
ಬೆಂಗಳೂರು(ಫೆ.24): ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಭಿಕ್ಷುಕರ ರಾಜ್ಯವನ್ನಾಗಿ ಮಾಡಲು ಹೊರಟಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕರ್ನಾಟಕವು ಸಂಪದ್ಭರಿತ ರಾಜ್ಯವಾಗಿದ್ದು, ಹಣದ ಕೊರತೆ ಇಲ್ಲ. ರಸ್ತೆ ತೆರಿಗೆ ಸಂಗ್ರಹದಲ್ಲಿ ರಾಜ್ಯವು ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ. ತೆರಿಗೆ ಸಂಗ್ರಹದಲ್ಲಿ ಮುಂಚೂಣಿಯಲ್ಲಿದ್ದೇವೆ. ಕಾಂಗ್ರೆಸ್ಸಿಗರ ಲೂಟಿಯ ದಾಹಕ್ಕೆ ರಾಜ್ಯದ ಖಜಾನೆಯನ್ನು ಖಾಲಿ ಮಾಡಲಾಗುತ್ತಿದೆ ಎಂದು ಹರಿಹಾಯ್ದರು.
ಗ್ಯಾರಂಟಿಯಿಂದಾಗಿ ಖಜಾನೆ ಖಾಲಿಯಾಗುವುದಿಲ್ಲ. ಅವರ ಸ್ವೇಚ್ಛಾಚಾರದಿಂದ ಖಾಲಿಯಾಗುತ್ತಿದೆ. ಕೇಂದ್ರ ಸರ್ಕಾರವನ್ನು ಪದೇ ಪದೇ ಕೆದಕಿಕೊಂಡು ಹೋಗುತ್ತಿದ್ದಾರೆ. ಸದನದಲ್ಲಿ ಅಮ್ಮ, ತಾಯಿ ಆರು ಸಾವಿರ ಕೋಟಿ ರು. ಎಂದು ಕೇಳಿ ರಾಜ್ಯದ ಜನತೆಗೆ ಅವಮಾನ ಮಾಡಲಾಗುತ್ತಿದೆ. ಇದು ಮುಖ್ಯಮಂತ್ರಿಗೆ ಶೋಭೆ ತರುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.