ಕಾಂಗ್ರೆಸ್ಸಿನ ಮೊದಲ ಗ್ಯಾರಂಟಿಗೇ ಬಿಜೆಪಿಗರಲ್ಲಿ ನಡುಕ: ಶೆಟ್ಟರ್‌

By Kannadaprabha News  |  First Published Jun 26, 2023, 12:00 AM IST

ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್‌ ನೀಡಿದ 5 ಗ್ಯಾರಂಟಿ ಯೋಜನೆಗಳಲ್ಲಿ ಈಗಾಗಲೇ ಶಕ್ತಿ ಯೋಜನೆ ಯಶಸ್ವಿಯಾಗಿದ್ದು, ಇದನ್ನು ಗಮನಿಸುತ್ತಿರುವ ಬಿಜೆಪಿ ನಾಯಕರಿಗೆ ಈಗಲೇ ನಡುಕ ಆರಂಭವಾಗಿದೆ. ಅದೇ 5 ಗ್ಯಾರಂಟಿ ಯೋಜನೆಗಳು ಜಾರಿಯಾದರೆ ಇವರೆಲ್ಲ ಮನೆಯಲ್ಲಿಯೇ ಕುಳಿತುಕೊಳ್ಳುವ ಸ್ಥಿತಿ ಎದುರಾಗಲಿದೆ: ಜಗದೀಶ ಶೆಟ್ಟರ್‌ 


ಹುಬ್ಬಳ್ಳಿ(ಜೂ26):  ನಾವು ಘೋಷಿಸಿದ್ದ 5 ಗ್ಯಾರಂಟಿಗಳಲ್ಲಿ ಮೊದಲ ಗ್ಯಾರಂಟಿಗೇ ಬಿಜೆಪಿಗರಲ್ಲಿ ನಡುಕ ಆರಂಭವಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ವಿಧಾನ ಪರಿಷತ್‌ ಸದಸ್ಯ ಜಗದೀಶ ಶೆಟ್ಟರ್‌ ಹೇಳಿದರು.

ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್‌ ನೀಡಿದ 5 ಗ್ಯಾರಂಟಿ ಯೋಜನೆಗಳಲ್ಲಿ ಈಗಾಗಲೇ ಶಕ್ತಿ ಯೋಜನೆ ಯಶಸ್ವಿಯಾಗಿದ್ದು, ಇದನ್ನು ಗಮನಿಸುತ್ತಿರುವ ಬಿಜೆಪಿ ನಾಯಕರಿಗೆ ಈಗಲೇ ನಡುಕ ಆರಂಭವಾಗಿದೆ. ಅದೇ 5 ಗ್ಯಾರಂಟಿ ಯೋಜನೆಗಳು ಜಾರಿಯಾದರೆ ಇವರೆಲ್ಲ ಮನೆಯಲ್ಲಿಯೇ ಕುಳಿತುಕೊಳ್ಳುವ ಸ್ಥಿತಿ ಎದುರಾಗಲಿದೆ ಎಂದು ಭವಿಷ್ಯ ನುಡಿದರು. 

Tap to resize

Latest Videos

ಭ್ರಷ್ಟಾಚಾರದ ವಿರುದ್ದ ಹೋರಾಟ ಮಾಡಿ ನಾವು ಅಧಿಕಾರಕ್ಕೆ ಬಂದಿದ್ದೇವೆ: ಸಲೀಂ ಅಹಮ್ಮದ್

ಯಾವುದೇ ಒಂದು ಪಕ್ಷ ಅಧಿಕಾರಕ್ಕೆ ಬಂದರೆ ಅದು ಘೋಷಿಸಿರುವ ಯೋಜನೆಗಳನ್ನು ಅನುಷ್ಠಾನಕ್ಕೆ ತರಬೇಕಾದರೆ ಕನಿಷ್ಠ 6 ತಿಂಗಳ ಕಾಲಾವಕಾಶ ಬೇಕು. ಆದರೆ, ನಾವು ಅಧಿಕಾರಕ್ಕೆ ಬಂದು ಇನ್ನೂ 1 ತಿಂಗಳು ಕಳೆದಿಲ್ಲ. ಆಗಲೇ ಬಿಜೆಪಿ ನಾಯಕರು ಅಕ್ಕಿ ನೀಡುತ್ತಿಲ್ಲ ಎಂದು ಬೊಬ್ಬೆ ಹೊಡೆಯುತ್ತಿರುವುದು ಹಾಸ್ಯಾಸ್ಪದ ಎಂದರು.

click me!