ಕಾಂಗ್ರೆಸ್ ಪಕ್ಷ ಜಾತಿಗೊಂದು ಡಿಸಿಎಂ ಸ್ಥಾನ ನೀಡುತ್ತಿದೆ: ಎಚ್‌.ಡಿ.ಕುಮಾರಸ್ವಾಮಿ ವ್ಯಂಗ್ಯ

By Govindaraj SFirst Published Jan 12, 2024, 8:37 PM IST
Highlights

ಕಾಂಗ್ರೆಸ್ ಪಕ್ಷ ಯಾರದ್ದೋ ದುಡ್ಡಲ್ಲಿ ಯಲ್ಲಮ್ಮನ ಜಾತ್ರೆ ಮಾಡುತ್ತಿದೆ. ಜಾತಿಗೊಂದು ಡಿಸಿಎಂ ಸ್ಥಾನ ನೀಡುತ್ತಿದೆ ಎಂದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದರು. 

ಚಿಕ್ಕಮಗಳೂರು (ಜ.12): ಕಾಂಗ್ರೆಸ್ ಪಕ್ಷ ಯಾರದ್ದೋ ದುಡ್ಡಲ್ಲಿ ಯಲ್ಲಮ್ಮನ ಜಾತ್ರೆ ಮಾಡುತ್ತಿದೆ. ಜಾತಿಗೊಂದು ಡಿಸಿಎಂ ಸ್ಥಾನ ನೀಡುತ್ತಿದೆ ಎಂದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಗ್ಯಾರಂಟಿ ನೋಡಿಕೊಳ್ಳೋದಕ್ಕೆ ಓರ್ವ ಅಧ್ಯಕ್ಷ, ಅದಕ್ಕೆ ವಾರ್ಷಿಕ 16 ಕೋಟಿ ಖರ್ಚಂತೆ, ಐವರು ಉಪಾಧ್ಯಕ್ಷರಂತೆ ಏನಕ್ಕೆ, ಯಾರದ್ದೋ ದುಡ್ಡಲ್ಲಿ ಯಲ್ಲಮ್ಮನ ಜಾತ್ರೆ ಮಾಡುತ್ತಿದೆ. ಕಾಂಗ್ರೆಸ್ಸಿನ ಸದ್ಯದ ಪರಿಸ್ಥಿತಿ ನನಗೆ ಅರ್ಥವಾಗಿದೆ. ಲೋಕಸಭಾ ಚುನಾವಣೆ ಫಲಿತಾಂಶ ಬಂದ ಬಳಿಕ ಎಲ್ಲವೂ ಗೊತ್ತಾಗುತ್ತದೆ ಎಂದು ಭವಿಷ್ಯ ನುಡಿದರು. ಪಕ್ಷದ ನಾಯಕರ ಸಭೆಯಲ್ಲಿ ಮಂಡ್ಯ ಅಷ್ಟೇ ಅಲ್ಲ. ರಾಜ್ಯ ಹಾಗೂ ಎಲ್ಲಾ ಜಿಲ್ಲೆಗಳ ಬಗ್ಗೆಯೂ ಚರ್ಚೆ ಆಗಿದೆ. 

