Karnataka Politics: ಇಸ್ಪಿಟ್‌ ಸಾಲ ನಾನು ತೀರಿಸ್ಬೇಕಿತ್ತಾ? ಯೋಗೇಶ್ವರ್‌ಗೆ ಎಚ್‌ಡಿಕೆ ಟಾಂಗ್‌

Kannadaprabha News   | Asianet News
Published : Feb 25, 2022, 12:13 PM IST
Karnataka Politics: ಇಸ್ಪಿಟ್‌ ಸಾಲ ನಾನು ತೀರಿಸ್ಬೇಕಿತ್ತಾ? ಯೋಗೇಶ್ವರ್‌ಗೆ ಎಚ್‌ಡಿಕೆ ಟಾಂಗ್‌

ಸಾರಾಂಶ

*  ನಾನು ಅನಾರೋಗ್ಯಕ್ಕೆ ತುತ್ತಾಗುವ ಬಡವರ ಚಿಕಿತ್ಸೆಗೆ ನೆರವು ನೀಡುತ್ತೇನೆ *  ಅಧಿ​ಕಾರಿಗಳನ್ನು ಬೆದರಿಸಿ ಹಣ ವಸೂಲಿ *  ಯೋಗೇಶ್ವರ್‌ ವಿರುದ್ಧ ಎಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ  

ಚನ್ನಪಟ್ಟಣ(ಫೆ.25): ಇಸ್ಪೀಟ್‌ ಆಡಿ ಸಾಲ ಮಾಡಿಕೊಂಡ ಗ್ಯಾಂಬ್ಲರ್‌ಗಳ ಸಾಲವನ್ನು ನಾನು ತೀರಿಸಬೇಕಿತ್ತಾ? ಅಂತಹವರು ಇದೀಗ ನನ್ನ ಪಕ್ಷ ತೊರೆಯುತ್ತಿದ್ದಾರೆ. ಅವರ ಸಾಲವನ್ನು ಅ​ಧಿಕಾರಿಗಳ ವರ್ಗಾವಣೆ ದಂಧೆಯಲ್ಲಿ ಮಾಡಿರುವ ಹಣದಿಂದ ತೀರಿಸುತ್ತಾರಂತೆ ಬಿಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ(HD Kumaraswamy) ಪರೋಕ್ಷವಾಗಿ ಸಿ.ಪಿ.ಯೋಗೇಶ್ವರ್‌(CP Yogeeshwara) ವಿರುದ್ಧ ವಾಗ್ದಾಳಿ ನಡೆಸಿದರು. 

ನಾನು ಅನಾರೋಗ್ಯಕ್ಕೆ ತುತ್ತಾಗುವ ಬಡವರ ಚಿಕಿತ್ಸೆಗೆ ನೆರವು ನೀಡುತ್ತೇನೆ. ಇಂತಹವರ ಸಾಲವನ್ನು ತೀರಿಸುವ ಜವಾಬ್ದಾರಿಯನ್ನು ಪಾಪ ಅವರು ವಹಿಸಿಕೊಂಡಿದ್ದಾರೆ. ನನ್ನ ಸರ್ಕಾರವನ್ನು ಕೆಡವಿದೆ ಎಂದು ಹೇಳಿಕೊಂಡು ಎಂಎಲ್‌ಸಿ ಆದವರು, ತಾಲೂಕಿನ ಕೆಲವು ಅಧಿ​ಕಾರಿಗಳನ್ನು ಬೆದರಿಸಿ ಅವರಿಂದ ಹಣ ವಸೂಲಿ ಮಾಡುತ್ತಿದ್ದಾರೆ ಅಂತ ಹೇಳಿದ್ದಾರೆ.  

Harsha Murder Case : ಕಾರ್ಯಕರ್ತರನ್ನು ರಕ್ಷಿಸಿಕೊಳ್ಳಲಾಗದ ನಿಮ್ಮದೆಂಥಾ ಸರ್ಕಾರ?

