ಸಿಎಂ ಬೊಮ್ಮಾಯಿ-ಬಿಎಸ್‌ವೈ ಸಂಬಂಧ ಹಳಸಿದೆ: ಸಿದ್ದರಾಮಯ್ಯ

By Govindaraj S  |  First Published Nov 8, 2022, 3:00 AM IST

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ನಾನು ಚೆನ್ನಾಗಿದ್ದೇವೆ. ಆದರೆ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ನಡುವಿನ ಸಂಬಂಧವೇ ಹಳಸಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿಗೆ ತಿರುಗೇಟು ನೀಡಿದರು. 


ಬೆಳಗಾವಿ (ನ.08): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ನಾನು ಚೆನ್ನಾಗಿದ್ದೇವೆ. ಆದರೆ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ನಡುವಿನ ಸಂಬಂಧವೇ ಹಳಸಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿಗೆ ತಿರುಗೇಟು ನೀಡಿದರು. ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆಗೆ ಮಾತನಾಡಿ, ಬಿಜೆಪಿಯಲ್ಲಿ ಈಗ ಎಲ್ಲವೂ ಸರಿಯಿಲ್ಲ. ಆದರೂ ಬಿಜೆಪಿ ನಾಯಕರು ಕಾಂಗ್ರೆಸ್‌ ಬಗ್ಗೆ ಮಾತನಾಡುತ್ತಾರೆ. ಕಾಂಗ್ರೆಸ್‌ನಲ್ಲಿ ನನ್ನ ಮತ್ತು ಡಿ.ಕೆ.ಶಿವಕುಮಾರ್‌ ನಡುವಿನ ಸಂಬಂಧ ಸರಿಯಿದೆ. ನಾವಿಬ್ಬರೂ ಚೆನ್ನಾಗಿಯೇ ಇದ್ದೇವೆ. ನಾನು ಏಕಾಂಗಿಯಲ್ಲ, ಎಲ್ಲಾ ಧರ್ಮದವರು, ಜಾತಿಯವರು ನನ್ನ ಜೊತೆ ಇದ್ದಾರೆ ಎಂದರು.

ಬಾದಾಮಿ ಕ್ಷೇತ್ರದಿಂದ ಸ್ಪರ್ಧೆಗೆ ಹೆಚ್ಚಿನ ಒತ್ತಡ ಇದೆ. ಬಾದಾಮಿಯಲ್ಲೇ ಸ್ಪರ್ಧಿಸುವಂತೆ ಆಗ್ರಹಿಸಿ ಸಾವಿರಾರು ಹೆಣ್ಣು ಮಕ್ಕಳು ಮನೆ ಎದುರು ಧರಣಿ ಮಾಡುತ್ತೇವೆ ಎಂದು ಒತ್ತಡ ಹಾಕಿ ಪತ್ರ ಬರೆದಿದ್ದಾರೆ ಎಂದ ಸಿದ್ದರಾಮಯ್ಯ, ಆದರೆ ನನ್ನ ಮನಸು ಒಪ್ಪುತ್ತಿಲ್ಲ ಎಂದ ಸಿದ್ದರಾಮಯ್ಯ, ಬಾದಾಮಿಗೆ ಹೋಗಿ 2 ತಿಂಗಳಾಗಿದೆ. ವಾರಕ್ಕೊಮ್ಮೆಯೂ ಅಲ್ಲಿ ಇರಲಾಗುತ್ತಿಲ್ಲ. ಕಾರ್ಯಕರ್ತರಿಗೆ, ಜನರಿಗೆ ಸಿಗಲಾಗುತ್ತಿಲ್ಲ, ಕಷ್ಟಕ್ಕೆ ಸ್ಪಂದಿಸಲಾಗುತ್ತಿಲ್ಲ ಎಂದು ಬೇಸರ ತೋಡಿಕೊಂಡರು. ಬಿಜೆಪಿಯವರಿಗೆ ಬುದ್ಧಿ ಇಲ್ಲ. ನನಗೆ ಕ್ಷೇತ್ರ ಇಲ್ಲವೆಂದು ಹೇಳುತ್ತಿದ್ದಾರೆ. ಕ್ಷೇತ್ರ ಇಲ್ಲದಿದ್ದರೆ ಇಷ್ಟೊಂದು ಜನ ಆಹ್ವಾನ ನೀಡುತ್ತಾರೆಯೇ? ಕೋಲಾರದಲ್ಲೇ ನಿಲ್ಲಿ ಎಂದು ಕೆಲವರು ಆಗ್ರಹಿಸುತ್ತಿದ್ದಾರೆ.

