'ವೇಸ್ಟ್ ಫೆಲ್ಲೊ, ನಾನ್ ಸೆನ್ಸ್' ಎಂದು ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಸಿಡಿಮಿಡಿಗೊಂಡ ಸಿದ್ದರಾಮಯ್ಯ

Published : Feb 05, 2023, 08:33 AM IST
'ವೇಸ್ಟ್ ಫೆಲ್ಲೊ, ನಾನ್ ಸೆನ್ಸ್' ಎಂದು ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಸಿಡಿಮಿಡಿಗೊಂಡ ಸಿದ್ದರಾಮಯ್ಯ

ಸಾರಾಂಶ

ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಿಟ್ಟಾದ ಘಟನೆ ಹುಮನಾಬಾದ್‌ನಲ್ಲಿ ನಡೆದ ಪ್ರಜಾಧ್ವನಿ ಕಾರ್ಯಕ್ರಮದ ವೇದಿಕೆ ಮೇಲೆ ನಡೆದಿದೆ. 

ಬೀದರ್ (ಫೆ.05): ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಿಟ್ಟಾದ ಘಟನೆ ಹುಮನಾಬಾದ್‌ನಲ್ಲಿ ನಡೆದ ಪ್ರಜಾಧ್ವನಿ ಕಾರ್ಯಕ್ರಮದ ವೇದಿಕೆ ಮೇಲೆ ನಡೆದಿದೆ. ಸಿದ್ದರಾಮಯ್ಯ ಭಾಷಣ ಮಾಡಲು ಆಗಮಿಸಿದ ವೇಳೆ ಹೂಗುಚ್ಚ ಹಿಡಿದುಕೊಂಡು ಬರುತ್ತಿದ್ದ ಕಾರ್ಯಕರ್ತನ ಕೈಯಿಂದ ಹೂಗುಚ್ಚ ಕಸಿದುಕೊಂದ ಸಿದ್ದು ಅದನ್ನ ಸಿಟ್ಟಿನಿಂದ ಬಿಸಾಕಿದರು. ಈ ವೇಳೆ 'ವೇಸ್ಟ್ ಫೆಲ್ಲೊ, ನಾನ್ ಸೆನ್ಸ್' ಎಂದು ತಮ್ಮದೇ ಭಾಷೆಯಲ್ಲಿ ಸಿದ್ದರಾಮಯ್ಯ ಸಿಡಿಮಿಡಿಗೊಂಡರು. ಭಾಷಣದ ಆರಂಭದಲ್ಲೇ ಕಾರ್ಯಕ್ರಮದಲ್ಲಿ ಶಾಂತತೆ ಕಾಪಾಡಬೇಕೆಂದು ಸಿದ್ದರಾಮಯ್ಯ ಹೇಳುತ್ತಿದ್ದರು.

ರೈತರ ಆದಾಯ ದುಪ್ಪಟ್ಟು ಎಂದಿದ್ದ ಮೋದಿ: ರೈತರ ಆದಾಯ ದುಪ್ಪಟ್ಟು ಮಾಡಿಸುತ್ತೆನೆಂದು ಹೇಳುತ್ತಿದ್ದ ಮೋದಿ, ಅವರದ್ದೆ ರಾಜ್ಯದ ಬಿಜೆಪಿ ಸರ್ಕಾರ ರೈತರ ಸಾಲ ದುಪ್ಪಟ್ಟು ಮಾಡಿ ಸಾಧನೆ ಮೆರೆದಿದೆ ಎಂದು ವಿಪಕ್ಷ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗವಾಡಿದರು. ಪಟ್ಟಣದ ಮಿನಿವಿಧಾನಸೌಧ ಎದುರಿಗೆ ಕಾಂಗ್ರೆಸ್‌ ಆಯೋಜಿಸಿರುವ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ಪದೆಪದೆ ರೈತರ ಆದಾಯ ದ್ವಿಗುಣ ಮಾಡಲಾಗುತ್ತದೆ ಎಂಬ ಹುಸಿ ಭರವಸೆಯಿಂದ ರೈತ ಸಮುದಾಯ ಬೇಸತ್ತಿದೆ ಎಂದರು.

Prajadwani Bus Yatra: ಸಿದ್ದರಾಮಯ್ಯ, ಡಿಕೆಶಿ ಪ್ರತ್ಯೇಕ ಬಸ್‌ಯಾತ್ರೆಗೆ ಜನಸ್ತೋಮ

ರಾಜ್ಯದಲ್ಲಿ ಕಾಂಗ್ರೆಸ್‌ ಗಾಳಿ ಬಿಸುತ್ತಿದೆ. ಯುವಕರಲ್ಲಿ ಮಹಿಳೆಯರಲ್ಲಿ ಕಾಂಗ್ರೆಸ್‌ ಪರವಾಗಿ ಹೆಚ್ಚಿನ ಹುರುಪು ಉತ್ಸಾಹ ಕಂಡು ಬರುತ್ತಿದೆ. ಬೀದರ್‌ ಜಿಲ್ಲೆಯಾದ್ಯಂತ ಈ ಬಾರಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ನುಡಿದರು. ತಾಲೂಕಿನ ರಸ್ತೆಗಳು ಅಭಿವೃದ್ಧಿ ಮಾಡಲು ಸಾಧ್ಯವಾಗದ ವ್ಯಕ್ತಿಗಳು ಶಾಸಕನಾಗಲು ಲಾಯಕ್ಕಾ ನಾಲಾಯಕ್ಕಾ ನೀವೆ ಯೋಚಿಸಿ ಎಂದು ಕಾರ್ಯಕರ್ತರನ್ನು ಪ್ರಶ್ನಿಸಿದರು.

