ಬಿಜೆಪಿ ಜತೆ ಹೋಗುವ ದಾರಿದ್ರ್ಯ ನಮಗೆ ಬಂದಿಲ್ಲ: ಕುಮಾರಸ್ವಾಮಿ ಸಡ್ಡು

By Kannadaprabha NewsFirst Published Aug 6, 2023, 3:43 AM IST
Highlights

2008ರಿಂದಲೂ ನಡೆಯುತ್ತಿರುವ ನನ್ನ ಹೋರಾಟ ನಿರಂತರವಾಗಿ ಮುಂದುವರೆಯುತ್ತದೆ. ಎರಡು ರಾಷ್ಟ್ರೀಯ ಪಕ್ಷಗಳು ಜೆಡಿಎಸ್‌ ಅನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ದುರ್ಬಳಕೆ ಮಾಡಿಕೊಂಡಿವೆ. ಆದರೆ, ನಾವು ಏಕಾಂಗಿಯಾಗಿ ಹೋರಾಟ ಮಾಡುವ ಶಕ್ತಿಯನ್ನು ಉಳಿಸಿಕೊಂಡಿದ್ದೇವೆ. ರಾಜ್ಯದ ದುಸ್ಥಿತಿಗೆ ಬಿಜೆಪಿ ಮತ್ತು ಕಾಂಗ್ರೆಸ್‌ನದ್ದು ಸಮಪಾಲು ಇದೆ: ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ 

ಬೆಂಗಳೂರು(ಆ.06):  ಬಿಜೆಪಿ ಜತೆ ಹೋಗುವ ದಾರಿದ್ರ್ಯ ನಮಗೆ ಬಂದಿಲ್ಲ. ಸರ್ಕಾರದ ವಿರುದ್ಧ ಹೋರಾಟ ಮಾಡುವಾಗ ಬಿಜೆಪಿ ಜತೆ ಕೈಜೋಡಿಸಿದ್ದೇನೆ ಎಂದ ಮಾತ್ರಕ್ಕೆ ಅವರಿಗೆ ಅಡಿಯಾಳಾಗಲು ಹೋಗಿದ್ದೇನೆ ಎಂದರ್ಥವಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಜೆಡಿಎಸ್‌ ಜತೆ ಹೋಗುವ ದಾರಿದ್ರ್ಯ ಬಂದಿಲ್ಲ ಎಂದು ಮಾಜಿ ಸಚಿವ ಸುನಿಲ್‌ ಕುಮಾರ್‌ ‘ಕನ್ನಡಪ್ರಭ’ಕ್ಕೆ ಮುಖಾಮುಖಿಯಲ್ಲಿ ನೀಡಿದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಸದನದಲ್ಲಿ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಿದ್ದೇನೆ. ಅಲ್ಲಿ ಬಿಜೆಪಿ ಅಧಿಕೃತ ವಿರೋಧ ಪಕ್ಷ. ಕೆಲವೊಮ್ಮೆ ಅವರ ಜತೆ ಸೇರಿ ಹೋರಾಟ ಮಾಡಬೇಕಾಗುತ್ತದೆ. ಹಾಗೆಂದ ಮಾತ್ರಕ್ಕೆ ಯಾರ ಬಳಿಯಲ್ಲೂ ಭಿಕ್ಷೆ ಬೇಡುವ ಪರಿಸ್ಥಿತಿ ಇಲ್ಲ. ನಾನು ಯಾರ ಮನೆಯ ಬಾಗಿಲಿಗೂ ಹೋಗಲ್ಲ. ನಮ್ಮ ರಾಜ್ಯಕ್ಕೆ ಕಾಂಗ್ರೆಸ್‌ ಎಷ್ಟುದ್ರೋಹ ಮಾಡಿದೆಯೋ ಅಷ್ಟೇ ದ್ರೋಹವನ್ನು ಬಿಜೆಪಿ ಸಹ ಮಾಡಿದೆ ಎಂದು ಟೀಕಾಪ್ರಹಾರ ನಡೆಸಿದರು.

Latest Videos

ಕುಮಾರಸ್ವಾಮಿಯನ್ನು ಹಾವಾಡಿಗರಿಗೆ ಹೋಲಿಸಿದ ಸಚಿವ ಕೆ.ಎನ್. ರಾಜಣ್ಣ: ಜೇಬಲ್ಲಿರೋದನ್ನ ಆಚೆ ಬಿಡಿ

2008ರಿಂದಲೂ ನಡೆಯುತ್ತಿರುವ ನನ್ನ ಹೋರಾಟ ನಿರಂತರವಾಗಿ ಮುಂದುವರೆಯುತ್ತದೆ. ಎರಡು ರಾಷ್ಟ್ರೀಯ ಪಕ್ಷಗಳು ಜೆಡಿಎಸ್‌ ಅನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ದುರ್ಬಳಕೆ ಮಾಡಿಕೊಂಡಿವೆ. ಆದರೆ, ನಾವು ಏಕಾಂಗಿಯಾಗಿ ಹೋರಾಟ ಮಾಡುವ ಶಕ್ತಿಯನ್ನು ಉಳಿಸಿಕೊಂಡಿದ್ದೇವೆ. ರಾಜ್ಯದ ದುಸ್ಥಿತಿಗೆ ಬಿಜೆಪಿ ಮತ್ತು ಕಾಂಗ್ರೆಸ್‌ನದ್ದು ಸಮಪಾಲು ಇದೆ ಎಂದು ಕಿಡಿಕಾರಿದರು.

click me!