ಸ್ವಾತಂತ್ರ್ಯಕ್ಕೆ ಸೋಗಲಾಡಿ ಸಿದ್ದರಾಮಯ್ಯ ಕೊಡುಗೆ ಏನು?: ಎಚ್‌ಡಿಕೆ ಕಿಡಿ

By Kannadaprabha NewsFirst Published Aug 9, 2022, 6:58 AM IST
Highlights

1947ರಲ್ಲಿ ಜನಿಸಿದ ತಕ್ಷಣ ಪಂಚೆ ಕಟ್ಟಿ ಸಂಗ್ರಾಮಕ್ಕೆ ಧುಮುಕಿದಿರಾ?: ಕುಮಾರಸ್ವಾಮಿ

ಬೆಂಗಳೂರು(ಆ.09):  ‘ಮಾಜಿ ಮುಖ್ಯಮಂತ್ರಿಗಳು, ಸ್ವಯಂ ಘೋಷಿತ ಸಂವಿಧಾನ ರಕ್ಷಕ ಸಿದ್ದರಾಮಯ್ಯ ಮತ್ತೆ ಜೆಡಿಎಸ್‌ ಬಗ್ಗೆ ವಿಷ ಕಾರಿಕೊಂಡಿದ್ದಾರೆ. ಜೆಡಿಎಸ್‌ ಸ್ವಾತಂತ್ರ್ಯ ಹೋರಾಟಕ್ಕೆ ನೀಡಿದ ಕೊಡುಗೆ ಏನು ಎಂದು ಅವರು ಪ್ರಶ್ನಿಸಿದ್ದಾರೆ. ನಮ್ಮ ಪಕ್ಷದ್ದು ಇರಲಿ, ಸ್ವಾತಂತ್ರ್ಯ ಹೋರಾಟಕ್ಕೆ ಈ ಸೋಗಲಾಡಿ ಸಿದ್ದಸೂತ್ರದಾರನ ಕೊಡುಗೆ ಏನು’ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಈ ಕುರಿತು ಸೋಮವಾರ ಟ್ವೀಟ್‌ ಮಾಡಿರುವ ಅವರು, ‘ವಿಕಿಪೀಡಿಯಾ ಪ್ರಕಾರ ನಿಮ್ಮ ಜನ್ಮವರ್ಷ 1947. ಹುಟ್ಟಿದ ಕೂಡಲೇ ಪಂಚೆ ಕಟ್ಟಿಸ್ವಾತಂತ್ರ್ಯ ಸಂಗ್ರಾಮಕ್ಕೆ ಧುಮುಕಿದರಾ ಮಿಸ್ಟರ್‌ ಸಿದ್ದರಾಮಯ್ಯ? ಜೆಡಿಎಸ್‌ ಸ್ಥಾಪನೆಯಾಗಿದ್ದೇ 1999ರಲ್ಲಿ. ಆಗ ನೀವು ಎಲ್ಲಿದ್ದಿರಿ? 2006ರಲ್ಲಿ ಕಾಂಗ್ರೆಸ್‌ಗೆ ಸೇರಿದರು. ಆ ಪಕ್ಷದ ಪೂರ್ವಾಪರ ಬಗ್ಗೆ ಮಾತನಾಡಲು ಏನು ನೈತಿಕತೆ ಇದೆ? ಗೆದ್ದಲು ಕಟ್ಟಿಕೊಂಡ ಹುತ್ತಕ್ಕೆ ಹಾವಿನಂತೆ ಸೇರಿಕೊಂಡ ಅವರು ಸ್ವಾರ್ಥ ಬೀಜಾಸುರ. ಆ ಪಕ್ಷದ ಮೂಲ ನಾಯಕರನ್ನೆಲ್ಲಾ ನುಂಗುತ್ತಿರುವ ನಿಮ್ಮ ಬಕಾಸುರ ಬಾಯಲ್ಲಿ ಸ್ವಾತಂತ್ರ್ಯ ಹೋರಾಟದ ಪಾರಾಯಣವೇ?’ ಎಂದು ಲೇವಡಿ ಮಾಡಿದ್ದಾರೆ.