2 ರಾಜಕೀಯ ಪಕ್ಷಗಳ ಬಿರುಸಿನ ರಾಜಕೀಯ ಬೆಂಗಳೂರಿನಿಂದ ದೆಹಲಿ ತಲುಪಿದೆ. ನಮ್ಮ ಪಕ್ಷದ ಚಟುವಟಿಕೆ 2 ಪಕ್ಷಕ್ಕೂ ಹೋಲಿಸಿದರೆ ನಾವುಗಳು ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಂಡಿದ್ದೇವೆ ಎಂದರು. ಮೈತ್ರಿಯಲ್ಲಿ ನಮ್ಮದು ಎಷ್ಟು ಸ್ಥಾನ, ನಮ್ಮ ಅಭ್ಯರ್ಥಿಗಳ ವಿಶ್ವಾಸ ಅವರು ಹೇಗೆ ಪಡೆಯಬೇಕು, ನಾವು ಅವರ ವಿಶ್ವಾಸ ಹೇಗೆ ಪಡೆಯಬೇಕು ಎಂಬ ಎಲ್ಲಾ ಚರ್ಚೆ ಆಗಿದೆ. ಮಂಡ್ಯ, ಮೈಸೂರು ಹಾಗೂ ಹಾಸನದ ಬಗ್ಗೆಯೂ ಚರ್ಚೆ ಆಗಿದೆ. ಮೈತ್ರಿಗೆ ಇಮೇಜ್ ಇದೆ, ಮೋದಿ ಇಮೇಜ್ ಇದೆ, ರಾಮ ಮಂದಿರ ಉದ್ಘಾಟನೆ ಮುಂಚೂಣಿಯಲ್ಲಿದೆ. ದೇಶದ ಜನರಿಗೆ ಸ್ಥಿರ ಸರ್ಕಾರ ಬರಬೇಕೆಂಬ ಆಶಯವಿದೆ. ಎರಡೂ ಪಕ್ಷಕ್ಕೂ ನಮ್ಮ ಶಕ್ತಿ ಏನೆಂದು ಗೊತ್ತಿದೆ ಎಂದು ಹೇಳಿದರು.

Latest Videos

ಡೈರಿ ಮಿಲ್ಕ್ ಚಾಕಲೇಟ್ ನೀಡಿಕೆ: ಅನ್ಯ ಕೋಮಿನ ಯುವಕನ ಮೇಲೆ ಹಲ್ಲೆ, ದೂರು ಪ್ರತಿ ದೂರು ದಾಖಲು

ಎಚ್‌ಡಿಕೆ ರೆಸಾರ್ಟ್‌ ವಾಸ್ತವ್ಯ: ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಸಮೀಪದ ಮಲ್ಲೇನಹಳ್ಳಿಯಲ್ಲಿರುವ ಹನಿ ಡ್ಯೂ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ರಾತ್ರಿ ಎಚ್.ಡಿ. ಕುಮಾರಸ್ವಾಮಿ ಆಗಮಿಸಿದ್ದು, ಮಂಡ್ಯ ಮಾಜಿ ಸಂಸದ ಪುಟ್ಟರಾಜು ಸೇರಿದಂತೆ ಹಲವು ನಾಯಕರು ಮಂಗಳವಾರ ರಾತ್ರಿಯೇ ಕುಮಾರಸ್ವಾಮಿ ಅವರೊಂದಿಗೆ ರೆಸಾರ್ಟ್‌ಗೆ ಆಗಮಿಸಿದರು. ಬುಧವಾರ ಬೆಳಿಗ್ಗೆ ಮಾಜಿ ಶಾಸಕ‌ ಸಾ.ರಾ. ಮಹೇಶ್, ವಿಧಾನಪರಿಷತ್‌ ಸದಸ್ಯ ಎಸ್‌.ಎಲ್‌. ಭೋಜೇಗೌಡ, ಬಾಲಕೃಷ್ಣ ಅವರು ಭೇಟಿ ನೀಡಿದ್ದರು. ಜೆಡಿಎಸ್‌ ನಾಯಕರು ಬುಧವಾರ ಇಡೀ ದಿನ ರೆಸಾರ್ಟ್‌ನಲ್ಲಿಯೇ ಇದ್ದರು. ಬಿಜೆಪಿಯೊಂದಿಗೆ ಮೈತ್ರಿ ಹಿನ್ನಲೆಯಲ್ಲಿ ಮಂಡ್ಯ ಹಾಗೂ ಮೈಸೂರು ಭಾಗದ ಟಿಕೆಟ್‌ ಕುರಿತು ಪಕ್ಷದ ನಾಯಕರೊಂದಿಗೆ ಚರ್ಚೆ ನಡೆದಿರುವ ಸಾಧ್ಯತೆ ಹೆಚ್ಚಿದೆ.

click me!