
ಬೆಂಗಳೂರು(ಏ.27): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು 150 ಸ್ಥಾನ ಕಾಂಗ್ರೆಸ್‌ಗೆ ಬರಲಿದ್ದು, ರಕ್ತದಲ್ಲಿ ಬರೆದುಕೊಡುತ್ತೇನೆ ಎಂದಿರುವುದನ್ನು ಗಮನಿಸಿದ್ದೇನೆ. ಅವರು ರಕ್ತದಲ್ಲಿ ಬರೆದುಕೊಡುವುದು ಬೇಡ. ಅವರಿಗೆ ರಕ್ತದ ಕೊರತೆಯಾಗಲಿದೆ ಎಂದು ಎಚ್.ಡಿ.ಕುಮಾರಸ್ವಾಮಿ ಟಾಂಗ್ ನೀಡಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜಗದೀಶ್ ಶೆಟ್ಟರ್ ಸೋಲುತ್ತಾರೆ ಎಂದು ರಕ್ತದಲ್ಲಿ ಬರೆದುಕೊಡುತ್ತೇನೆ ಎಂದಿದ್ದಾರೆ. ಯಾವ ನಾಯಕರು ರಕ್ತದ ಕೊರತೆ ಮಾಡಿಕೊಳ್ಳುವುದು ಬೇಡ. ರಕ್ತದಲ್ಲಿ ಬರೆದು ಕೊಡುವುದು ಮುಖ್ಯವಲ್ಲ, ಜನರ ಮತ ನೀಡುವುದು ಮುಖ್ಯ ಎಂದರು.
ಯಾರನ್ನೋ ಸೋಲಿಸಲು ನಾನು ಇಲ್ಲಿಗೆ ಪ್ರಚಾರಕ್ಕೆ ಬಂದಿಲ್ಲ; ಎಚ್‌ಡಿಕೆ
ಸೋಮಣ್ಣ ವಿರುದ್ಧ ಕಿಡಿ ಎಚ್‌ಡಿಕೆ ಕಿಡಿ
ಜೆಡಿಎಸ್ ಅಭ್ಯರ್ಥಿಗೆ ಆಮಿಷವೊಡ್ಡಿರುವ ವಸತಿ ಸಚಿವ ವಿ.ಸೋಮಣ್ಣ ವೈಖರಿ ಬಗ್ಗೆ ಕಟುವಾಗಿ ಟೀಕಿಸಿದ ಕುಮಾರಸ್ವಾಮಿ, ಸೋಮಣ್ಣ ಅವರ ಭಾಷೆ ನಮಗೆ ಗೊತ್ತಿಲ್ಲ. ಕಾಂಗ್ರೆಸ್ ನಾಯಕರು ನೋಡಿದರೆ, ಬಿಜೆಪಿ ಶವಯಾತ್ರೆ ಎನ್ನುತ್ತಾರೆ. ಇವರು ನೋಡಿದರೆ ಗೂಟದ ಕಾರು ಎನ್ನುತ್ತಾರೆ. ಇವರು ಯಾವ ಗೂಟದ ಕಾರ್ ಕೊಡುತ್ತಾರೆ ಎನ್ನುವುದು ಗೊತ್ತಿಲ್ಲ. ಇವೆಲ್ಲ ಈಗ ವರ್ಕ್ ಆಗುವುದಿಲ್ಲ. ಸೋಮಣ್ಣ ಬಳಸಿದ ಭಾಷೆ ನಮಗೆ ಗೊತ್ತಿಲ್ಲ. ರಾಷ್ಟ್ರೀಯ ಪಕ್ಷಗಳಿಗೆ ಆತಂಕ ಶುರುವಾಗಿದೆ. ಅವರ ಇವತ್ತಿನ ಸ್ಥಿತಿ ನೋಡಿದರೆ ನಮಗೆ ಅರ್ಥವಾಗುತ್ತದೆ. ಜೆಡಿಎಸ್ ಈ ಬಾರಿ ಎರಡು ರಾಷ್ಟ್ರೀಯ ಪಕ್ಷಗಳಿಗಿಂತ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.