ರಾಜ್ಯದಲ್ಲಿ ಭೀಕರ ಪ್ರವಾಹ ಬಂದಾಗ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಬಂದಿದ್ದರಾ, ಕೊರೋನಾ ಸಂಕಷ್ಟದ ಕಾಲದಲ್ಲಿ ರಾಜ್ಯಕ್ಕೆ ಮೋದಿ ಬಂದಿದ್ದರಾ. ಮತ್ತೆ ಈಗ ಯಾಕೆ ಬರ್ತಿದ್ದಾರೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.
ಚಿಕ್ಕಬಳ್ಳಾಪುರ (ಮಾ.26): ರಾಜ್ಯದಲ್ಲಿ ಭೀಕರ ಪ್ರವಾಹ ಬಂದಾಗ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಬಂದಿದ್ದರಾ, ಕೊರೋನಾ ಸಂಕಷ್ಟದ ಕಾಲದಲ್ಲಿ ರಾಜ್ಯಕ್ಕೆ ಮೋದಿ ಬಂದಿದ್ದರಾ. ಮತ್ತೆ ಈಗ ಯಾಕೆ ಬರ್ತಿದ್ದಾರೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಜಿಲ್ಲೆಯ ಗೌರಿಬಿದನೂರಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಪದೇ ಪದೇ ರಾಜ್ಯಕ್ಕೆ ಓಟಿಗೋಸ್ಕರ ಬರುತ್ತಿದ್ದಾರೆ. ಜನರಿಗೆ ಇದು ಅರ್ಥ ಆಗಲಿದೆ ಎಂದರು.
ರಾಜ್ಯದಲ್ಲಿ ಮೋದಿ 100 ಸಾರಿ ಬಂದು ಹೋದರೂ ಏನೂ ಆಗಲ್ಲ. ಸಮಾಜದಲ್ಲಿ ಗಂಡು ಹೆಣ್ಣು ಸಮಾನವಾಗಿದ್ದಾರೆ. ಮಹಿಳೆಯರಿಗೆ ಮೀಸಲಾತಿಯನ್ನು ರಾಜೀವ್ ಗಾಂಧಿ ಕೊಟ್ಟಿದ್ದಾರೆ. ಮೀಸಲಾತಿ ಜಾರಿ ಮಾಡಿದ್ದು ಕಾಂಗ್ರೆಸ್ ಸರ್ಕಾರ. ಬಿಜೆಪಿ ಮಹಿಳೆಯರ ಉದ್ದಾರಕ್ಕೆ ಯಾವುದೇ ಕಾನೂನು ತಂದಿಲ್ಲ. ಅಂಬೇಡ್ಕರ್ ಸಂವಿಧಾನವನ್ನು ಬಿಜೆಪಿ ಪಕ್ಷ ಒಪ್ಪಿಕೊಂಡಿಲ್ಲಾ. ಅಂಬೇಡ್ಕರ್ ಸಂವಿಧಾನ ಒಪ್ಪಿಕೊಂಡಿದ್ದು ಕಾಂಗ್ರೆಸ್ ಪಕ್ಷ ಮಾತ್ರ ಎಂದರು. ಬಿಜೆಪಿ ಸರ್ಕಾರ ಕೋಟಿಗಟ್ಟಲೇ ಲಂಚ ಹೊಡೆಯುತ್ತಿದೆ.
ಶಾಸಕ ಕುಮಾರ್ ಬಂಗಾರಪ್ಪ ವಿರುದ್ಧ ಮತ್ತೆ ಭುಗಿಲೆದ್ದ ಅಸಮಾಧಾನ: ಟಿಕೆಟ್ ನೀಡದಂತೆ ಆಗ್ರಹಿಸಿದ ಕಾರ್ಯಕರ್ತರು
ಬಿಜೆಪಿಗೆ ಮತ ಹಾಕಬಾರದು. ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಸಹಾ ವಿತರಣೆ ಮಾಡಿದ್ದೇವೆ. ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ಕೊಡುತ್ತೇವೆ. ನಾವು ಕೊಟ್ಟಮಾತಿನಂತೆ ನಡೆದುಕೊಳ್ಳುತ್ತೇವೆ. ಅಧಿಕಾರಕ್ಕೆ ಬಂದ ತಕ್ಷಣ ಇಂದಿರಾ ಕ್ಯಾಂಟೀನ್ ತೆರೆಯಲಾಗುವುದು ಎಂದು ಹೇಳಿದರು. ಮೋದಿ ಯುವಕರಿಗೆ ತಿಮ್ಮಪ್ಪನ ನಾಮ ಹಾಕಿದ್ದಾರೆ. ನಿರುದ್ಯೋಗ ಯುವಕರಿಗೆ ಮೂರು ಸಾವಿರ ಸಿಗಲಿದೆ. ಭರವಸೆ ಹೀಡೆರೀಸದೆ ಇದ್ದರೆ ಒಂದು ಕ್ಷಣ ಅಧಿಕಾರದಲ್ಲಿ ನಾವು ಇರಲ್ಲಾ. ಗೌರಿಬಿದನೂರು ಶುಗರ್ ಕಾರ್ಖಾನೆ ಪುನಾರಂಭಿಸಲು ಪ್ರಯತ್ನ ಮಾಡಲಾಗುವುದು. ಅದು ಬಿಜೆಪಿ ಸರ್ಕಾರಿಂದ ಸಾಧ್ಯವಾಗುವುದಿಲ್ಲ ಎಂದರು.
