
ಬೆಂಗಳೂರು(ಮೇ.11): ಪಕ್ಷಕ್ಕೆ ಡ್ಯಾಮೇಜ್ ಮಾಡಿದರೆ ಅಥವಾ ನಮ್ಮ ತಂಟೆಗೆ ಬಂದಲ್ಲಿ ಅವರೇ ಬೀದಿಪಾಲಾಗಲಿದ್ದು, ಅದಕ್ಕೆ ಸಾಕಷ್ಟು ಉದಾಹರಣೆಗಳಿವೆ ಎಂದು ಸ್ವಪಕ್ಷೀಯ ಅಸಮಾಧಾನಿತ ಮುಖಂಡರ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ(HD Kumaraswamy) ಕಿಡಿಕಾರಿದ್ದಾರೆ.
ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಿಂದ ಬೆಳೆದ ಕೆಲವರು ಪಕ್ಷಕ್ಕೆ ಡ್ಯಾಮೇಜ್ ಮಾಡುತ್ತಿದ್ದಾರೆ. ಪಕ್ಷಕ್ಕೆ ಹಾನಿ ಮಾಡಲು ಹೋದವರೇ ಬೀದಿಪಾಲಾಗುತ್ತಾರೆ. ಅದಕ್ಕೆ ಹಲವು ಉದಾಹರಣೆಗಳಿವೆ. ಬಿ.ಎಲ್.ಶಂಕರ್(BL Shankar) ಅವರು ಕಾಂಗ್ರೆಸ್(Congress) ಹೋಗಿ ಏನಾದರು? 20 ವರ್ಷವಾಯಿತು, ಅಲ್ಲಿ ಏನಾಗಿದ್ದಾರೆ? ಪಕ್ಷಕ್ಕೆ ಯಾರೂ ಅನಿವಾರ್ಯವಲ್ಲ, ಪಕ್ಷವೇ ಹೊಸ ನಾಯಕತ್ವವನ್ನು ಹುಟ್ಟು ಹಾಕಲಿದೆ ಎಂದು ತಿಳಿಸಿದರು.
Karnataka Politics: ಟಿಕೆಟ್ ಕೊಟ್ಟೆ, ಟೋಪಿ ಹಾಕಿ ಹೋದ: ಕುಮಾರಸ್ವಾಮಿ
ಕಾಂಗ್ರೆಸ್ ಮತ್ತು ಬಿಜೆಪಿಗೆ(BJP) ನಮ್ಮ ಜೆಡಿಎಸ್(JDS) ಬಗ್ಗೆ ಭಯ ಇದೆ. ಅದೇ ಕಾರಣಕ್ಕಾಗಿ ನಮ್ಮ ಪಕ್ಷವನ್ನು ಮುಗಿಸುವ ಗುರಿಯನ್ನಾಗಿಸಿಕೊಂಡಿವೆ. ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಪ್ರಬಲವಾಗಿದ್ದು, ಅಲ್ಲಿ ದುರ್ಬಲಗೊಳಿಸುವ ಪ್ರಯತ್ನ ಮಾಡಲಾಗುತ್ತಿದೆ. ಆದರೆ, ಅದು ಸಾಧ್ಯವಿಲ್ಲ ಎಂದು ಹೇಳಿದ ಅವರು, ಎಲ್ಲಿ ಕುಟುಂಬ ರಾಜಕಾರಣ ಇಲ್ಲ ಹೇಳಿ? ಎಲ್ಲಾ ಪಕ್ಷದಲ್ಲಿಯೂ ಕುಟುಂಬ ರಾಜಕಾರಣ ಇದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar) ಕುಟುಂಬದಲ್ಲಿ ಬೇರೆ ಯಾರೂ ರಾಜಕೀಯದಲ್ಲಿ ಇಲ್ಲವೇ? ಶಾಸಕ ಸತೀಶ್ ಜಾರಕಿಹೊಳಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ(BS Yediyurappa) ಸೇರಿದಂತೆ ಇತರೆ ಕುಟುಂಬದವರಲ್ಲಿ ಇಲ್ಲವೇ? ಎಲ್ಲರಿಗೂ ನಮ್ಮ ಕುಟುಂಬದ ಮೇಲೆಯೇ ಕಣ್ಣು ಎಂದು ತಿರುಗೇಟು ನೀಡಿದರು.
