ಕಳೆದ ವಿಧಾನಸಭೆ ಚುನಾವಣೆಯಲ್ಲಿ ಒಳ ಒಪ್ಪಂದದ ರಾಜಕೀಯದ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಮಾತನಾಡಿರುವ ಬಗ್ಗೆ ಸರ್ಕಾರ ತನಿಖೆ ಮಾಡಿಸುತ್ತದೆಯೇ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಬೆಂಗಳೂರು (ಜೂ.11): ಕಳೆದ ವಿಧಾನಸಭೆ ಚುನಾವಣೆಯಲ್ಲಿ ಒಳ ಒಪ್ಪಂದದ ರಾಜಕೀಯದ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಮಾತನಾಡಿರುವ ಬಗ್ಗೆ ಸರ್ಕಾರ ತನಿಖೆ ಮಾಡಿಸುತ್ತದೆಯೇ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಹಿಂದಿನ ಸರ್ಕಾರದ ಎಲ್ಲ ತೀರ್ಮಾನಗಳನ್ನು ಈಗಿನ ಸರ್ಕಾರ ತನಿಖೆ ನಡೆಸುವುದಾಗಿ ಹೇಳುತ್ತಿದೆ. ಹಾಗಾದರೆ ಚುನಾವಣೆ ಒಳ ಒಪ್ಪಂದದ ಬಗ್ಗೆಯೂ ತನಿಖೆ ಮಾಡಿಸಬೇಕಲ್ಲವೇ? ಸಿ.ಟಿ.ರವಿ ಅವರು ಕಾಂಗ್ರೆಸ್ ಮತ್ತು ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದೆ ಎಂದಿದ್ದಾರೆ.
ಹಾಗಾಗಿ ಯಾರ ಜತೆ ಒಪ್ಪಂದ ಮಾಡಿಕೊಂಡಿದ್ದೀರಿ. ಇದರ ಬಗ್ಗೆ ತನಿಖೆ ಮಾಡುತ್ತೀರಾ ಎಂದು ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಿದರು. ಪಕ್ಷದ ಸಂಘಟನೆ ದೃಷ್ಟಿಯಿಂದ ಬೆಂಗಳೂರು ಮಹಾನಗರದ ಮುಖಂಡರ ಸಭೆಯನ್ನು ನಡೆಸಲಾಗಿದೆ. ಯುವಕರಿಗೆ ಶಕ್ತಿ ತುಂಬುವ ಕೆಲಸ ಮಾಡಲಾಗುತ್ತಿದೆ. ಪಕ್ಷದ ಸಂಘಟನೆಯಲ್ಲಿ ಭಾಗಿಯಾಗದವರನ್ನು ಪಕ್ಷದಿಂದ ತೆಗೆಯುತ್ತೇವೆ. ಅರ್ಹತೆ ಆಧಾರದ ಮತ್ತು ಸಮುದಾಯದ ಆಧಾರದ ಮೇಲೆ ನಾನು ಅಧಿಕಾರ ಹೊಣೆಗಾರಿಕೆ ನೀಡುತ್ತೇವೆ ಎಂದರು.
ಉನ್ನತ ಶಿಕ್ಷಣಕ್ಕೆ ಹೊಸ ರೂಪ, ಉದ್ಯೋಗಾಧಾರಿತ ಪಠ್ಯಕ್ರಮ ಅಳವಡಿಕೆ: ಸಚಿವ ಸುಧಾಕರ್
ಕಾಂಗ್ರೆಸ್‌ನದು 45 ಪರ್ಸೆಂಟ್ ಸರ್ಕಾರ: ಬಿಜೆಪಿ ಸರ್ಕಾರ ಅವಧಿಯಲ್ಲಿ ನಡೆದ 675 ಕೋಟಿ ರು ಮೊತ್ತದ ಕಾಮಗಾರಿಗಳಿಗೆ ಎಲ್‌ಒಸಿ (ಲೆಟರ್ ಆಫ್ ಕ್ರೆಡಿಟ್) ಬಿಡುಗಡೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಶೇ.5ರಷ್ಟುಪರ್ಸೆಂಟೇಜ್ ಕೇಳುತ್ತಿದ್ದು, ಹಿಂದಿನ 40 ಪರ್ಸೆಂಟ್ ಜೊತೆಗೆ ಹೆಚ್ಚುವರಿಯಾಗಿ 5 ಪರ್ಸೆಂಟ್ ಕೊಟ್ಟರೆ ಎಲ್‌ಒಸಿ ಬಿಡುಗಡೆ ಮಾಡುವುದಾಗಿ ಹೇಳುವ ಮೂಲಕ ಈ ಸರ್ಕಾರ ಶೇ. 