ಬಿಜೆಪಿ ಸರ್ಕಾರ ಬಂದು ವರ್ಷದ ಬಳಿಕ ಯಾಕೆ ಆರೋಪ?: ಎಚ್‌ಡಿಕೆ ಬಗ್ಗೆ ಸಿದ್ದು ಕಿಡಿ

By Kannadaprabha NewsFirst Published Oct 22, 2020, 11:32 AM IST
Highlights

ಬಿಜೆಪಿ ಸರ್ಕಾರ ಬಂದು ಒಂದು ವರ್ಷಕ್ಕೂ ಹೆಚ್ಚು ಸಮಯ ಆಗಿದೆ. ಈಗ ಸಮ್ಮಿಶ್ರ ಸರ್ಕಾರ ಪತನಕ್ಕೆ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆಂದರೆ ಏನರ್ಥ? ಆಗಲೇ ಹೇಳಬಹುದಿತ್ತಲ್ಲ. ಆಗ ಏಕೆ ಹೇಳಲಿಲ್ಲ ಎಂದು ಪ್ರಶ್ನಿಸಿದ ಸಿದ್ದತರಾಮಯ್ಯ| ‘ಕುಣಿಯಲು ಬಾರದವಳು ನೆಲ ಡೊಂಕು ಎಂದಳಂತೆ’ ಎಂಬ ಗಾದೆಯಂತೆ ಕುಮಾರಸ್ವಾಮಿ ಟೀಕೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ ಸಿದ್ದು| 

ಹುಬ್ಬಳ್ಳಿ(ಅ.22): ಸಮ್ಮಿಶ್ರ ಸರ್ಕಾರ ಪತನಕ್ಕೆ ತಮ್ಮ ವಿರುದ್ಧ ಬೊಟ್ಟು ಮಾಡಿ ತೋರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷದ ಬಳಿಕ ಯಾಕೆ ಅವರು ಈ ರೀತಿಯ ಆರೋಪ ಮಾಡುತ್ತಿದ್ದಾರೆ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

"

ನಗರದಲ್ಲಿ ಬುಧವಾರ ಸುದ್ದಿಗಾರರ ಜತೆಗೆ ಮಾತನಾಡಿ, ಬಿಜೆಪಿ ಸರ್ಕಾರ ಬಂದು ಒಂದು ವರ್ಷಕ್ಕೂ ಹೆಚ್ಚು ಸಮಯ ಆಗಿದೆ. ಈಗ ಸಮ್ಮಿಶ್ರ ಸರ್ಕಾರ ಪತನಕ್ಕೆ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆಂದರೆ ಏನರ್ಥ? ಆಗಲೇ ಹೇಳಬಹುದಿತ್ತಲ್ಲ. ಆಗ ಏಕೆ ಹೇಳಲಿಲ್ಲ ಎಂದು ಪ್ರಶ್ನಿಸಿದರು. ಜತೆಗೆ, ‘ಕುಣಿಯಲು ಬಾರದವಳು ನೆಲ ಡೊಂಕು ಎಂದಳಂತೆ’ ಎಂಬ ಗಾದೆಯಂತೆ ಕುಮಾರಸ್ವಾಮಿ ಟೀಕೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಸಿಎಂ ವೈಮಾನಿಕ ಸಮೀಕ್ಷೆಗೆ ಸಿದ್ದು ಕಿಡಿ: 'ನಾನು ಕಾರ್‌ನಲ್ಲೇ ಪ್ರವಾಸ ಮಾಡಿ ನೊಂದವರ ಅಳಲು ಕೇಳ್ತೇನೆ'

ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಶಾಸಕರನ್ನು ಸರಿಯಾಗಿ ನೋಡಿಕೊಳ್ಳಲಿಲ್ಲ. ಶಾಸಕರ ಕ್ಷೇತ್ರಕ್ಕೆ ಸರಿಯಾಗಿ ಅನುದಾನ ಬಿಡುಗಡೆ ಮಾಡಿದ್ದರೆ ಅವರೇಕೆ ಸರ್ಕಾರ ಬೀಳಿಸುತ್ತಿದ್ದರು. ನಾನು ಐದು ವರ್ಷ ಮುಖ್ಯಮಂತ್ರಿ ಆಗಿದ್ದೆ. ಯಾವೊಬ್ಬ ಎಂಎಲ್‌ಎನೂ ನನ್ನ ವಿರುದ್ಧ ಇರಲಿಲ್ಲ ಎಂದರು. ಈಗ ಹೇಳಿಕೆ ನೀಡುವ ಉದ್ದೇಶವೇನು? ಚುನಾವಣೆಗಾಗಿ ಹೇಳಿಕೆ ನೀಡುತ್ತಿದ್ದಾರಷ್ಟೇ ಎಂದು ಕಿಡಿಕಾರಿದರು.

ಕಟೀಲು ಯಾರು?: 

ಇದೇ ವೇಳೆ ನಾನು ಮುಖ್ಯಮಂತ್ರಿ ಆಗಿದ್ದಾಗ ದೇವೇಗೌಡ ಅವರ ಕುಟುಂಬಕ್ಕೆ ಕಿರುಕುಳ ನೀಡಿದೆ ಎಂದು ಆರೋಪಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ಗೂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಈ ರೀತಿ ಹೇಳೋಕೆ ನಳಿನ್‌ಕುಮಾರ್‌ ಯಾರು? ನಾನು ಕಿರುಕುಳ ನೀಡಿದ್ದೇನೆ ಎಂದು ದೇವೇಗೌಡರು ಹೇಳಲಿ ಎಂದರು.
 

click me!