ಎರಡೂ ರಾಷ್ಟ್ರೀಯ ಪಕ್ಷಗಳ ಅಜೆಂಡಾ ನಮ್ಮ ಪಕ್ಷವನ್ನು ಮುಗಿಸುವುದಾಗಿದೆ. ಪಕ್ಷವನ್ನು ಉಳಿಸಲು ನಾವು ಹಲವು ಸಲ ತಲೆ ಕೊಟ್ಟಿದ್ದೇವೆ. ಜೆಡಿಎಸ್ ಅನ್ನು ಮುಗಿಸುವ ಅಜೆಂಡಾದಿಂದಾಗಿಯೇ ನಮ್ಮ ಪಕ್ಷದವರನ್ನು ಸೆಳೆಯುತ್ತಿದ್ದಾರೆ. ನಾಯಕರು ಹೋದರೆ ಸಾಕಾಗುವುದಿಲ್ಲ, ಕಾರ್ಯಕರ್ತರು ಹೋಗಬೇಕಲ್ಲವೇ ಎಂದು ಹೇಳಿದರು.
ನೆಲಮಂಗಲ ಬಳಿ JDS ಬೃಹತ್ ಸಮಾವೇಶ, HDK ಸ್ಥಳ ಪರಿಶೀಲನೆ
ಮರಿತಿಬ್ಬೇಗೌಡ ಚುನಾವಣಾ ಖರ್ಚು ಪಕ್ಷದಿಂದ:
ಜೆಡಿಎಸ್‌ನಲ್ಲಿ ಹಣ ಇದ್ದವರಿಗೆ ಮಣೆ ಹಾಕಲಾಗುತ್ತಿದೆ ಎಂಬ ಮೇಲ್ಮನೆ ಸದಸ್ಯ ಮರಿತಿಬ್ಬೇಗೌಡ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ನಮ್ಮ ಪಕ್ಷಕ್ಕೆ ಅವರು ಎಷ್ಟು ಹಣ ಸಂದಾಯ ಮಾಡಿದ್ದಾರೆ? ನಮ್ಮ ಪಕ್ಷದ ಅಭ್ಯರ್ಥಿಯಾಗಿದ್ದಾಗ ಎಷ್ಟು ಹಣ ನೀಡಿದ್ದಾರೆ? ಯಾವ ನಾಯಕರಿಗೆ ಹಣ ಸಂದಾಯ ಮಾಡಿದ್ದರು? ಅವರು ಹಣವನ್ನು ಕುಮಾರಸ್ವಾಮಿಗೆ ಕೊಟ್ಟರೋ? ದೇವೇಗೌಡರಿಗೆ ಕೊಟ್ಟರೋ ಅಥವಾ ಜನತಾದಳದ ಅಕೌಂಟ್‌ಗೆ ನೀಡಿದ್ದಾರೋ ಎಂಬುದನ್ನು ಹೇಳಬೇಕು ಎಂದು ಇದೇ ವೇಳೆ ಕುಮಾರಸ್ವಾಮಿ ಟಾಂಗ್ ಕೊಟ್ಟರು.
ಮರಿತಿಬ್ಬೇಗೌಡ ಅವರ ಚುನಾವಣಾ ಖರ್ಚು ವೆಚ್ಚಕ್ಕೆ ಪಕ್ಷದಿಂದ ಎಷ್ಟು ಕೊಟ್ಟಿದ್ದೇವೆ ಎಂಬುದರ ಬಗ್ಗೆ ಅವರು ಸತ್ಯ ಹೇಳುತ್ತಾರಾ? ಈ ರೀತಿಯ ಕ್ಷುಲ್ಲಕವಾದ ಹೇಳಿಕೆಗಳ ಬಗ್ಗೆ ಜನರೇ ತೀರ್ಮಾನಿಸುತ್ತಾರೆ ಎಂದ ಅವರು, ನಿಖಿಲ್ ಕುಮಾರಸ್ವಾಮಿ ಅವರು ಮಂಡ್ಯ ಜಿಲ್ಲೆಯ ಎಂಟು ಶಾಸಕರ ಒತ್ತಾಯಕ್ಕೆ ತಲೆಬಾಗಿ ಕಣಕ್ಕಿಳಿದರು. ಸುಮ್ಮನೇ ಬಾಯಿಗೆ ಬಂದಂತೆ ಮಾತನಾಡುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.