ಅಲ್ಲಿಗೆ ವರ್ಗ ಮಾಡಿಸುತ್ತೇನೆ, ಇಲ್ಲಿಗೆ ವರ್ಗ ಮಾಡಿಸುತ್ತೇನೆ ಎಂದು ಅ​ಧಿಕಾರಿಗಳನ್ನು ಹೆದರಿಸಿ ಹಣ ವಸೂಲಿ ಮಾಡುತ್ತಿದ್ದು, ಆ ಹಣದಿಂದ ಮುಖಂಡರನ್ನು ಖರೀದಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. 

ಕಾಂಗ್ರೆಸ್ ಜೊತೆ ಸಮ್ಮಿಶ್ರ ಸರ್ಕಾರದಲ್ಲಿ ಸಿಎಂ ಅಲ್ಲ, ಕ್ಲರ್ಕ್ ಆಗಿದ್ದೆ, ಹೆಚ್‌ಡಿ ಕುಮಾರಸ್ವಾಮಿ!

ಬೆಂಗಳೂರು: ಹಿಂದಿನ ಜೆಡಿಎಸ್‌-ಕಾಂಗ್ರೆಸ್‌(Congress-JDS) ನೇತೃತ್ವದ ಸಮ್ಮಿಶ್ರ ಸರ್ಕಾರದ ಆಡಳಿತ ಅವಧಿಯಲ್ಲಿ ನಾನು ಮುಖ್ಯಮಂತ್ರಿಯಲ್ಲ, ಎಫ್‌ಡಿಸಿ ಕೆಲಸ ಮಾಡಿದ್ದೆ ಅಷ್ಟೇ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದರು.

ಫೆ.18 ರಂದು ಪಕ್ಷದ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ್ದ ಅವರು, ಈ ಬಾರಿಯ ಸದನದಲ್ಲಿ ಕಳೆದ 10 ವರ್ಷಗಳ ಅವಧಿಯಲ್ಲಿ ನಡೆದ ಭ್ರಷ್ಟಾಚಾರಗಳ, ಹಗರಣಗಳ ಬಗ್ಗೆ ಸದನದಲ್ಲಿ ದಾಖಲೆಗಳನ್ನಿಡಲು ತಯಾರಿ ಮಾಡಿಕೊಂಡಿದ್ದೆ. ಆದರೆ, ಸದನವು ಸರಿಯಾಗಿ ನಡೆಯಲೇ ಇಲ್ಲ. 14 ತಿಂಗಳು ಆಡಳಿತ ಮಾಡಿದ್ದು, ಆಗ ಸರಿ ಮಾಡಬಹುದಿತ್ತಲ್ಲ ಎಂದು ಯಾರಾದರೂ ಕೇಳಬಹುದು. ಆದರೆ, ನಾನು ಆಗ ಮುಖ್ಯಮಂತ್ರಿಯಲ್ಲ, ಎಫ್‌ಡಿಸಿ ಕೆಲಸ ಮಾಡಿದ್ದೆ ಅಷ್ಟೇ ಎಂದು ಬೇಸರದಿಂದ ನುಡಿಸಿದ್ದರು. 

