ಗ್ರಾಪಂ ಚುನಾವಣೆ ಎದುರಿನಲ್ಲಿ HDKಯಿಂದ ಬಿಜೆಪಿ ನಾಯಕರಿಗೆ ಅದ್ಭುತ ಸಲಹೆ

Published : Dec 03, 2020, 04:51 PM ISTUpdated : Dec 03, 2020, 04:53 PM IST
ಗ್ರಾಪಂ ಚುನಾವಣೆ ಎದುರಿನಲ್ಲಿ HDKಯಿಂದ ಬಿಜೆಪಿ ನಾಯಕರಿಗೆ ಅದ್ಭುತ ಸಲಹೆ

ಸಾರಾಂಶ

ಗ್ರಾಮ ಪಂಚಾಯಿತಿ ಚುನಾವಣೆ ಸಂದರ್ಭ ಸರ್ಕಾರಕ್ಕೆ ಮುಖ್ಯ ಸಲಹೆ ಕೊಟ್ಟ ಕುಮಾರಸ್ವಾಮಿ/ ನೆರೆಯಿಂದ ಸಂಕಷ್ಟಕ್ಕೆ ಒಳಗಾದ ಜನರ ಕಷ್ಟ ಆಲಿಸಿ/ ಬಿಜೆಪಿ ನಾಯಕರಿಗೆ ಕುಮಾರಸ್ವಾಮಿ ಸಲಹೆ

ಬೆಂಗಳೂರು(ಡಿ.  03)   ಉತ್ತರ ಕರ್ನಾಟಕದಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳಿಗೆ ಮಾಜಿ ಸಿಎಂ ಕುಮಾರಸ್ವಾಮಿ ಒಂದಿಷ್ಟು ಕಟುವಾದ ಸಲಹೆ ನೀಡಿದ್ದಾರೆ.

ಉತ್ತರ ಕರ್ನಾಟಕದಲ್ಲಿ ನಡೆಯುತ್ತಿರುವ ಗ್ರಾಮ ಸ್ವರಾಜ್ಯ ಕಾರ್ಯಕ್ರಮಗಳು ನೆರೆ ಪೀಡಿತ ಗ್ರಾಮಗಳನ್ನು ಕೇಂದ್ರೀಕರಿಸುವುದು ಅಗತ್ಯ. ಬಿಜೆಪಿ ನಾಯಕರು ಆ ಗ್ರಾಮಗಳಿಗೆ ಭೇಟಿ ನೀಡಲಿ. ಅಲ್ಲಿನ ಸಮಸ್ಯೆಗಳು, ಮನೆಗಳನ್ನು ಕಳೆದುಕೊಂಡ ನಿರಾಶ್ರಿತರ ಪರದಾಟ, ದುಃಖ ದುಮ್ಮಾನಗಳನ್ನು ಕಣ್ಣಾರೆ ಕಂಡು ಅವರಿಗೆ ಪರಿಹಾರ ಒದಗಿಸಬೇಕೆಂದು ಬಯಸುತ್ತೇನೆ ಎಂದಿದ್ದಾರೆ.

'ಗ್ರಾಮ ಸ್ವರಾಜ್ಯ' ಸಮಾವೇಶಗಳು ಕೇವಲ ಪಕ್ಷ ಸಂಘಟನೆಗಷ್ಟೇ ಸೀಮಿತವಾದರೆ ಅದು ಸ್ವಾರ್ಥವಾಗುತ್ತದೆ. ಗ್ರಾಮಗಳನ್ನು ಸಶಕ್ತಗೊಳಿಸಲು ಈ ಕಾರ್ಯಕ್ರಮವನ್ನು ಬಿಜೆಪಿ ಬಳಸಿಕೊಂಡಿದ್ದೇ ಆದರೆ, ಗ್ರಾಮ ಸ್ವರಾಜ್ಯದ ಹೆಸರಿಗೆ ಅರ್ಥ ಸಿಗುತ್ತದೆ. ಹಳ್ಳಿ ಜನರಲ್ಲಿ ವಿಶ್ವಾಸ ಮೂಡುತ್ತದೆ ಎಂಬುದು ನನ್ನ ಅನಿಸಿಕೆ. ಈ ನಿಟ್ಟಿನಲ್ಲಿ ಸರ್ಕಾರ ಚಿಂತಿಸಲಿ ಎಂದು ಸಲಹೆ ನೀಡಿದ್ದಾರೆ.

'ದೇವೇಗೌಡರು ಯುಟರ್ನ್ ಹೊಡೆದ್ರಾ, ಕುಮಾರಸ್ವಾಮಿ ಹೀಗೆ ಅಂದಿದ್ದು ಯಾಕೆ?

ಬಿಜೆಪಿಯ ಗ್ರಾಮಸ್ವರಾಜ್ಯ ಎಂಬುದು ಸಂಘಟನೆ ಉದ್ದೇಶದ ಸಮಾವೇಶವಾದರೂ, ಅವುಗಳನ್ನು ಹಳ್ಳಿಗಳ ಹಂತಕ್ಕೆ ಕೊಂಡೊಯ್ಯಬೇಕು ಎಂದು ನಾನು ಒತ್ತಾಯಿಸುತ್ತೇನೆ. ಆಮೂಲಕವಾದರೂ ನಮ್ಮ ಹಳ್ಳಿಗಳ ಜ್ವಲಂತ ಸಮಸ್ಯೆಗಳು ಬಿಜೆಪಿ ಸಚಿವರು, ಶಾಸಕರು ಮತ್ತು ಸರ್ಕಾರದ ಅರಿವಿಗೆ ಬರಲಿ. ಹಾಗಾದರೂ ಹಳ್ಳಿ ಜನರ ಸಮಸ್ಯೆಗಳು ಶಾಶ್ವತವಾಗಿ ನೀಗಲಿ ಎಂದು ಆಶಿಸುತ್ತೇನೆ.

ಗ್ರಾಮ ಪಂಚಾಯ್ತಿ ಚುನಾವಣೆಗಾಗಿ ಬಿಜೆಪಿ 'ಗ್ರಾಮ ಸ್ವರಾಜ್ಯ' ಸಮಾವೇಶಗಳನ್ನು ನಡೆಸುತ್ತಿದೆ. ಗಾಂಧೀಜಿ ಪರಿಕಲ್ಪನೆಗೆ ಬಿಜೆಪಿ ಮನ್ನಣೆಕೊಟ್ಟಿದ್ದು ಸಂತೋಷದಾಯಕ. ಸಂಘಟನೆ ಉದ್ದೇಶದ ಈ ಸಮಾವೇಶಗಳು ಗ್ರಾಮಗಳನ್ನು ವಿಶ್ವಾಸಕ್ಕೆ ಪಡೆಯುಲು, ಸಮಸ್ಯೆಗಳನ್ನು ಪರಿಹರಿಸಲು ಬಳಕೆಯಾಗಲಿ. ಈ ಮೂಲಕ ಗ್ರಾಮ ಸ್ವರಾಜ್ಯದ ನಿಜ ಉದ್ದೇಶ ಸಾಕಾರವಾಗಲಿ ಎಂದು  ಮಾಜಿ ಸಿಎಂ ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?