ಅರಣ್ಯ ಇಲಾಖೆ ಅಕ್ರಮಗಳ ದಾಖಲೆ ನೀಡುವೆ, ತನಿಖೆ ನಡೆಸುವ ತಾಕತ್ತು ಖಂಡ್ರೆಗೆ ಇದೆಯಾ?: ಎಚ್‌ಡಿಕೆ ಸವಾಲು

Published : Jan 09, 2024, 04:00 AM IST
ಅರಣ್ಯ ಇಲಾಖೆ ಅಕ್ರಮಗಳ ದಾಖಲೆ ನೀಡುವೆ, ತನಿಖೆ ನಡೆಸುವ ತಾಕತ್ತು ಖಂಡ್ರೆಗೆ ಇದೆಯಾ?: ಎಚ್‌ಡಿಕೆ ಸವಾಲು

ಸಾರಾಂಶ

ರಾಜ್ಯದ ಅರಣ್ಯ ಇಲಾಖೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಮಾಹಿತಿ, ದಾಖಲೆಗಳನ್ನು ನೀಡುತ್ತೇನೆ. ತನಿಖೆ ಮಾಡುವ ದಮ್ಮು, ತಾಕತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಇದೆಯಾ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಬೆಂಗಳೂರು (ಜ.09): ರಾಜ್ಯದ ಅರಣ್ಯ ಇಲಾಖೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಮಾಹಿತಿ, ದಾಖಲೆಗಳನ್ನು ನೀಡುತ್ತೇನೆ. ತನಿಖೆ ಮಾಡುವ ದಮ್ಮು, ತಾಕತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಇದೆಯಾ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ತರೀಕೆರೆಯಲ್ಲಿ ಅರಣ್ಯದಲ್ಲಿ ಮರಗಳನ್ನು ಕಡಿದ ಪ್ರಕರಣದಲ್ಲಿ ಸರ್ಕಾರದ ಅಧಿಕಾರಿಗಳೇ ಎಷ್ಟು ಜನ ಶಾಮೀಲಾಗಿದ್ದಾರೆ? ಕಡಿದ ಆ ಮರಗಳಲ್ಲಿ ಅರ್ಧ ಭಾಗದಷ್ಟು ಮರಗಳು ಯಾವ ಶಾಸಕನ ಮನೆಗೆ ಹೋಯಿತು? ಮನೆ ಕಟ್ಟುತ್ತಿದ್ದ ಶಾಸಕನ ಮನೆಗೆ ಮರಗಳು ಹೋಗಿವೆ. ಈ ಬಗ್ಗೆ ಸಚಿವರಿಗೆ ಗೊತ್ತಿಲ್ಲವೇ? ಎಂದು ಕಟುವಾಗಿ ಪ್ರಶ್ನಿಸಿದರು.

ನಾನು ದಾಖಲೆ ಇಲ್ಲದೆ ಮಾತಾಡಲ್ಲ. ಆ ಶಾಸಕ ಯಾರು ಎಂಬುದನ್ನು ಈಶ್ವರ್ ಖಂಡ್ರೆ ಅವರನ್ನೇ ಕೇಳಬಹುದು. ಮರ ಕಡಿಯುವವರಿಗೆ ಕುಮಾರಸ್ವಾಮಿ ಬೆಂಬಲ ಕೊಡುತ್ತಿದ್ದಾರೆ ಎಂಬುದಾಗಿ ಸಚಿವರು ಹೇಳಿದ್ದಾರೆ. ನಾನು ಮರ ಕಡಿಯುವವರಿಗಾಗಲಿ, ಅಕ್ರಮ ಚಟುವಟಿಕೆ ಮಾಡುವವರಿಗಾಗಲಿ ಬೆಂಬಲ ಕೊಡುವವನಲ್ಲ. ಬಹುಶಃ ಈಶ್ವರ್ ಖಂಡ್ರೆಗೆ ಮಾಹಿತಿ ಸರಿಯಾಗಿ ಇಲ್ಲ ಎಂದು ತಿರುಗೇಟು ನೀಡಿದರು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವರೇ ಕರೆದ ಸಭೆಯಲ್ಲಿ 40 ಜನ ಅಧಿಕಾರಿಗಳು ಇದ್ದರು. 5 ಜನ ಅಧಿಕಾರಿಗಳನ್ನು ಅಮಾನತು ಮಾಡಿರುವ ವಿಚಾರವಾಗಿ ಹಿರಿಯ ಅಧಿಕಾರಿಗಳು ಏನು ಸಲಹೆ ಕೊಟ್ಟರು? ವಿಕ್ರಮ್ ಸಿಂಹ ಮೇಲೆ ಎಫ್‌ಐಆರ್‌ ಹಾಕೇ ಇಲ್ಲ. 

ಶ್ರೀಕಾಂತ್‌ ಪೂಜಾರಿ ಹೆಸರಲ್ಲಿ ಬಿಜೆಪಿ ರಾಜಕೀಯ: ಸಚಿವ ದಿನೇಶ ಗುಂಡೂರಾವ್‌

ವಿಕ್ರಮ್ ಸಿಂಹರನ್ನ ಯಾಕೆ ಬಂಧಿಸಲಾಗಿದೆ? ಯಾಕೆ ಮ್ಯಾಜಿಸ್ಟ್ರೇಟ್ ಮುಂದೆ ನಿಲ್ಲಿಸಿದರು? ನ್ಯಾಯಾಲಯ ಏನು ಹೇಳಿತು? ಇದಕ್ಕಿಂತಲೂ ಅತ್ಯಂತ ಗಂಭೀರ ಪ್ರಕರಣ ಕೊಡಲು ಸಿದ್ದ. ಈಶ್ವರ್ ಖಂಡ್ರೆ ಕ್ರಮ ಕೈಗೊಳ್ಳುತ್ತಾರಾ ಎಂದು ಆಕ್ರೊಶ ವ್ಯಕ್ತಪಡಿಸಿದರು. ವಿರಾಜಪೇಟೆಯಲ್ಲಿ ರೋಸ್ ವುಡ್, ಟೀಕ್ ವುಡ್ ಕದ್ದು ಎರಡು ವರ್ಷಗಳಿಂದ ಸಾಗಾಣಿಕೆ ಮಾಡಲಾಗುತ್ತಿದೆ. ಕಳೆದ ಆಗಸ್ಟ್ ನಲ್ಲಿ ಹಿರಿಯ ಅಧಿಕಾರಿಗಳು ಈ ಪ್ರಕರಣದ ಬಗ್ಗೆ ಮಾಹಿತಿ ಕೊಟ್ಟಿದ್ದರು. ಆ ಪ್ರಕರಣದಲ್ಲಿ ಇದ್ದ ಎಲ್ಲಾ ದಾಖಲೆಗಳು ಕಾಣೆಯಾಗಿವೆ, ಈ ಬಗ್ಗೆ ಈಶ್ವರ್ ಖಂಡ್ರೆ ಅವರು ಯಾಕೆ ಕ್ರಮ ತೆಗೆದುಕೊಂಡಿಲ್ಲ? ವಿಕ್ರಮ್ ಸಿಂಹ ಪ್ರಕರಣದಲ್ಲಿ 12 ದಿನಗಳಲ್ಲಿ ಕ್ರಮ ಆಗಿದೆ. ವಿರಾಜಪೇಟೆ ಪ್ರಕರಣದ ಬಗ್ಗೆ ಮೌನ ಯಾಕೆ ಎಂದು ಕಿಡಿಕಾರಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್