Tap to resize

Latest Videos

ಬಿಜೆಪಿ ಸೋಲಿಸಿ ಮಲ್ಲಿಕಾರ್ಜುನ ಖರ್ಗೆಗೆ ಅಭಿನಂದನೆ: ಸಿದ್ದರಾಮಯ್ಯ

ವರುಣದಲ್ಲಿ ಸ್ಪರ್ಧಿಸಿ ಎಂದು ನಮ್ಮ ಹುಡುಗ ಹೇಳುತ್ತಿದ್ದಾನೆ. ಚಾಮರಾಜಪೇಟೆಯಿಂದ ನಿಂತುಕೊಳ್ಳಬೇಕು ಎಂದು ಜಮೀರ್‌ ಆಹ್ವಾನ ನೀಡಿದ್ದಾರೆ ಎಂದರು. ವರುಣದಿಂದ ಸ್ಪರ್ಧೆಗೆ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸಲಹೆ ನೀಡಿದ್ದಾರೆ. ವೈಯಕ್ತಿಕವಾಗಿ ಸಿ.ಎಂ.ಇಬ್ರಾಹಿಂ ನನ್ನ ಒಳ್ಳೆಯ ಗೆಳೆಯ. ಅವರು ಭದ್ರಾವತಿಯಿಂದ ಸ್ಪರ್ಧಿಸೋದು ಒಳಿತು. ಅಲ್ಲೀಗ ಪಾಪ ಅಪ್ಪಾಜಿ ಮೃತಪಟ್ಟಿದ್ದಾರೆ. ನಾನು ಎಲ್ಲಿ ನಿಂತುಕೊಳ್ಳಬೇಕು ಎನ್ನುವ ಕುರಿತು ಪಕ್ಷ ತೀರ್ಮಾನ ಮಾಡುತ್ತದೆ. ಆತ್ಮೀಯವಾಗಿ ಹೇಳುವುದಾದರೆ ವೈಯಕ್ತಿಕವಾಗಿ ಬಂದು ಹೇಳಬೇಕು. ಹಿಂದೆ ಭದ್ರಾವತಿಗೆ ಸಿಟ್ಟಿಂಗ್‌ ಎಂಎಲ್‌ಎ ಟಿಕೆಟ್‌ ತಪ್ಪಿಸಿ ಇಬ್ರಾಹಿಂಗೆ ಟಿಕೆಟ್‌ ಕೊಡಲಾಗಿತ್ತು. ಆದರೆ, ಇಬ್ರಾಹಿಂ ಡಿಪಾಸಿಟ್‌ ಹೋಯಿತು. ಅವರ ಲೆಕ್ಕಾಚಾರ ತಪ್ಪಾಯ್ತಲ್ಲ ಎಂದು ಹೇಳಿದರು.

ಬಿಜೆಪಿ ಅಧಿಕಾರಕ್ಕೆ ತಂದರೆ ಕರ್ನಾಟಕ ಉಳಿಯಲ್ಲ: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಭ್ರಷ್ಟ, ಕೋಮುವಾದಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಬೇಡಿ. ಒಂದು ವೇಳೆ ಬಿಜೆಪಿ ಅಧಿಕಾರಕ್ಕೆ ತಂದರೆ ಕರ್ನಾಟಕ ಉಳಿಯಲ್ಲ, ನೀವು ಉಳಿಯಲ್ಲ. ಪ್ರಭಾಪ್ರಭುತ್ವ, ಸಂವಿಧಾನ ಉಳಿಯಲ್ಲ. ಅದಕ್ಕಾಗಿ ಕಾಂಗ್ರೆಸ್‌ನ್ನು ಅಧಿಕಾರಕ್ಕೆ ತರಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಚನ್ನಮ್ಮನ ಕಿತ್ತೂರಿನಲ್ಲಿ ಸೋಮವಾರ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕೀಯ ಎದುರಾಳಿಯನ್ನು ಎದುರಿಸಬೇಕು. 

ಸಿದ್ದು ನೋಡಿದ್ರೆ ಅಯ್ಯೋ ಅನ್ಸುತ್ತೆ, ಕಾಂಗ್ರೆಸ್‌ನಲ್ಲಿ ಅವ್ರು ತಬ್ಬಲಿ: ಸಿ.ಎಂ.ಇಬ್ರಾಹಿಂ

ಜನರ ಆಶೀರ್ವಾದದ ಮೂಲಕ ರಾಜಕೀಯ ಎದುರಾಳಿ ಸೋಲಿಸಬೇಕು. ಆದರೆ, ಬಿಜೆಪಿಯವರು ತಮ್ಮ ರಾಜಕೀಯ ಎದುರಾಳಿಗಳನ್ನು ಕ್ರಿಮಿನಲ್‌ ಕೇಸ್‌, ಜೈಲಿಗೆ ಕಳುಹಿಸುವ ಷಡ್ಯಂತ್ರ ಮಾಡುತ್ತಾರೆ. ಬಿಜೆಪಿಯವರಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ. ಸಂವಿಧಾನದ ಮೇಲೆ ನಂಬಿಕೆ ಇಲ್ಲ. ಜನರ ಆಶೀರ್ವಾದ ಪಡೆದು ರಾಜಕಾರಣದಲ್ಲಿ ಇರಬೇಕೆಂಬ ನಂಬಿಕೆಯೂ ಇಲ್ಲ. ವಾಮಮಾರ್ಗ, ಕುತಂತ್ರ, ಷಡ್ಯಂತ್ರಗಳಿಂದ ಆಡಳಿತ ಮಾಡುವಲ್ಲಿ ಬಿಜೆಪಿಯವರು ನಿಸ್ಸಿಮ್ಮರು. ಎಂದಿಗೂ ಜನರ ಆಶೀರ್ವಾದ ಪಡೆದು ಅಧಿಕಾರ ನಡೆಸಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

click me!