ಒಗ್ಗಟ್ಟಿನಿಂದ ಮಾತ್ರ ಕಾಂಗ್ರೆಸ್‌ಗೆ ಹಿತ: ಔರಾದ್‌ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಒಟ್ಟು 27 ಜನ ಆಕಾಂಕ್ಷಿಗಳಾಗಿ ಅರ್ಜಿ ಸಲ್ಲಿಸಿದ್ದು, ಎಲ್ಲರಿಗೂ ಟಿಕೇಟ್‌ ನೀಡು ಸಾಧ್ಯವಿಲ್ಲ. ಪಕ್ಷದಿಂದ ಯಾರಿಗೆ ಟಿಕೇಟ್‌ ನೀಡಿದರೂ ಉಳಿದ 26 ಆಕಾಂಕ್ಷಿಗಳು ಒಗ್ಗಟ್ಟಿನಿಂದ ಪ್ರಭು ಚವ್ಹಾಣ ಸೋಲಿಸಲು ಕೆಲಸ ಮಾಡಬೇಕಿದೆ ಎಂದು ವೇದಿಕೆ ಮೇಲೆ ಕುಳಿತಿರುವ ಆಕಾಂಕ್ಷಿಗಳಿಗೆ ಹೇಳಿದರು. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಜನರ ಆಶಿರ್ವಾದ ಪಡೆದು ಸರ್ಕಾರ ರಚಿಸಲಿಲ್ಲ, ಬದಲಿಗೆ ಆಪರೇಶನ್‌ ಕಮಲ ಎಂಬ ಅನೈತಿಕ ದಾರಿ ಬಳಸಿಕೊಂಡು ರಚಿಸಿದೆ ಇದು ಪ್ರಜಾಪ್ರಭುತ್ವಕ್ಕೆ ಬಿಜೆಪಿ ಸರ್ಕಾರ ಮಾಡಿರುವ ದ್ರೋಹ ಎಂದರು.

ಕಾಂಗ್ರೆಸ್‌ ಕೊಟ್ಟ ಮಾತಿಗೆ ನಡೆಯುವ ಪಕ್ಷವಾಗಿದೆ. ಕಳೆದ ತನ್ನ ಅವಧಿಯಲ್ಲಿ 165 ಭರವಸೆಗಳ ಪೈಕಿ 158 ಭರವಸೆಗಳು ಈಡೇರಿಸಿ 30 ಹೊಸ ಕಾರ್ಯಕ್ರಮ ಜನಕಲ್ಯಾಣಕ್ಕಾಗಿ ನೀಡಿದ್ದೇನೆ. ಬಿಜೆಪಿ 2018ರಲ್ಲಿ 600 ಭರವಸೆಗಳು ನೀಡಿ 50-60 ಭರವಸೆಗಳು ಈಡೆರಿಸದೇ ಒದ್ದಾಡುತ್ತಿದೆ ಇದಕ್ಕೆ ಕಾರಣ ಭ್ರಷ್ಟಾಚಾರವಾಗಿದೆ.

100% ಸೋಲುವ ಕೈ ಶಾಸಕರಿಗೆ ಟಿಕೆಟ್‌ ಇಲ್ಲ: ಸಿದ್ದರಾಮಯ್ಯ

ಬರಿ ಸುಳ್ಳು ಆಶ್ವಾಸನೆ ನೀಡುತ್ತ ಮಾನ ಮರ್ಯಾದೆ ಇಲ್ಲದ ಏಕೈಕ ಪಕ್ಷ ಬಿಜೆಪಿಯಾಗಿದೆ. ತನ್ನ ಅವಧಿಯಲ್ಲಿ 15ಲಕ್ಷ ಮನೆಗಳು ಬಡವರಿಗೆ ನಿರಾಶ್ರಿತರಿಗೆ ನಾವು ನೀಡಿದ್ದು, ಬಿಜೆಪಿ ಒಂದೇ ಒಂದು ಮನೆ ನೀಡಲಾಗುತ್ತಿಲ್ಲ. 2014ರಲ್ಲಿ ಕೇವಲ 6 ತಿಂಗಳಲ್ಲಿಯೇ ಕಪ್ಪು ಹಣ ತರುವೆನೆಂದು ಹೇಳಿರುವ ಮೋದಿ ಇಂದಿಗೂ ಅದರ ಬಗ್ಗೆ ಮಾತನಾಡದೇ ಮೌನವಾಗಿದ್ದು, ಯುವಕರಿಗೆ ಉದ್ಯೋಗ ಕೊಡುವುದಾಗಿ ಭರವಸೆ ನೀಡಿ ಯುವ ಸಮೂಹದ ಕಣ್ಣಲ್ಲಿ ಸುಳ್ಳು ಹೇಳುವ ಪ್ರಧಾನಿ ಎನಿಸಿಕೊಂಡಿದ್ದಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