ಕೇಂದ್ರದ ಕಡೆ ಕೈ ತೋರುವ ಬದಲು ತಮ್ಮ ಕೆಲಸ ಮಾಡಲಿ: ಸಿಎಂಗೆ ಎಚ್‌ಡಿಕೆ ತಿರುಗೇಟು

Published : Nov 08, 2023, 10:03 PM IST
ಕೇಂದ್ರದ ಕಡೆ ಕೈ ತೋರುವ ಬದಲು ತಮ್ಮ ಕೆಲಸ ಮಾಡಲಿ: ಸಿಎಂಗೆ ಎಚ್‌ಡಿಕೆ ತಿರುಗೇಟು

ಸಾರಾಂಶ

ರೈತರ ಹಿತಕ್ಕಾಗಿ ರೈತ ಸಾಂತ್ವನ ಯಾತ್ರೆ ಕೈಗೊಳ್ಳುತ್ತಿದ್ದು, ಆ ಮೂಲಕ ಕೇಂದ್ರ ಸರ್ಕಾರದ ಜೊತೆ ರಾಜ್ಯದ ಪರವಾಗಿ ನಾವು ಧ್ವನಿ ಎತ್ತುವ ಕೆಲಸ ಮಾಡುತ್ತಿದ್ದೇವೆ. ಇವರು ಕೇಂದ್ರದ ಕಡೆ ಕೈ ತೋರುವ ಬದಲು ತಮ್ಮ ಕೆಲಸ ಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿರುಗೇಟು ನೀಡಿದರು. 

ಚನ್ನಪಟ್ಟಣ (ನ.08): ರೈತರ ಹಿತಕ್ಕಾಗಿ ರೈತ ಸಾಂತ್ವನ ಯಾತ್ರೆ ಕೈಗೊಳ್ಳುತ್ತಿದ್ದು, ಆ ಮೂಲಕ ಕೇಂದ್ರ ಸರ್ಕಾರದ ಜೊತೆ ರಾಜ್ಯದ ಪರವಾಗಿ ನಾವು ಧ್ವನಿ ಎತ್ತುವ ಕೆಲಸ ಮಾಡುತ್ತಿದ್ದೇವೆ. ಇವರು ಕೇಂದ್ರದ ಕಡೆ ಕೈ ತೋರುವ ಬದಲು ತಮ್ಮ ಕೆಲಸ ಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿರುಗೇಟು ನೀಡಿದರು. ತಾಲೂಕು ಕಚೇರಿಯಲ್ಲಿ ಇ - ಆಡಳಿತ ತಂತ್ರಾಂಶ ಅನುಷ್ಠಾನ ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಗಮನಿಸಿದ್ದೇನೆ. ನಾನೂ ಕೂಡ ಟ್ವೀಟ್ ಮಾಡಿ ಅವರಿಗೆ ಅಭಿನಂದನೆ ಸಲ್ಲಿಸಿದ್ದೇನೆ. 

ಕೇಂದ್ರ ಸರ್ಕಾರದಿಂದ ಹಣ ಪಡೆಯುವ ಕೆಲಸ ಆಗಬೇಕು. ಸಿದ್ದರಾಮಯ್ಯನವರು ದೇವೇಗೌಡರು ಪ್ರಧಾನಿ ಜೊತೆ ಚೆನ್ನಾಗಿದ್ದಾರೆ. ಈ ಬಗ್ಗೆ ಚರ್ಚೆ ಮಾಡಲಿ ಅಂತ ಹೇಳಿದ್ದಾರೆ. ಕೇಂದ್ರ ಸರ್ಕಾರದ ಜೊತೆ ರಾಜ್ಯದ ಪರವಾಗಿ ನಾವು ಧ್ವನಿ ಎತ್ತುವ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು. ಮುಖ್ಯಮಂತ್ರಿಗಳ ಬ್ರೇಕ್‌ ಫಾಸ್ಟ್ ಮೀಟಿಂಗ್‌ ನಲ್ಲಿ ಜೆಡಿಎಸ್ - ಬಿಜೆಪಿಯವರನ್ನು ಕಾಂಗ್ರೆಸ್‌ ಗೆ ಕರೆತರುವ ಬಗ್ಗೆ ಚರ್ಚೆ ನಡೆದಿದೆ. ಅವರು ನಾಡಿನ ಜನರ ಬಗ್ಗೆ ಚರ್ಚೆ ಮಾಡಲು ಸಭೆ ಮಾಡುವುದಿಲ್ಲ. ಕೇವಲ ಲೋಕಸಭಾ ಚುನಾವಣೆ ಗೆಲ್ಲಲು ಮೀಟಿಂಗ್‌ ಮಾಡುತ್ತಿದ್ದಾರೆ. ಅವರಿಗೆ ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಬೇಕಿಲ್ಲ ಎಂದು ಕಿಡಿಕಾರಿದರು.

