ಯುವ​ಕನ ಹತ್ಯೆಗೆ ಬಿಜೆಪಿಯ ಅಸ​ಹಿ​ಷ್ಣು​ತೆಯೇ ಕಾರಣ: ಎಚ್‌.ಡಿ.ಕುಮಾ​ರ​ಸ್ವಾಮಿ

Published : Apr 03, 2023, 03:40 AM IST
ಯುವ​ಕನ ಹತ್ಯೆಗೆ ಬಿಜೆಪಿಯ ಅಸ​ಹಿ​ಷ್ಣು​ತೆಯೇ ಕಾರಣ: ಎಚ್‌.ಡಿ.ಕುಮಾ​ರ​ಸ್ವಾಮಿ

ಸಾರಾಂಶ

ಕನಕಪುರ ತಾಲೂಕಿನ ಸಾತನೂರು ಬಳಿ ಜಾನುವಾರು ಸಾಗಣೆ ಮಾಡುತ್ತಿದ್ದ ಕಾರಣಕ್ಕೆ ಯುವಕನೊಬ್ಬ ಹತ್ಯೆಗೀಡಾಗಿರುವುದು ಸರ್ವಜನಾಂಗದ ಶಾಂತಿಯ ತೋಟವಾದ ಕರ್ನಾಟಕದಲ್ಲಿ ಕಳೆದ ಮೂರೂವರೆ ವರ್ಷದಲ್ಲಿ ಬಿಜೆಪಿ ನೇತೃ​ತ್ವದ ಸರ್ಕಾರ ವ್ಯವಸ್ಥಿತವಾಗಿ ಬೆಳೆಸಿ ಪೋಷಿಸಿರುವ ಅಸಹನೆ, ಅಸಹಿಷ್ಣುತೆಯೇ ಕಾರಣ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾ​ರ​ಸ್ವಾಮಿ ಟೀಕಿ​ಸಿ​ದ್ದಾರೆ. 

ರಾಮ​ನ​ಗ​ರ (ಏ.03): ಕನಕಪುರ ತಾಲೂಕಿನ ಸಾತನೂರು ಬಳಿ ಜಾನುವಾರು ಸಾಗಣೆ ಮಾಡುತ್ತಿದ್ದ ಕಾರಣಕ್ಕೆ ಯುವಕನೊಬ್ಬ ಹತ್ಯೆಗೀಡಾಗಿರುವುದು ಸರ್ವಜನಾಂಗದ ಶಾಂತಿಯ ತೋಟವಾದ ಕರ್ನಾಟಕದಲ್ಲಿ ಕಳೆದ ಮೂರೂವರೆ ವರ್ಷದಲ್ಲಿ ಬಿಜೆಪಿ ನೇತೃ​ತ್ವದ ಸರ್ಕಾರ ವ್ಯವಸ್ಥಿತವಾಗಿ ಬೆಳೆಸಿ ಪೋಷಿಸಿರುವ ಅಸಹನೆ, ಅಸಹಿಷ್ಣುತೆಯೇ ಕಾರಣ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾ​ರ​ಸ್ವಾಮಿ ಟೀಕಿ​ಸಿ​ದ್ದಾರೆ. ಈ ಕುರಿತು ಸರಣಿ ಟ್ವೀಟ್‌ಗಳನ್ನು ಮಾಡಿ​ರುವ ಅವರು, ಜಾನುವಾರು ಸಾಗಿಸುತ್ತಿದ್ದಾನೆ ಎಂದರೆ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಬಹುದಿತ್ತು ಅಥವಾ ಮಾಹಿತಿ ನೀಡಬಹುದಿತ್ತು. 