45 ಪರ್ಸೆಂಟ್ ಸರ್ಕಾರ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿ ಸರ್ಕಾರವನ್ನು 40 ಪರ್ಸೆಂಟ್ ಸರ್ಕಾರ ಎಂದು ಟೀಕಿಸುತ್ತಿದ್ದ ಕಾಂಗ್ರೆಸ್, ಈಗ ಅಧಿಕಾರಕ್ಕೆ ಬಂದ ಮೇಲೆ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಮಾಡುತ್ತಿದೆ. ಹಿಂದಿನ ಸರ್ಕಾರದಲ್ಲಿ ಕೈಗೊಳ್ಳಲಾಗಿದ್ದ ಕಾಮಗಾರಿಗಳಿಗೆ ಎಲ್‌ಒಸಿ ಕೊಡುವುದಕ್ಕೆ ಈ ಸರ್ಕಾರದಲ್ಲಿ ಶೇ.5ರಷ್ಟುಫಿಕ್ಸ್ ಮಾಡಿದ್ದಾರೆ. ಇಂತಹವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರ ಬಂದ ಪ್ರಾರಂಭದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅಧಿಕಾರಿಗಳಿಗೆ ಯಾವ ರೀತಿ ಪಾಠ ಮಾಡಿದ್ದಾರೆ ಇವರು ಎನ್ನುವ ಮಾಹಿತಿ ತಮಗಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಅವರು ಕೆಲವು ಸೂಚನೆಗಳನ್ನು ಕೊಟ್ಟಿದ್ದಾರೆ. ನಾವು ಹೇಳಿದಂತೆ ಮಾತ್ರ ಕೇಳಬೇಕು ಎಂಬ ಫರ್ಮಾನು ಹೊರಡಿಸಿದ್ದಾರೆ. ಇದರ ಅರ್ಥ ಏನೆಂದರೆ, ನಮಗೆ ಬೇಕಾದ ಹಾಗೆ ಕೆಲಸ ಮಾಡಿ, ಇಲ್ಲವೇ ಹೊರಡಿ ಎನ್ನುವುದೇ ಈ ಫರ್ಮಾನಿನ ಒಳಾರ್ಥ ಎಂದರು.
ಕಾಂಗ್ರೆಸ್ ಗ್ಯಾರಂಟಿಗೆ ಚಾಲನೆ ನೀಡಲು ಮಧ್ಯಪ್ರದೇಶದಿಂದ ಬರ್ತಾರೆ ಡಿಕೆಶಿ
ಹಿಂದಿನ ಟೆಂಡರ್‌ಗಳು ಸೇರಿದಂತೆ ಅನೇಕ ಕಡೆ ಅನುದಾನ ತಡೆ ಹಿಡಿಯಲಾಗಿದೆ. ಬಿಜೆಪಿ ಸರ್ಕಾರ 600 ಕೋಟಿ ರು.ಗಿಂತ ಹೆಚ್ಚು ಮೊತ್ತದ ಕಾಮಗಾರಿಗಳಿಗೆ ಕಾರ್ಯಾದೇಶ ನೀಡಿತ್ತು. ಕಳೆದ ಮೇ 6ರಂದು 675 ಕೋಟಿ ರು. ಮೊತ್ತದ ಕಾಮಗಾರಿಗಳ ಗುತ್ತಿಗೆದಾರರಿಗೆ ಎಲ್‌ಒಸಿ ಬಿಡುಗಡೆಗೆ ಕಾರ್ಯಾದೇಶ ಆಯಿತು. ಆ ಸಂದರ್ಭದಲ್ಲಿ ಒಬ್ಬ ಕಾಂಗ್ರೆಸ್ ಸಂಸದರೊಬ್ಬರು ಯಾವುದೇ ಕಾರಣಕ್ಕೂ ಹಣ ಬಿಡುಗಡೆ ಮಾಡಬೇಡಿ, ನಮ್ಮ ಸರ್ಕಾರ ಬರುತ್ತದೆ ಎಂದು ಹೇಳಿದ್ದರಂತೆ ಅವರು. ಯಾಕೆ ಹೇಳಿದ್ದರು, ಯಾರು ಆ ಎಂಪಿ ಯಾರು ಎಂದು ಪ್ರಶ್ನಿಸಿದರು.