ಕಾಂಗ್ರೆಸ್ ವಿರುದ್ಧ ತೆಲಂಗಾಣದಲ್ಲಿ ಪ್ರಚಾರ: ಕೋಡಿಹಳ್ಳಿ ಚಂದ್ರಶೇಖರ್

ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದಾದರೆ ನಮ್ಮ ಬೆಂಬಲವಿದೆ ಎಂದು ನಾನು ವ್ಯಂಗ್ಯ ಮಾಡಿದ್ದೇನೆ ಹೌದು. ಪ್ರತಿನಿತ್ಯ ನೀವು ಬನ್ನಿ, ನೀವು ಬನ್ನಿ ಅಂತ ಎಲ್ಲರನ್ನು ಕರೆಯುತ್ತಿದ್ದಾರೆ. ಮುಖ್ಯಮಂತ್ರಿಗಳೇ ಕನಿಷ್ಠ 50 ಜನರನ್ನಾದರು ಪಕ್ಷಕ್ಕೆ ಕರೆತರಬೇಕೆಂದು ಅವರ ಪಕ್ಷದ ಶಾಸಕರಿಗೆ ಹೇಳಿದ್ದಾರೆ. ಪ್ರತಿ ನಿತ್ಯ ನಮ್ಮ ಶಾಸಕರ ಮನೆ ಮುಂದೆ ಏಕೆ ಹೋಗುತ್ತೀರಾ. ಒಳ್ಳೆಯ ಕೆಲಸ ಮಾಡುವುದಾದರೆ ಎಲ್ಲರನ್ನು ನಾನೇ ಕಳುಹಿಸುತ್ತೇನೆ. ಕರೆದುಕೊಂಡು ಹೋಗುವಂತೆ ಹೇಳಿದ್ದೇನೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಯಾವಾಗ ಆಗುತ್ತಾರೆ ಎಂಬುದನ್ನು ಕಾಂಗ್ರೆಸ್ ನವರು ಹೇಳಬೇಕು ಎಂದರು.

ಲೋಕಸಭೆ ಚುನಾವಣೆ ಮುಗಿದ ಮೇಲೆ ಬಿಜೆಪಿ - ಜೆಡಿಎಸ್ ಈ ರಾಜ್ಯದಲ್ಲಿ ಇರೋದೆ ಇಲ್ಲ ಅಂತ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಪಾರ್ಲಿಮೆಂಟ್ ಚುನಾವಣೆ ಮುಗಿದ ಮೇಲೆ ಈ ರಾಜ್ಯದಲ್ಲಿ ಮಾತ್ರ ಅಲ್ಲ. ಈ ದೇಶದಲ್ಲಿಯೇ ಕಾಂಗ್ರೆಸ್ ಇರುತ್ತಾ ಯೋಚನೆ ಮಾಡಲಿ ಎಂದು ಕುಮಾರಸ್ವಾಮಿ ಟಾಂಗ್‌ ನೀಡಿದರು.

ಎಚ್‌ಡಿಕೆ ಭ್ರಷ್ಚಾಚಾರ ಮಾಡಿಲ್ಲವೆಂದು ಆಣೆ ಮಾಡಲಿ: ಸಚಿವ ಚಲುವರಾಯಸ್ವಾಮಿ

ಅಧಿಕಾರಿ ಹತ್ಯೆಗೆ ಸರ್ಕಾರದ ವೈಫಲ್ಯ: ಈ ಸರ್ಕಾರದಲ್ಲಿ ಅಧಿಕಾರಿಗಳು ಮತ್ತು ಜನಸಾಮಾನ್ಯರಿಗೆ ರಕ್ಷಣೆ ಇಲ್ಲ. ಹಿರಿಯ ಅಧಿಕಾರಿಯನ್ನು ಮನೆಗೆ ಹೋಗಿ ಹತ್ಯೆ ಮಾಡಿದ್ದಾರೆ. ಇಂತಹ ವಾತಾವರಣ ಇದ್ದರೆ ಯಾವ ಅಧಿಕಾರಿ ಪ್ರಾಮಾಣಿಕವಾಗಿ ಕೆಲಸ ಮಾಡಲು ಸಾಧ್ಯ. ಈ ಘಟನೆಗೆ ಸರ್ಕಾರದ ವೈಫಲ್ಯವೇ ಕಾರಣ. ಸರ್ಕಾರ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳು ಸ್ವತಂತ್ರವಾಗಿ ಕೆಲಸ ಮಾಡುವ ವಾತಾವರಣ ಇಲ್ಲ. ವರ್ಗಾವಣೆ ಮಾಡಿ ಹಣ ವಸೂಲಿ ಮಾಡುತ್ತಿದ್ದರೆ ಅಧಿಕಾರಿಗಳು ಪ್ರಾಮಾಣಿಕ ಕೆಲಸ ಮಾಡ್ತಾರೆಯೆ. ಗೃಹ ಇಲಾಖೆ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಕುಮಾರಸ್ವಾಮಿ ದೂರಿದರು. ಮಾಜಿ ಶಾಸಕ ಎ.ಮಂಜುನಾಥ್ , ಜೆಡಿಎಸ್ ಮುಖಂಡರಾದ ಎಚ್ .ಸಿ.ಜಯಮುತ್ತು, ಗೋವಿಂದಹಳ್ಳಿ ನಾಗರಾಜು, ಬೋರ್ ವೆಲ್ ರಾಮಚಂದ್ರು ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