ಬಿಜೆಪಿ ನಾಯಕರ ವ್ಯಂಗ್ಯ: ನನ್ನ ಹೇಳಿಕೆಯಲ್ಲಿ ತಪ್ಪೇನಿದೆ ಎಂದು ತಿವಿದ ಸಿದ್ದರಾಮಯ್ಯ..!

By Suvarna NewsFirst Published Aug 12, 2020, 2:37 PM IST
Highlights

ಬೆಂಗಳೂರಿನ ಕಾವಲ್ ಬೈರಸಂದ್ರ ಗಲಭೆ ಸಂಬಂಧ ತಮ್ಮ ಹೇಳಿಕೆಗೆ ಮಾಜಿ ಸಿದ್ದರಾಮಯ್ಯ ಅವರು ಮತ್ತೊಂದು ಟ್ವೀಟ್ ಮಾಡುವ ಮೂಲಕ ಸಮಜಾಯಿಷಿ ನೀಡಿದ್ದಾರೆ.

ಬೆಂಗಳೂರು, (ಆ.12): ನಗರದ ಡಿಜೆ ಹಳ್ಳಿಯಲ್ಲಿ ನಡೆದ ದಾಂಧಲೆಯನ್ನ ವಿಪಕ್ಷಗಳು ಸೇರಿ ಇಡೀ ರಾಜ್ಯವೇ ಖಂಡಿಸುತ್ತಿದೆ. ಅದರಂತೆ, ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ದುರ್ಘಟನೆ ಸಂಬಂಧಿಸಿದಂತೆ ಟ್ವೀಟ್‌ ಮಾಡಿದ್ದರು. ಆದ್ರೆ, ಅವರ ಹೇಳಿಕೆ ಭಾರೀ ಸದ್ದು ಮಾಡಿದ್ದು, ಕೊನೆಗೆ ಸಿದ್ದರಾಮಯ್ಯ ಅವರೇ ಸಮಜಾಯಿಷಿ ನೀಡಿದ್ದಾರೆ.

ಮಂಗಳವಾರ) ರಾತ್ರಿ ನಗರದ ಡಿಜೆ ಹಳ್ಳಿಯಲ್ಲಿ ನಡೆದ ದಾಂಧಲೆಯನ್ನ ಖಂಡಿಸಿ, ಬೆಳಗ್ಗೆ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ 'ಕಳೆದ ರಾತ್ರಿ ಕಾವಲಭೈರಸಂದ್ರದಲ್ಲಿ ನಡೆದ ಗಲಭೆ ಮತ್ತು ಅದಕ್ಕೆ ಪ್ರಚೋದನೆ ನೀಡಿದ ಘಟನೆಗಳೆರಡೂ ಖಂಡನೀಯ. ಹಿಂದೂ-ಮುಸ್ಲಿಮ್ ಎರಡು ಸಮುದಾಯದವರು ಸಂಯಮದಿಂದ ವರ್ತಿಸಿ ಶಾಂತಿ ಕಾಪಾಡಬೇಕೆಂದು ಕೈಮುಗಿದು ಮನವಿ ಮಾಡುತ್ತಿದ್ದೇನೆ' ಎಂದು ಹೇಳಿದ್ದರು. 

ಧರ್ಮದ ಅವಹೇಳನ ಅರೋಪ: ಕಾಂಗ್ರೆಸ್‌ ವಿರುದ್ಧ ಸಚಿವ ಸಿ.ಟಿ.ರವಿ ವಾಗ್ದಾಳಿ

ಎಸ್ಡಿಪಿಐ ಮತ್ತು ಕೆಯಫ್ಡಿಯ 1600 ಪುಂಡರ ವಿರುದ್ಧ ಇದ್ದ 175 ಕ್ರಿಮಿನಲ್ ಕೇಸುಗಳನ್ನು ನೀವು 2015ರಲ್ಲಿ ವಾಪಸ್ಸು ತೆಗೆದುಕೊಂಡಿದ್ದು ತಪ್ಪು ಅಂತ ನಿಮಗೆ ಈಗಲಾದರೂ ಅನ್ನಿಸುತ್ತಿದೆಯೇ ಸಿದ್ದರಾಮಯ್ಯನವರೇ? ಇಷ್ಟಾಗಿಯೂ ಪುಂಡ ಮುಸಲ್ಮಾನರನ್ನು ಖಂಡಿಸಲು ಏಕೆ ನಿಮಗೆ ಮನಸ್ಸು ಬರುತ್ತಿಲ್ಲ ಸಾರ್? https://t.co/rU8wSFQR51

— Pratap Simha (@mepratap)

ಈ ಹೇಳಿಕೆಯನ್ನ ರೀಟ್ವೀಟ್ ಮಾಡಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ, ಬಿಜೆಪಿ ಮುಖಂಡ ಬಿ.ಎಲ್.ಸಂತೋಷ್ ಸೇರಿದಂತೆ ಅನೇಕರು ವ್ಯಂಗ್ಯವಾಡಿದ್ದರು.

ಇದೀಗ ತಮ್ಮ ಈ ಹೇಳಿಕೆಯನ್ನ ಸಮರ್ಥಿಸಿಕೊಂಡಿರುವ ವಿಪಕ್ಷ ನಾಯಕ, ಹಿಂದು-ಮುಸ್ಲಿಮರು ಕೂಡಿ ಶಾಂತಿ ಸ್ಥಾಪನೆಗೆ ಮುಂದಾಗಬೇಕೆಂಬ ನನ್ನ ಹೇಳಿಕೆಯನ್ನು‌ ಹಿಂದೂ ವಿರೋಧಿ ಎನ್ನುವಂತೆ ತಿರುಚಲಾಗುತ್ತಿದೆ. ಮುಸ್ಲಿಮ್ ಗಲಭೆಕೋರರಿಗೆ ಮುಸ್ಲಿಮ್ ಹಿರಿಯರು, ಗಲಭೆಗೆ ಪ್ರಚೋದಿಸಿದ್ದ ಹಿಂದೂ ಯುವಕ ನವೀನ್‌ಗೆ ಹಿಂದೂ ಹಿರಿಯರೇ ಬುದ್ದಿ ಹೇಳಬೇಕಲ್ಲಾ? ನನ್ನ ಹೇಳಿಕೆಯಲ್ಲಿ ತಪ್ಪೇನಿದೆ?' ಎಂದು ಪ್ರಶ್ನಿಸಿದ್ದಾರೆ.

ಹಿಂದು-ಮುಸ್ಲಿಮರು ಕೂಡಿ ಶಾಂತಿ ಸ್ಥಾಪನೆಗೆ ಮುಂದಾಗಬೇಕೆಂಬ ನನ್ನ ಹೇಳಿಕೆಯನ್ನು‌ ಹಿಂದೂ ವಿರೋಧಿ ಎನ್ನುವಂತೆ ತಿರುಚಲಾಗುತ್ತಿದೆ.

ಮುಸ್ಲಿಮ್ ಗಲಭೆಕೋರರಿಗೆ ಮುಸ್ಲಿಮ್ ಹಿರಿಯರು, ಗಲಭೆಗೆ ಪ್ರಚೋದಿಸಿದ್ದ ಹಿಂದೂ ಯುವಕ ನವೀನ್‌‌ಗೆ ಹಿಂದೂ ಹಿರಿಯರೇ ಬುದ್ದಿ ಹೇಳಬೇಕಲ್ಲಾ?

ನನ್ನ ಹೇಳಿಕೆಯಲ್ಲಿ ತಪ್ಪೇನಿದೆ?

— Siddaramaiah (@siddaramaiah)
click me!