ರಾಜ್ಯ ಕಾಂಗ್ರೆಸ್‌ ಐಸಿಯುನಲ್ಲಿ: ಜಗದೀಶ ಶೆಟ್ಟರ್‌

By Kannadaprabha News  |  First Published Mar 12, 2023, 10:00 PM IST

ಕರ್ನಾಟಕದಲ್ಲಿ ಕಾಂಗ್ರೆಸ್‌ ತನ್ನ ಅಸ್ತಿತ್ವ ಕಳೆದುಕೊಳ್ಳುವ ಹಂತಕ್ಕೆ ಬಂದಿದೆ. ಕಾಂಗ್ರೆಸ್‌ ದಿನೇದಿನೇ ಅಧೋಗತಿಯತ್ತ ಹೋಗುತ್ತಿದೆ ಎಂದು ತಿಳಿಸಿದ ಜಗದೀಶ ಶೆಟ್ಟರ್‌. 


ವಿಜಯಪುರ(ಮಾ.12): ದೇಶದಲ್ಲಿ ಕಾಂಗ್ರೆಸ್‌ ಎಲ್ಲಿದೆ ಎಂದು ಹುಡುಕುವ ಸ್ಥಿತಿ ಇದ್ದರೆ ರಾಜ್ಯದಲ್ಲಿ ಕಾಂಗ್ರೆಸ್‌ ಐಸಿಯುನಲ್ಲಿದೆ. ಹಾಗಾಗಿ, ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸ್ಪಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಹೇಳಿದರು.

ಶನಿವಾರ ಸಿಂದಗಿ ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್‌ ತನ್ನ ಅಸ್ತಿತ್ವ ಕಳೆದುಕೊಳ್ಳುವ ಹಂತಕ್ಕೆ ಬಂದಿದೆ. ಕಾಂಗ್ರೆಸ್‌ ದಿನೇದಿನೇ ಅಧೋಗತಿಯತ್ತ ಹೋಗುತ್ತಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ನಾಲ್ಕು ತಂಡಗಳಲ್ಲಿ ವಿಜಯಸಂಕಲ್ಪ ಯಾತ್ರೆ ನಡೆಯುತ್ತಿದೆ. ಯಾತ್ರೆಗೆ ರಾಜ್ಯದಲ್ಲಿ ಉತ್ತಮ ಸ್ಪಂದನೆ ದೊರೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆಗಳು, ರಾಜ್ಯದ ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಗಳು ಜನರಿಗೆ ಮನವರಿಕೆಯಾಗಿವೆ. ಅಭಿವೃದ್ಧಿ ಕಾರ್ಯಗಳ ಪ್ರಭಾವದಿಂದ ಬಿಜೆಪಿ ಪರ ಜನರಿಗೆ ಒಲವು ಮೂಡಿದೆ ಎಂದು ಹೇಳಿದರು.

Latest Videos

undefined

ಆಲಮಟ್ಟಿಜಂಗಮರ ಕಥೆಯಂಥಾದ ಕಾಂಗ್ರೆಸ್‌, ಜೆಡಿಎಸ್‌ ಕನಸು: ಸಚಿವ ಗೋವಿಂದ ಕಾರಜೋಳ

ದೇಶದ ಆರ್ಥಿಕ ಸ್ಥಿತಿ ಪ್ರಗತಿಯಲ್ಲಿದೆ. ಜಗತ್ತಿನಲ್ಲಿ ಪ್ರಧಾನಿ ಮೋದಿ ಪ್ರಬಲ ನಾಯಕರಾಗಿದ್ದಾರೆ. ಮೋದಿ ಕೋವಿಡ್‌ ನಿಯಂತ್ರಣ ಮಾಡಲು ಸಾಕಷ್ಟುಶ್ರಮಿಸಿ, ಅದರಲ್ಲಿ ಯಶಸ್ವಿಯೂ ಆಗಿದ್ದಾರೆ ಎಂದರು.

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಬಗ್ಗೆ ಕಾಂಗ್ರೆಸ್‌, ಜೆಡಿಎಸ್‌ ಕ್ರೆಡಿಟ್‌ ತೆಗೆದುಕೊಳ್ಳುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಶೆಟ್ಟರ್‌ ಅವರು, ಬರೀ ಸುಳ್ಳು ಹೇಳುವ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರು ಕೇವಲ ಕನಸು ಕಾಣುತ್ತಿದ್ದಾರೆ. ಕಾಂಗ್ರೆಸ್‌, ಜೆಡಿಎಸ್‌ನವರು ತಮ್ಮ ಅಧಿಕಾರಾವಧಿಯಲ್ಲಿ ಈ ಕೆಲಸ ಏಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಲು ಮೊದಲಿನಿಂದಲೂ ನಾವು ಬೆಂಬಲ ಸೂಚಿಸುತ್ತ ಬಂದಿದ್ದೇವೆ. ಈ ಬೆಂಬಲದ ಹಿನ್ನೆಲೆಯಲ್ಲಿ ಕ್ಯಾಬಿನೆಟ್‌ನಲ್ಲಿ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಶೆಟ್ಟರ್‌ ಸ್ಪಷ್ಟಪಡಿಸಿದರು.
 

click me!