ಯೋಜನೆಗಳಿಗೆ ಹಣ ನೀಡದೆ ಪ್ರಧಾನಿ ಮೋದಿ ದ್ರೋಹ: ಸಿದ್ದರಾಮಯ್ಯ

Published : Apr 03, 2023, 04:20 AM IST
ಯೋಜನೆಗಳಿಗೆ ಹಣ ನೀಡದೆ ಪ್ರಧಾನಿ ಮೋದಿ ದ್ರೋಹ: ಸಿದ್ದರಾಮಯ್ಯ

ಸಾರಾಂಶ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಹಣ ಬಿಡುಗಡೆ ಮಾಡದೆ ರಾಜ್ಯದ ಜನತೆಗೆ ದ್ರೋಹ ಮಾಡಿದ್ದಾರೆ. 2022-23ರ ಬಜೆಟ್‌ ಅನುಷ್ಠಾನಕ್ಕೆ ಇದ್ದ ಅವಧಿ ಮಾ.31ಕ್ಕೆ ಅಂತ್ಯವಾಗಿದೆ. 

ಬೆಂಗಳೂರು (ಏ.03): ‘ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಹಣ ಬಿಡುಗಡೆ ಮಾಡದೆ ರಾಜ್ಯದ ಜನತೆಗೆ ದ್ರೋಹ ಮಾಡಿದ್ದಾರೆ. 2022-23ರ ಬಜೆಟ್‌ ಅನುಷ್ಠಾನಕ್ಕೆ ಇದ್ದ ಅವಧಿ ಮಾ.31ಕ್ಕೆ ಅಂತ್ಯವಾಗಿದೆ. ಕೇಂದ್ರದಿಂದ ಬರಬೇಕಿದ್ದ 47,557 ಕೋಟಿ ರು.ಗಳಲ್ಲಿ ಬಂದಿರುವುದು 23,735 ಕೋಟಿ ರು. ಮಾತ್ರ. ರಾಜ್ಯಕ್ಕೆ ಮಾಡಿರುವ ದ್ರೋಹಕ್ಕೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಚುನಾವಣೆ ಹಿನ್ನೆಲೆಯಲ್ಲಿ ವಾರಕ್ಕೆ ಎರಡು ಬಾರಿ ರಾಜ್ಯಕ್ಕೆ ಬರುತ್ತಿದ್ದಾರೆ. 

ಆದರೆ, ರಾಜ್ಯಕ್ಕೆ ಕೊಡಬೇಕಿರುವ ಅನುದಾನ ಕೊಟ್ಟಿರುವುದು ಶೇ.49.9ರಷ್ಟು ಮಾತ್ರ. 4.75 ಲಕ್ಷ ಕೋಟಿ ರು.ಗೂ ಹೆಚ್ಚು ತೆರಿಗೆ ಹಾಗೂ ಸುಂಕ ಕಟ್ಟುವ ರಾಜ್ಯದ ಜನತೆ ನಿಮ್ಮ ಅವಮಾನ, ದ್ರೋಹಗಳನ್ನು ಯಾಕೆ ಸಹಿಸಿಕೊಳ್ಳಬೇಕು ಎಂದು ಪ್ರಶ್ನಿಸಿದ್ದಾರೆ. ಮನಮೋಹನ್‌ ಸಿಂಗ್‌ ಅವರಿದ್ದಾಗ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಶೇ.75ರಷ್ಟು ಅನುದಾನ ನೀಡುತ್ತಿದ್ದರು. ರಾಜ್ಯ ಸರ್ಕಾರ ಶೇ.25ರಷ್ಟು ನೀಡುತ್ತಿತ್ತು. ಇದೀಗ ರಾಜ್ಯ ಸರ್ಕಾರ ಶೇ.55 ಹಾಗೂ ಕೇಂದ್ರ ಶೇ.45ರಷ್ಟು ಕೊಡುವಂತಾಗಿದೆ. ರಾಜ್ಯದ ಜನರ ದುಡ್ಡಿನಲ್ಲಿ ಮೋದಿ ಪ್ರಚಾರ ಪಡೆಯುವಂತಾಗಿದೆ. ಇದಕ್ಕಿಂತ ಮೋಸ ಇದೆಯೇ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಹೆಚ್ಚಿನ ಲೀಡ್‌ ನೀಡಿ ಗೆಲ್ಲಿಸುವ ಹೊಣೆ ನಿಮ್ಮದು: ಬಾಲಚಂದ್ರ ಜಾರಕಿಹೊಳಿ