ಅದರ ಹೊರತಾಗಿ ಹತ್ಯೆ ಮಾಡುವುದು ಎಂದರೆ ಅರ್ಥವೇನು? ಚುನಾವಣೆ ಹೊತ್ತಿನಲ್ಲಿ ಇದರ ಹಿಂದಿರುವ ಷಡ್ಯಂತ್ರ ಎಂತದ್ದು ಎಂದು ಯಾರಿಗಾದರೂ ಅರ್ಥ ಆಗುವಂತದ್ದೇ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಎಲ್ಲಿಗೆ ಬಂದು ನಿಂತಿದೆ ಎಂದು ಪ್ರಶ್ನಿ​ಸಿ​ದ್ದಾರೆ. ಯುವಕನ ಕೊಲೆಯಾದ ರಾತ್ರಿ ಆರೋಪಿ ಮತ್ತವನ ಸಹಚರರು ರಸ್ತೆಯಲ್ಲಿ ಕ್ರಿಕೆಚ್‌ ಬ್ಯಾಟುಗಳನ್ನು ಹಿಡಿದು ಗೋ ರಕ್ಷಕನ ಸೋಗು ಹಾಕಿಕೊಂಡು ಪಹರೆ ಕಾಯುವ ನಾಟಕದ ವಿಡಿಯೋ ಮಾಡಿ ತನ್ನ ಜಾಲತಾಣದಲ್ಲಿಯೇ ಹಾಕಿಕೊಂಡಿದ್ದಾನೆ. ಅವರ ಉದ್ದೇಶವೇ ಬೇರೆ ಇತ್ತು ಎನ್ನುವುದು ಸ್ಪಷ್ಟ. ಇದಕ್ಕಿಂತ ಸಾಕ್ಷಿ ಬೇಕೆ? ಕೂಡಲೇ ಪೊಲೀಸರು ಆರೋಪಿಗಳನ್ನು ಬಂಧಿಸಬೇಕು.

ಬೆಳಗಾವಿ ಜಿಲ್ಲೆಯ 10 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು ನಿಶ್ಚಿತ: ಸತೀಶ್‌ ಜಾರಕಿಹೊಳಿ

ರಾತ್ರಿ ಹೊತ್ತು ಇವರು ರಸ್ತೆಯಲ್ಲಿ ಕ್ರಿಕೆಚ್‌ ಬ್ಯಾಟುಗಳನ್ನಿಡಿದುಕೊಂಡು ಗಸ್ತು ತಿರುಗುತ್ತಿದ್ದರು ಎಂದರೆ, ಇವರಿಗೆ ಪೊಲೀಸರ ಮೌನ ಅನುಮತಿ ಇತ್ತಾ? ಇಲ್ಲವೇ, ಇವರೇನು ಮಫ್ತಿ ಪೊಲೀಸರಾ? ಅಥವಾ ಗೋರಕ್ಷಣೆ ನೆಪದಲ್ಲಿ ದರೋಡೆಗೆ ಹೊಂಚು ಹಾಕಿ ಕೂತಿದ್ದರಾ? ಈ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ ಎಂದಿ​ದ್ದಾರೆ. ನಿಜಕ್ಕಾದರೆ, ಗೋ ಸಂಕ್ಷಣೆ ಸೋಗಿನ ಈ ಸೋಗಲಾಡಿಗಳಿಗೆ ಆಶ್ರಯ, ಮೇವು ಇಲ್ಲದೆ ಬೀದಿಪಾಲಾಗಿರುವ ಅನಾಥ ಗೋವುಗಳ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಆದರೆ, ಜಾತಿ ಧರ್ಮಗಳ ನಡುವೆ ಬೆಂಕಿ ಇಟ್ಟು ಚಳಿ ಕಾಯಿಸಿಕೊಳ್ಳುವುದೇ ಇವರ ಜಾಯಮಾನ. ಪೊಲೀಸ್‌ ವ್ಯವಸ್ಥೆ ಗಾಢ ನಿದ್ದೆಯಲ್ಲಿದೆಯಾ?

ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಈ ಘಟನೆ ನಡೆದಿದೆ. ರಾಜ್ಯದಲ್ಲಿ ಕೋಮು ಸೌಹಾರ್ದ ಕದಡಿ ಹಿಂಸಾಚಾರ ಸೃಷ್ಟಿಸುವುದು ಮತ್ತು ಚುನಾವಣೆ ಹೊತ್ತಿನಲ್ಲಿ ಕರ್ನಾಟಕವನ್ನು ಕದಡುವುದೇ ಇವರ ದುರುದ್ದೇಶ ಆಗಿರುವಂತಿದೆ. ನನಗೆ ಈ ಹತ್ಯೆ ಆಘಾತ ಉಂಟು ಮಾಡಿದೆ ಎಂದು ಕುಮಾ​ರ​ಸ್ವಾಮಿ ತಿಳಿ​ಸಿ​ದ್ದಾರೆ.

ರಾಮಸ್ವಾಮಿ ಅವರನ್ನು ನಾನು ಹೊರಗೆ ಹಾಕಿಲ್ಲ: ಪಕ್ಷ ಬಿಟ್ಟ ಶಾಸಕ ಎ.ಟಿ.ರಾಮಸ್ವಾಮಿ ಅವರು ನನ್ನ ಮೇಲೆ ಆರೋಪ ಮಾಡುವುದಕ್ಕೆ ಹಾಸನದ ವಿಚಾರದಲ್ಲಿ ನಾನು ಯಾವುದೇ ನಿರ್ಣಯ ಮಾಡಿಲ್ಲ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ನಾನು ಅವರನ್ನು ಹೊರಗೆ ಹಾಕಿಲ್ಲ. ಎರಡು ವರ್ಷದ ರಾಜಕೀಯ ಹೇಗೆ ನಡೆದಿದೆ ಎಂಬುದನ್ನು ಸೂಕ್ಷ್ಮವಾಗಿ ಗಮನಿಸಿದ್ದೇನೆ. ಘಟನೆಗೆ ಏನಾದರೂ ಕಾರಣ ನೀಡಬೇಕಲ್ಲ, ಅದಕ್ಕೆ ಅವರು ಹಾಗೆ ಹೇಳಿದ್ದಾರೆ. ನಾನು ಅದಕ್ಕೆ ಸಮಜಾಯಿಷಿ ನೀಡುವುದಿಲ್ಲ. ಗುಬ್ಬಿ ಶ್ರೀನಿವಾಸ ಸಹ ಅದೇ ರೀತಿ ಹೇಳಿದರು ಅಲ್ಲವೇ ಎಂದರು.

ಅಭಿವೃದ್ಧಿ ಕಾರ್ಯಗಳಲ್ಲಿ ತಾರತಮ್ಯ ಮಾಡಿಲ್ಲ: ಬಾಲಚಂದ್ರ ಜಾರಕಿಹೊಳಿ

ಚನ್ನಪಟ್ಟಣ ಬಿಟ್ಟರೆ ಬೇರೆ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದಿಲ್ಲ. ಅಲ್ಲಿ ಯಾವ ಪಕ್ಷದಿಂದ ಯಾರು ಅಭ್ಯರ್ಥಿಯಾಗುತ್ತಾರೆ ಎಂಬುದನ್ನು ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಅದು ನನಗೆ ಮುಖ್ಯವಲ್ಲ. ನಾನು ಈಗಾಗಲೇ ಚನ್ನಪಟ್ಟಣದಲ್ಲಿ ನಿಲ್ಲಬೇಕು ಎಂದು ಪಕ್ಷ, ಕಾರ್ಯಕರ್ತರು ತೀರ್ಮಾನ ಮಾಡಿದ್ದಾರೆ. ಬೇರೆ ಕ್ಷೇತ್ರದಲ್ಲಿ ಹೋಗಿ ಅರ್ಜಿ ಹಾಕಿಕೊಳ್ಳುವ ಪ್ರಶ್ನೆ ಇಲ್ಲ ಎಂದು ಸ್ಪಷ್ಟಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್