ಸಚಿವಗಿರಿ ಎಂದರೆ ಚಮಚಾಗಿರಿಯಲ್ಲ, ಸತ್ಯದ ಪರ ನಿಲ್ಲುವ ಗಂಡಸ್ತನ ನಿಮಗಿಲ್ಲ: ಪರಮೇಶ್ವರ, ರಾಜಣ್ಣ ವಿರುದ್ಧ ಎಚ್ಡಿಕೆ ಗರಂ!

By Kannadaprabha News  |  First Published Jan 7, 2024, 11:13 AM IST

ವಿಕ್ರಂಸಿಂಹ ಮರ ಕಡಿದಿದ್ದರೆ FIR ನಲ್ಲಿ ಅವರ ಹೆಸರಿಲ್ಲ, ಯಾಕೆ!? ಆ FIR ಪ್ರತಿ ಲಗತ್ತಿಸಿದ್ದೇನೆ. ಅದನ್ನು ನೋಡಿ, ಆಮೇಲೆ ಮಾತನಾಡಿ. ದಲಿತರ ಹೆಸರಿನಲ್ಲಿ ರಾಜಕೀಯ ಬಾಳು ಕಟ್ಟಿಕೊಂಡ ಪರಮೇಶ್ವರ್, ರಾಜಣ್ಣನವರೇ.. ನಿಮ್ಮ ರೋಷಾವೇಷ ಆ ದಲಿತ  ಅಧಿಕಾರಿಯನ್ನು ಅಮಾನತು ಮಾಡುವ ಕ್ಷಣದಲ್ಲಿ ಯಾರ ಬೂಟಿನ ಕೆಳಗೆ ಬಿದ್ದು ಹೊರಳಾಡುತ್ತಿತ್ತು ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.


ಬೆಂಗಳೂರು (ಜ.7): ವಿಕ್ರಂಸಿಂಹ ಮರ ಕಡಿದಿದ್ದರೆ FIR ನಲ್ಲಿ ಅವರ ಹೆಸರಿಲ್ಲ, ಯಾಕೆ!? ಆ FIR ಪ್ರತಿ ಲಗತ್ತಿಸಿದ್ದೇನೆ. ಅದನ್ನು ನೋಡಿ, ಆಮೇಲೆ ಮಾತನಾಡಿ. ದಲಿತರ ಹೆಸರಿನಲ್ಲಿ ರಾಜಕೀಯ ಬಾಳು ಕಟ್ಟಿಕೊಂಡ ಪರಮೇಶ್ವರ್, ರಾಜಣ್ಣನವರೇ.. ನಿಮ್ಮ ರೋಷಾವೇಷ ಆ ದಲಿತ  ಅಧಿಕಾರಿಯನ್ನು ಅಮಾನತು ಮಾಡುವ ಕ್ಷಣದಲ್ಲಿ ಯಾರ ಬೂಟಿನ ಕೆಳಗೆ ಬಿದ್ದು ಹೊರಳಾಡುತ್ತಿತ್ತು ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಕರ್ನಾಟಕದ 'ನೀರೋ'ಗೆ ರಾಜಕೀಯ ಊಳಿಗ ಮಾಡುತ್ತಿರುವ ಗೃಹಮಂತ್ರಿ ಡಾ. ಪರಮೇಶ್ವರ್ ಮತ್ತು ಸಿದ್ದಹಸ್ತರು ಹೇಳಿದ್ದಕ್ಕೆಲ್ಲ 'ಪರಿಪೂರ್ಣ ಸಹಕಾರ' ಕೊಡುವ ಹಾಸನ ಜಿಲ್ಲಾ ಉಸ್ತುವಾರಿ ಕೆಎನ್ ರಾಜಣ್ಣ  ಅವರು ಸಂಸದ ಪ್ರತಾಪ್ ಸಿಂಹ  ಅವರ ಸಹೋದರನ ಪ್ರಕರಣಕ್ಕೆ ಸಂಬಂಧಿಸಿ ನಾನು ಕೊಟ್ಟಿರುವ ಹೇಳಿಕೆಗಳಿಗೆ ನೀಡಿದ ಪ್ರತಿಕ್ರಿಯೆ ಗಮನಿಸಿದ್ದೇನೆ. 

Tap to resize

Latest Videos

ಜನಾಂಗೀಯ ದ್ವೇಷ, ಕೋಮುಗಲಭೆಗೆ ಯತ್ನ; ಪುನೀತ್ ಕೆರೆಹಳ್ಳಿ ವಿರುದ್ಧ ಮತ್ತೊಂದು ಎಫ್‌ಐಆರ್!

ಕುಮಾರಸ್ವಾಮಿ ಏನೇನೋ ಹೇಳುತ್ತಾರೆ, ಅದಕ್ಕೆಲ್ಲ ಉತ್ತರಿಸುವ ಅಗತ್ಯವಿಲ್ಲ ಎಂದು ಜಾರಿಕೊಂಡಿದ್ದಾರೆ ಈ ಸಚಿವರಿಬ್ಬರು. 'ಸಚಿವಗಿರಿ ಎಂದರೆ ಚಮಚಾಗಿರಿ ಅಲ್ಲ' ಅನ್ನುವುದನ್ನು ಇವರು ಅರ್ಥ ಮಾಡಿಕೊಳ್ಳಬೇಕು. ತಪ್ಪಿದರೆ, ಸತ್ಯದ ಪರ ನಿಲ್ಲುವ ಗಂಡಸ್ತನ ನಮಗಿಲ್ಲ ಎಂಬುದನ್ನು ಒಪ್ಪಿಕೊಳ್ಳುವ ನೈತಿಕತೆಯನ್ನಾದರೂ ತೋರಬೇಕು ಎಂದಿದ್ದಾರೆ.

ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಠಾಣೆ ಎದುರು ಬಿಜೆಪಿ ಪ್ರತಿಭಟನೆ: 43 ಮಂದಿ ವಿರುದ್ಧ ಎಫ್ಐಆರ್, ಆರ್ ಅಶೋಕ್ ಎ1 ಆರೋಪಿ!

click me!