 

ಸ್ವಯಂಘೋಷಿತ ಸಂವಿಧಾನ ರಕ್ಷಕ ಸಿದ್ದರಾಮಯ್ಯ ಮತ್ತೆ ಬಗ್ಗೆ ವಿಷ ಕಾರಿಕೊಂಡಿದ್ದಾರೆ. ಜೆಡಿಎಸ್ ಪಕ್ಷ ಸ್ವಾತಂತ್ರ್ಯ ಹೋರಾಟಕ್ಕೆ ನೀಡಿದ ಕೊಡುಗೆ ಏನು ಎಂದು ಅವರು ಪ್ರಶ್ನಿಸಿದ್ದಾರೆ.
ನಮ್ಮ ಪಕ್ಷದ್ದು ಇರಲಿ, ಸ್ವಾತಂತ್ರ್ಯ ಹೋರಾಟಕ್ಕೆ ಈ ಸೋಗಲಾಡಿ ಸಿದ್ದಸೂತ್ರದಾರನ ಕೊಡುಗೆ ಏನು? 1/14

— H D Kumaraswamy (@hd_kumaraswamy)

ನಾನು ಕೈ ಎತ್ತಿಸಿಕೊಂಡು ಹಾಕಿಸಿಕೊಳ್ಳಲಿಲ್ಲವೇ, ಸಿದ್ದು-ಡಿಕೆಶಿಗೆ ತಿವಿದ ಕುಮಾರಸ್ವಾಮಿ

‘ಅಧಿಕಾರಕ್ಕಾಗಿ ದೀನ ದಿಲಿತರು, ಅಲ್ಪಸಂಖ್ಯಾತರ ಹೆಸರು ಬಳಸಿಕೊಂಡು, ಹಾದಿಬೀದಿಯಲ್ಲಿ ಹೈಡ್ರಾಮಾ ಆಡಿ ಕಾಂಗ್ರೆಸ್‌ ಪಕ್ಷಕ್ಕೆ ವಕ್ಕರಿಸಿಕೊಂಡ ಅವರಿಗೆ ಸ್ವಾತಂತ್ರ್ಯ ಹೋರಾಟದ ಬಗ್ಗೆ ಮಾತನಾಡುವ ನೈತಿಕ ಹಕ್ಕಿದೆಯಾ? ಖಂಡಿತಾ ಇಲ್ಲ. ನೀವು ಹೇಳಿದ ಕಾಂಗ್ರೆಸ್‌ ಈಗೆಲ್ಲಿದೆ? ನೀವು ಕದ್ದಮಾಲು ಹ್ಯೂಬ್ಲೆಟ್‌ ವಾಚು ಕಟ್ಟಿದಾಗಲೇ 1947ರ ಕಾಂಗ್ರೆಸ್‌ಗೆ ಸಮಾಧಿ ಕಟ್ಟಿದಿರಿ. ಐದು ವರ್ಷಗಳ ನಿಮ್ಮ ಆಡಳಿತದಲ್ಲಿ ಆ ನತದೃಷ್ಟಕಾಂಗ್ರೆಸ್‌ ಪಕ್ಷಕ್ಕೆ ಎಷ್ಟುಸಾವಿನ ಮೊಳೆ ಹೊಡೆದಿರಿ, ಲೆಕ್ಕ ಹೇಳಬೇಕೇ ಮಿಸ್ಟರ್‌ ಸಿದ್ದರಾಮಯ್ಯ’ ಎಂದು ಟೀಕಾಪ್ರಹಾರ ನಡೆಸಿದ್ದಾರೆ.

‘ಜೆಡಿಎಸ್‌ ಇನ್ನೊಂದು ಪಕ್ಷದ ಬಳಿ ಬೆಂಕಿ ಕಾಯಿಸಿಕೊಳ್ಳುವ ಪಕ್ಷ ಎಂದಿದ್ದಾರೆ. ಆದರೆ, ಅವರನ್ನು ನಂಬಿದ್ದಕ್ಕೆ ನಮ್ಮ ಪಕ್ಷಕ್ಕೆ ಅವರೇ ಬೆಂಕಿ ಹಾಕಿದ್ದು ಮರೆತರಾ? ಬಿಜೆಪಿ ಜತೆ ಒಳ ಒಪ್ಪಂದ ಮಾಡಿಕೊಂಡು ಆಪ್ತರನ್ನೆಲ್ಲ ಮುಂಬೈಗೆ ಸಾಗಹಾಕಿದ ಕತ್ತಲ ಕಿತಾಪತಿ ಮಾಡಿದ್ದು ಯಾರು? ಇಷ್ಟಕ್ಕೂ ತಾವೇನೂ ಮೂಲ ಕಾಂಗ್ರೆಸ್ಸಿಗರಲ್ಲ. ವಲಸೆ ಹೋಗಿ, ವಿಷಹುಳವಾಗಿ ಅಲ್ಲಿಗೆ ಕರೆದುಕೊಂಡು ಹೋದವರ ಕೈ ಕಚ್ಚಿದ್ದು, ಆಮೇಲೆ ನಿಮ್ಮಿಂದ ಆ ಪಕ್ಷ ಬಿಟ್ಟು ಹೋದವರ ಪಟ್ಟಿಹನುಮನ ಬಾಳದಂತೆ ಬೆಳೆದದ್ದು ಗೊತ್ತಿಲ್ಲವೇ?’ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.
 

click me!