Harsha Murder Case: ಹರ್ಷ ಸಾವಿಗೆ ಸರ್ಕಾರದ ವೈಫಲ್ಯವೇ ಕಾರಣ: ಎಚ್‌ಡಿಕೆ

ಪ್ರತಿಷ್ಠೆಗೆ ಬಿದ್ದು ಸಚಿವರ ರಾಜೀನಾಮೆ ಪಡೆಯಲು ಹೊರಟ ಕಾಂಗ್ರೆಸ್‌ ನಡೆಯನ್ನು ಜನ ಗಮನಿಸುತ್ತಿದ್ದಾರೆ. ಕಲಾಪಕ್ಕೆ ಅಡ್ಡಿ ಮಾಡುವವರನ್ನು ಸದನದಿಂದ ಅಮಾನತು ಮಾಡಿ, ನಂತರ ಸದನ ನಡೆಸುವಂತೆ ಸಭಾಧ್ಯಕ್ಷರಿಗೂ ಮನವಿ ಮಾಡುತ್ತೇನೆ. ಕೋವಿಡ್‌ ಅನಾಹುತ ಸಂದರ್ಭದಲ್ಲಿ ಆಗುತ್ತಿರುವ ಮತ್ತೊಂದು ‘ರಾಜಕೀಯ ಕೋವಿಡ್‌ ದುರಂತ’ ಇದು. ಈ ವಿನಾಶಕಾರಿ ಕೋವಿಡ್‌ ಅನ್ನು ಎಲ್ಲಾ ಸೇರಿ ಹರಡಿಸಬೇಡಿ. ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆ ಮಾಡಲು ಸದನಕ್ಕೆ ಬಂದಿದ್ದೇವೆ. ಆದರೆ, ಹಿಜಾಬ್‌(Hijab) ಮತ್ತು ಕೇಸರಿ ಶಾಲು ಎಂದು ಕಲಾಪ ಹಾಳು ಮಾಡಿದರು. ಆಮೇಲೆ ಸಚಿವರ ರಾಷ್ಟ್ರಧ್ವಜದ(National Flag) ಹೇಳಿಕೆ ಇಟ್ಟುಕೊಂಡು ಎರಡು ದಿನಗಳ ಕಾಲ ಕಲಾಪವನ್ನು ಹಾಳುಗೆಡವಿದರು. ಇದನ್ನು ಒಪ್ಪಲು ಸಾಧ್ಯವೇ? ತಪ್ಪು ಎಂದಿದ್ದಕ್ಕೆ ಕಾಂಗ್ರೆಸ್‌ ನಾಯಕರು ಈಗ ಬೇರೆ ರಾಗ ಹಾಡುತ್ತಿದ್ದಾರೆ ಎಂದು ತಿಳಿಸಿದ್ದರು. 

ಕರಾವಳಿಯ ಒಂದು ಭಾಗದಲ್ಲಿ ಶುರುವಾದ ಹಿಜಾಬ್‌ ಗೊಂದಲ ಇತರೆ ಭಾಗದವರಿಗೆ ಪ್ರೇರೇಪಣೆ ಕೊಟ್ಟಂತಾಗಿದೆ. ಆ ಪ್ರದೇಶದ ಕೆಲ ಭಾಗದಲ್ಲಿ ಮಕ್ಕಳು ಹಿಜಾಬ್‌ ಧರಿಸಿ ಶಾಲೆಗೆ ಹೋಗುತ್ತಿದ್ದರು. ತರಗತಿ ಪ್ರವೇಶ ಮಾಡುವ ಸಮಯದಲ್ಲಿ ಹಿಜಾಬ್‌ ತೆಗೆದು ಮನೆಗೆ ಹೋಗುವಾಗ ಮತ್ತೆ ಧರಿಸಿಹೋಗುತ್ತಿದ್ದರು. ಆರಂಭದಲ್ಲಿಯೇ ಚಿವುಟಿ ಹಾಕಬಹುದಾಗಿದ್ದ ವಿವಾದ ಎರಡು ಧರ್ಮದವರ ಸಂಘರ್ಷಕ್ಕೆ ಕಾರಣವಾಗಿದೆ. ಮಕ್ಕಳ ಮನಸ್ಸಲ್ಲಿ ದ್ವೇಷ ಬಿತ್ತಲಾಗಿದೆ. ಕೆಲ ಸಂಘಟನೆಗಳು ಇದನ್ನು ಮತಬ್ಯಾಂಕ್‌(Vote Bank) ಆಗಿ ಪರಿವರ್ತನೆ ಮಾಡಿಕೊಳ್ಳಲು ಪ್ರಯತ್ನ ಮಾಡುತ್ತಿವೆ. ಕಳೆದ ಎರಡು ದಿನಗಳಿಂದ ಎರಡು ಸದನದಲ್ಲಿ ಕಲಾಪಗಳು ಸ್ಥಗಿತಗೊಳಿಸುವ ಹಾಗೆ ಕಾಂಗ್ರೆಸ್‌ ನಡವಳಿಕೆ ಇದೆ. ಜನರು ಇದನ್ನು ಕ್ಷಮಿಸುವುದಿಲ್ಲ ಎಂದು ಹೇಳಿದ್ದರು. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!