
ಬೆಂಗಳೂರು(ಏ.02): ಸಹೋದರರು (ಡಿ.ಕೆ.ಶಿವಕುಮಾರ್ ಸಹೋದರರು) ಏನು ಸೇವೆ ಮಾಡುತ್ತಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಗಿ ಹೇಳಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಅಣ್ಣ-ತಮ್ಮ ಇರುವುದು ರಾಮನಗರ ಜನರ ಸೇವೆ ಮಾಡಲು ಎಂಬ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದರು.
ಬೆಂಗಳೂರಿನಲ್ಲಿ ಫ್ಲಾಟ್ ಪ್ಲಾನ್ ಮಂಜೂರಾತಿಗೆ ಪ್ರತೀ ಚದರ ಅಡಿಗೆ 100 ರು. ನಿಗದಿ ಮಾಡಿರುವುದು ಸೇವೆ ಅಲ್ಲವೇ? ಎಲ್ಲರಿಗೂ ಧಮ್ಕಿ ಹಾಕೋದು ಒಂದು ಸೇವೆ. ಅದನ್ನೆ ತಾನೇ ಮಾಡುತ್ತಿದ್ದಾರೆ ಎಂದು ಹೇಳಿದರು.
ಸೇವೆ ಮಾಡುತ್ತಿದ್ದಾರೋ ಅಥವಾ ರಾಜ್ಯವನ್ನು ಯಾವ ಪರಿಸ್ಥಿತಿಗೆ ತೆಗೆದುಕೊಂಡು ಹೋಗುತ್ತಿದ್ದಾರೋ ಮುಂದಿನ ದಿನಗಳಲ್ಲಿ ಗೊತ್ತಾಗುತ್ತದೆ. ನಾವು ನಿದ್ದೆ ಮಾಡೋಕೆ ಬಂದಿದ್ದೀವಾ? ಅವರು ಮಾತ್ರವಾ ಸೇವೆ ಮಾಡೋದಾ? ಪಂಚಾಯತಿ ಸದಸ್ಯರ ರೀತಿ ಕೆಲಸ ಮಾಡುತ್ತಾರಂತೆ..! ಹಾಗಾದರೆ, ಪಂಚಾಯತಿ ಸದಸ್ಯರು ಯಾಕೆ? ಇವರು ಅಲ್ಲಿ ಹೋಗಿ ಕೈ ಹಾಕಿದರೆ ಪಂಚಾಯತಿ ಸದಸ್ಯರು ಏನು ಮಾಡಬೇಕು ಎಂದು ತಿರುಗೇಟು ನೀಡಿದರು.
ಮೊದಲು ಬಾಯಿಗೆ ಬಂದಂಗೆ ಬೈತಿದ್ದ ಸಿದ್ದರಾಮಯ್ಯ ಈಗ ಸೋನಿಯಾ ಮುಂದೆ ನಡು ಬಗ್ಗಿಸಿ ನಿಲ್ತಾರೆ: ಎಚ್‌ಡಿ ಕುಮಾರಸ್ವಾಮಿ
ನಾನು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತೇನೆ. ಕನಕಪುರ, ರಾಮನಗರ, ಚನ್ನಪಟ್ಟಣ, ಕುಣಿಗಲ್‌ನಲ್ಲಿ ಪ್ರವಾಸ ಮಾಡುವೆ. ತುಮಕೂರು, ಚಾಮರಾಜನಗರ, ಮೈಸೂರು ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ 14 ಕಡೆ ಪ್ರಚಾರ ನಡೆಸುತ್ತೇನೆ. ಕರಾವಳಿ ಬಿಟ್ಟು ಎಲ್ಲ ಕಡೆ ಪ್ರಚಾರ ಮಾಡುತ್ತೇನೆ ಎಂದು ಅವರು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.