
ಬೆಂಗಳೂರು, (ಜೂನ್.17): ಚೀನಾ ವಿಚಾರದಲ್ಲಿ ಕೇಂದ್ರ ಸರ್ಕಾರ ಮೌನವಾಗಿರುವುದರನ್ನು ಕರ್ನಾಟಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಖಂಡಿಸಿದ್ದು, ''ಆಳುವವರ ಮೌನ ಜನದ್ರೋಹ ಮಾತ್ರವಲ್ಲ, ದೇಶದ್ರೋಹವೂ ಹೌದು'' ಎಂದು ಟೀಕಿಸಿದ್ದಾರೆ.
ಚೀನಾ ವಿರುದ್ಧ ಗಾಂಧಿ ಮಂತ್ರ ಪಠಿಸಿದ ಸಿ.ಟಿ.ರವಿ!
ಭಾರತ ಮತ್ತು ಚೀನಾ ಸೈನಿಕರ ಘರ್ಷಣೆ ಕುರಿತು ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಚೀನಾ ದೇಶ ಗಡಿತಂಟೆ ಶುರುಹಚ್ಚಿ ಏಳು ವಾರಗಳಾಗುತ್ತಾ ಬಂತು. ಅಲ್ಲಿನ ಬೆಳವಣಿಗೆಗಳ ನಿಜಸಂಗತಿಯ ಬಗ್ಗೆ ನರೇಂದ್ರ ಮೋದಿ, ರಾಜನಾತ್ ಸಿಂಗ್ ಇಲ್ಲಿಯ ವರೆಗೆ ಅಧಿಕೃತ ಹೇಳಿಕೆಯನ್ನು ನೀಡಿಲ್ಲ. ಆಳುವವರ ಮೌನ ಜನದ್ರೋಹ ಮಾತ್ರವಲ್ಲ, ದೇಶದ್ರೋಹವೂ ಹೌದು ಎಂದು ಕಿಡಿಕಾರಿದ್ದಾರೆ.
ದೇಶಕ್ಕಾಗಿ ಬೆವರು-ರಕ್ತ ಹರಿಸಿದ ನಾಯಕರ ಪಕ್ಷವಾದ ಕಾಂಗ್ರೆಸ್ ಪಕ್ಷ ಭಾರತದ ಏಕತೆ, ಅಖಂಡತೆ ಮತ್ತು ಸಾರ್ವಭೌಮತೆಗೆ ಸದಾ ಬದ್ಧವಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.
ವೀರ ಸೈನಿಕರ ಬಲಿದಾನ ವ್ಯರ್ಥವಾಗಬಾರದು. ಹುತಾತ್ಮರ ಕುಟುಂಬಕ್ಕೆ ಗೌರವದ ಶ್ರದ್ಧಾಂಜಲಿ ಸಲ್ಲಿಸೋಣ. ಚೀನಾದ ದುಷ್ಕೃತ್ಯವನ್ನು ಒಕ್ಕೊರಲಿನಿಂದ ಖಂಡಿಸೋಣ ಎಂದು ಸಿದ್ದರಾಮಯ್ಯ ಭಾರತ-ಚೀನಾ ಯೋಧ ನಡುವಿನ ಸಂಘರ್ಷದಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ಗೌರವ ನಮನ ಸಲ್ಲಿಸಿದ್ದಾರೆ.
ಶತ್ರು ದೇಶದ ವಿರುದ್ಧ ಹೋರಾಡುವುದು ಸರ್ಕಾರ ಅಲ್ಲ, ದೇಶ. ಸರ್ಕಾರ ದೇಶಕ್ಕೆ, ದೇಶದ ಜನತೆಗೆ ಉತ್ತರದಾಯಿ. ದೇಶದ ಪ್ರತಿಯೊಬ್ಬ ಪ್ರಜೆಯೂ ಕೇಂದ್ರ ಸರ್ಕಾರವನ್ನು ನಂಬಿದೆ. ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಂಬಿಕೆಯನ್ನು ಉಳಿಸಿಕೊಳ್ಳುವ ಹೊಣೆಯೂ ಕೇಂದ್ರ ಸರ್ಕಾರದ್ದು ಎಂದಿದ್ದಾರೆ.
ಚೀನಾ ದೇಶ ಗಡಿತಂಟೆ ಶುರುಹಚ್ಚಿ ಏಳು ವಾರಗಳಾಗುತ್ತಾ ಬಂತು. ಅಲ್ಲಿನ ಬೆಳವಣಿಗೆಗಳ ನಿಜ ಸಂಗತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಅವರು ಇಲ್ಲಿಯ ವರೆಗೆ ಅಧಿಕೃತ ಹೇಳಿಕೆಯನ್ನು ನೀಡಿಲ್ಲ. ಆಳುವವರ ಮೌನ ಜನದ್ರೋಹ ಮಾತ್ರವಲ್ಲ, ದೇಶದ್ರೋಹವೂ ಹೌದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟ್ವಿಟರ್ ಖಾತೆ ಬರೆದುಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.