ಪರಿಶಿಷ್ಟ ಜಾತಿ, ಪಂಗಡದ ಜನರ ಕಲ್ಯಾಣದ ಬಗ್ಗೆ ಪುಟಗಟ್ಟಲೆ ಸುಳ್ಳು ಜಾಹಿರಾತು ನೀಡಿ ವಂಚಿಸುತ್ತಿದ್ದಾರೆ. ಹಿಂದುಳಿದ ವರ್ಗಗಳ ಇಲಾಖೆ ವತಿಯಿಂದ 19.25 ಕೋಟಿ ರು. ಬಿಡುಗಡೆ ಮಾಡುವುದಾಗಿ ಮೋದಿ ಸರ್ಕಾರ ಹೇಳಿತ್ತು. ಆದರೆ ಬಿಡುಗಡೆ ಮಾಡಿದ್ದು ಮಾತ್ರ 9.38 ಕೋಟಿ ರುಪಾಯಿ. ಆರೋಗ್ಯ ಇಲಾಖೆಗೆ 2169 ಕೋಟಿ ರು. ಬದಲಿಗೆ 699 ಕೋಟಿ ರು., ಅಲ್ಪಸಂಖ್ಯಾತ ಇಲಾಖೆಗೆ 300 ಕೋಟಿ ರು. ಬದಲಿಗೆ 75 ಕೋಟಿ ರು., ಗ್ರಾಮೀಣಾಭಿವೃದ್ಧಿ ಇಲಾಖೆಗೆ 9,217 ಕೋಟಿ ರು. ಬದಲಿಗೆ 4,709 ಕೋಟಿ ರು. ಮಾತ್ರ ಅನುದಾನ ನೀಡಲಾಗಿದೆ. ಈ ಮೂಲಕ ಎಲ್ಲಾ ಇಲಾಖೆಗಳಿಗೂ ದ್ರೋಹ ಮಾಡಿದ್ದಾರೆ ಎಂದು ದೂರಿದ್ದಾರೆ.

ಬೆಳಗಾವಿ ಜಿಲ್ಲೆಯ 10 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು ನಿಶ್ಚಿತ: ಸತೀಶ್‌ ಜಾರಕಿಹೊಳಿ

ಬಂಡೀಪುರ ಅರಣ್ಯ ಅಂಬಾನಿ, ಅದಾನಿಗೆ ಕೊಡಬೇಡಿ: ಚುನಾವಣಾ ಹಿನ್ನೆಲೆಯಲ್ಲಿ ಬಂಡೀಪುರ ಸಫಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಬರುತ್ತಿದ್ದಾರೆ. ಬಂಡೀಪುರದ ಅರಣ್ಯವನ್ನು ಅದಾನಿ-ಅಂಬಾನಿಗಳಿಗೆ ಕೊಡದಿದ್ದರೆ ಸಾಕು. ಆನೆ, ಚಿರತೆಗಳ ಬಗ್ಗೆ ಮತ್ತು ಮರಗಳ ಬಗ್ಗೆ ಕಾಳಜಿ ತೋರಿಸುವ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಸ್ಯಾಂಕಿ ಕೆರೆ ಮೇಲಿನ ಮರಗಳನ್ನು ಕಡಿಯಬಾರದೆಂದು ಪ್ರತಿಭಟನೆ ಮಾಡಿದ್ದ ಪರಿಸರವಾದಿಗಳ ಮೇಲೆ ಕ್ರಿಮಿನಲ್ ಕೇಸ್‌ ದಾಖಲಿಸಿದ್ದಾರೆ. ಇದು ಏನು ಸೂಚಿಸುತ್ತದೆ ಎಂದು ಪ್ರಶ್ನಿಸಿದ್ದಾರೆ. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಬದಲಾವಣೆ ಚರ್ಚೆ ತೀವ್ರ: ಹೈಕಮಾಂಡ್‌ ಜೊತೆ ಡಿ.ಕೆ.ಶಿವಕುಮಾರ್‌ ಮಾತುಕತೆ
ಕಾಂಗ್ರೆಸ್‌ನ ಕಟ್ಟಾಳು ಶಾಮನೂರು ಶಿವಶಂಕರಪ್ಪ: ದಾವಣಗೆರೆಯ ಅಜೇಯ ರಾಜಕೀಯ ದಂತಕಥೆ