಆರೋಗ್ಯದಲ್ಲಿ ವ್ಯತ್ಯಯ, ಐದು ದಿನ ವಿಶ್ರಾಂತಿ!

ಸಾರಾಂಶ

ಎಚ್‌ಡಿಕೆಗೆ ಜ್ವರ, ಕೆಮ್ಮು: ಜಯದೇವದಲ್ಲಿ ಚಿಕಿತ್ಸೆ| ಸತತ ಪ್ರಚಾರದಿಂದಾಗಿ ಆರೋಗ್ಯದಲ್ಲಿ ವ್ಯತ್ಯಯ| 3- 4 ದಿನ ವಿಶ್ರಾಂತಿ, ಕಾರ‍್ಯಕರ್ತರ ಭೇಟಿ ಇಲ್ಲ

ಬೆಂಗಳೂರು[ಡಿ.05]: ಉಪಚುನಾವಣೆ ಹಿನ್ನೆಲೆಯಲ್ಲಿ ಸತತವಾಗಿ ಪ್ರಚಾರದಲ್ಲಿ ತೊಡಗಿದ್ದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದಿದ್ದು, ಜ್ವರದಿಂದ ಬಳಲಿದ ಅವರು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಮನೆಗೆ ಹಿಂತಿರುಗಿದ್ದಾರೆ.

ಜ್ವರ ಮತ್ತು ಕೆಮ್ಮಿನಿಂದ ಬಳಲಿದ ಕುಮಾರಸ್ವಾಮಿ ಅವರು ಜಯದೇವ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡರು. ವೈದ್ಯಕೀಯ ಪರೀಕ್ಷೆ ಮಾಡಿದ ವೈದ್ಯರು ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ. ನಿರಂತರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ಕಾರಣ ವಾತಾವರಣ ಬದಲಾಗಿ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿದೆ. 3-4 ದಿನ ವಿಶ್ರಾಂತಿ ಪಡೆದುಕೊಂಡರೆ ಆರೋಗ್ಯ ಸುಧಾರಿಸಲಿದೆ ಎಂದು ವೈದ್ಯರು ಹೇಳಿದ್ದಾರೆ.

ಬಿಜೆಪಿ, ಅನರ್ಹರ ವಿರುದ್ಧ ಆರೋಪಗಳ ಪಟ್ಟಿ ರಿಲೀಸ್ ಮಾಡಿದ HDK: ಪಟ್ಟಿಯಲ್ಲೇನಿದೆ.?

ಜೆ.ಪಿ.ನಗರದಲ್ಲಿನ ನಿವಾಸದಲ್ಲಿ ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿಯಲ್ಲಿದ್ದಾರೆ. ಕೆಲವು ದಿನಗಳ ಮಟ್ಟಿಗೆ ಕಾರ್ಯಕರ್ತರು ಹಾಗೂ ನಾಯಕರನ್ನು ಭೇಟಿ ಮಾಡದಿರಲು ನಿರ್ಧರಿಸಿದ್ದಾರೆ. ಉಪಚುನಾವಣೆ ಫಲಿತಾಂಶದ ಬಳಿಕ ರಾಜಕೀಯ ಚಟುವಟಿಕೆ ಗರಿಗೆದರಲಿದ್ದು, ನಂತರ ರಾಜಕೀಯ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯತ್ನಾಳ್ ಭಾಷಣಕ್ಕೆ ಟಾಂಗ್ ಕೊಡಲು ಹೋಗಿ ಯಡವಟ್ಟು ಮಾಡಿಕೊಂಡ ಸಚಿವ ಸಂತೋಷ್ ಲಾಡ್!
ಸವಣೂರು ಘಟನೆ ಕಾಂಗ್ರೆಸ್ ಓಲೈಕೆ ರಾಜಕಾರಣದ ಪ್ರತಿಬಿಂಬ, ರಾಜ್ಯದಲ್ಲಿ ಪೊಲೀಸರ ನಿಷ್ಕ್ರಿಯತೆ ಬಗ್ಗೆಯೂ ಸಂಸದ ಬೊಮ್ಮಾಯಿ ಕಿಡಿ