ಇಡೀ ದೇಶ ಕೊರೋನಾದಿಂದ ಪಾರಾಗಲು ಇನ್ನಿಲ್ಲದ ಕಸರತ್ತು ನಡೆಸಿದೆ. ಇದರ ಮಧ್ಯೆ ಕೆಲವು ಬಿಜೆಪಿ ನಾಯಕರು ಮಾತ್ರ ಸರ್ಕಾರದ ಸಾಮಗ್ರಿಗಳ ಮೇಲೆ ತಮ್ಮ ಫೋಟೋ ಮುದ್ರಿಸುವ ಮೂಲಕ ಪ್ರಚಾರ ಗಿಟ್ಟಿಸಿಕೊಳ್ಳುವಲ್ಲಿ ಬ್ಯುಸಿಯಾಗಿದ್ದಾರೆ. ಇದನ್ನು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ, ಪ್ರಚಾರಪ್ರಿಯರಿಗೆ ಮಂಗಳಾರತಿ ಮಾಡಿದ್ದಾರೆ.
ಬೆಂಗಳೂರು(ಏ.09): ಕೊರೋನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಬಡವರಿಗೆ ಸರ್ಕಾರ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸುತ್ತಿದೆ. ಆದ್ರೆ, ಕಿಟ್ ಮೇಲೆ ಪಕ್ಷದ ಚಿಹ್ನೆ ತಮ್ಮ ಫೋಟೋಗಳನ್ನು ಹಾಕಿಕೊಂಡು ಬಿಟ್ಟಿ ಪ್ರಚಾರ ಮಾಡಿಕೊಳ್ಳುತ್ತಿರುವುದು ಕಂಡುಬಂದಿದೆ.
ಇನ್ನು ಈ ಬಗ್ಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಸರಣಿ ಟ್ವೀಟ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
undefined
ಮೂವರು ಚಿಕ್ಕ ಮಕ್ಕಳಿಗೆ ಕೊರೋನಾ: ಕರುನಾಡಲ್ಲಿ ಮುಂದುವರಿದ ರುದ್ರ ನರ್ತನ...!
ಒಂದು ಸಮುದಾಯವನ್ನು ಕೊರೋನಾ ಮಹಾಮಾರಿಗೆ ಸಮೀಕರಿಸುವ ಜನರ ಬಗ್ಗೆ ದಿವ್ಯ ಮೌನ ತಳೆದ ಪ್ರಧಾನಿಗಳು ಬಡ ಕಾರ್ಮಿಕರ ಪರಿಹಾರ ಸಾಮಗ್ರಿಯನ್ನು ಕೆಲ ಪ್ರಚಾರಪ್ರಿಯರು ತಮ್ಮ ಫೋಟೋ ಸ್ಟಿಕರ್ ಅಂಟಿಸಿ ನೀಡುವುದಕ್ಕೆ ಸಮ್ಮತಿ ಸೂಚಿಸಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.
ಹಾಗಾದ್ರೆ, ಕುಮಾರಸ್ವಾಮಿ ಅವರು ಟ್ವಿಟ್ಟರ್‌ನಲ್ಲಿ ಪ್ರಚಾರಪ್ರಿಯರಿಗೆ ಹೇಗೆಲ್ಲಾ ಮಂಗಳಾರತಿ ಎತ್ತಿದ್ದಾರೆ ಎನ್ನುವುದನ್ನು ಈ ಕೆಳಗಿನಂತಿದೆ ನೋಡಿ..
ಸಂಕಟದಿಂದ ಹೇಗೆ ಪಾರಾಗುವುದೆಂದು ಇಡೀ ಜಗತ್ತು ಚಿಂತಿಸುತ್ತಿದ್ದರೆ, ಬಿಜೆಪಿಯ ಕೆಲ ನಾಯಕರುಗಳು ಸರಕಾರದ ಪರಿಹಾರ ಸಾಮಗ್ರಿ ಮೇಲೆ ತಮ್ಮ ಫೋಟೋ ಹಾಕಿಕೊಂಡು ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಇದು ನಾಗರಿಕ ಸಮಾಜ ತಲೆ ತಗ್ಗಿಸುವ ಸಂಗತಿ.
1/3 pic.twitter.com/T7AWjrNaK7
ಒಂದು ಸಮುದಾಯವನ್ನು ಕೊರೋನ ಮಹಾಮಾರಿಗೆ ಸಮೀಕರಿಸುವವರ ಬಗ್ಗೆ ದಿವ್ಯ ಮೌನ ತಳೆದ ಪ್ರಧಾನಿಗಳು ಬಡ ಕಾರ್ಮಿಕರ ಪರಿಹಾರ ಸಾಮಗ್ರಿಯನ್ನು ಕೆಲ ಪ್ರಚಾರಪ್ರಿಯರು ತಮ್ಮ ಫೋಟೋ ಸ್ಟಿಕರ್ ಅಂಟಿಸಿ ನೀಡುವುದಕ್ಕೆ ಸಮ್ಮತಿ ಸೂಚಿಸಿದ್ದಾರೆಯೇ?
3/3
Is the PM, who has not said anything so far on his party leaders communalising the virus, okay with some of his party leaders politicising Government's relief materials?
2/3 pic.twitter.com/VSiz1SnyGm