ನಿರುದ್ಯೋಗಿಗಳಿಗೆ ಜಾಹೀರಾತು ಮೂಲಕ ಬಿಜೆಪಿ ಅವಮಾನ: ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸುವುದರ ಬದಲಿಗೆ ನಿರುದ್ಯೋಗವನ್ನು ಸೃಷ್ಟಿಸಿದೆ. ಹೀಗಿದ್ದರೂ ಜಾಹೀರಾತುಗಳ ಮೂಲಕ ಸುಳ್ಳು ಪ್ರಕಟಣೆಗಳನ್ನು ನಿರುದ್ಯೋಗಿ ಯುವಜನರಿಗೆ ಅವಮಾನ ಮಾಡಿದೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯ ಮತ್ತು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರಗಳಿಗೆ ಒಂದು ಗುಲಗಂಜಿಯಷ್ಟಾದರೂ ನಾಚಿಕೆ ಇದೆಯೇ ಎಂದು ನನಗೆ ಅನುಮಾನವಾಗಿದೆ. ಜನರ ತೆರಿಗೆ ಹಣವನ್ನು ಬಳಸಿ ಜಾಹೀರಾತುಗಳ ಮೂಲಕ ಸುಳ್ಳುಗಳನ್ನು ಮಾರಾಟ ಮಾಡುವ ಹೀನಾತಿಹೀನ ರಾಜಕೀಯವನ್ನು ಬಿಜೆಪಿ ಸರ್ಕಾರಗಳು ಮಾಡುತ್ತಿವೆ.
ಮೀಸಲಾತಿ ಬಗ್ಗೆ ವಿಧಾನಸಭೆಯಲ್ಲಿ ಮೊದಲು ಧ್ವನಿ ಎತ್ತಿದ್ದೇ ನಾನು: ಬಸನಗೌಡ ಪಾಟೀಲ ಯತ್ನಾಳ್
ಕೋಟಿಗಟ್ಟಲೆ ವೆಚ್ಚದ ಜಾಹೀರಾತುಗಳನ್ನು ಪ್ರತಿನಿತ್ಯ ಬಿಡುಗಡೆ ಮಾಡಲಾಗುತ್ತಿದೆ. ಜಾಹೀರಾತು ನೀಡುವುದು ತಪ್ಪಲ್ಲ. ಆದರೆ ನಿರುದ್ಯೋಗ ವಿಚಾರದಲ್ಲಿ ಸುಳ್ಳು ಯಾಕೆ ಹೇಳುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿಯು ಜಾಹೀರಾತಿನಲ್ಲಿ 68.5 ಲಕ್ಷ ಉದ್ಯೋಗ ಸೃಷ್ಟಿಸಿರುವುದಾಗಿ ಹೇಳಿದೆ. ಸಿಎಂಐಇ ಸಂಸ್ಥೆ ಪ್ರಕಾರ 2022 ರಲ್ಲಿ ಕಾರ್ಮಿಕರ ಪಾಲ್ಗೊಳ್ಳುವಿಕೆಯ ಒಟ್ಟಾರೆ ಪ್ರಮಾಣವು ಶೇ.37.88 ರಷ್ಟಿದೆ. ಕರ್ನಾಟಕದ ಜನಸಂಖ್ಯೆಯಲ್ಲಿ ಒಟ್ಟು ದುಡಿಮೆ ಮಾಡಲು ಬಯಸುವವರ ಸಂಖ್ಯೆ 2.49 ಕೋಟಿ ಎಂದು ಅಂದಾಜು ಮಾಡಲಾಗಿದೆ. ಆದರೆ, ಯಾವುದೋ ಒಂದು ಉದ್ಯೋಗ ಲಭಿಸಿರುವುದು ಕೇವಲ 2.1 ಕೋಟಿ ಜನರಿಗೆ ಮಾತ್ರ. ಸುಮಾರು 30 ಲಕ್ಷ ಜನರು ಯಾವ ಉದ್ಯೋಗವೂ ಇಲ್ಲದೆ ಪರದಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.