ಶಿವಲಿಂಗೇಗೌಡರ ಕಾಂಗ್ರೆಸ್‌ ಸೇರ್ಪಡೆ ಪಕ್ಕಾ: ಸಿದ್ದರಾಮಯ್ಯ

Published : Feb 13, 2023, 06:00 AM IST
ಶಿವಲಿಂಗೇಗೌಡರ ಕಾಂಗ್ರೆಸ್‌ ಸೇರ್ಪಡೆ ಪಕ್ಕಾ: ಸಿದ್ದರಾಮಯ್ಯ

ಸಾರಾಂಶ

ಜೆಡಿಎಸ್‌ ಶಾಸಕ ಶಿವಲಿಂಗೇಗೌಡರು ಕಾಂಗ್ರೆಸ್‌ಗೆ ಸೇರ್ಪಡೆಯಾಗುವುದು ಖಚಿತ. 100ಕ್ಕೆ 100ರಷ್ಟುಅವರು ಕಾಂಗ್ರೆಸ್‌ಗೆ ಬರುತ್ತಾರೆ. ಅಧಿವೇಶನ ಮುಗಿದ ಬಳಿಕ ಯಾವಾಗ ಬೇಕಾದರೂ ಬರಬಹುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. 

ಸಿಂಧನೂರು (ಫೆ.13): ಜೆಡಿಎಸ್‌ ಶಾಸಕ ಶಿವಲಿಂಗೇಗೌಡರು ಕಾಂಗ್ರೆಸ್‌ಗೆ ಸೇರ್ಪಡೆಯಾಗುವುದು ಖಚಿತ. 100ಕ್ಕೆ 100ರಷ್ಟುಅವರು ಕಾಂಗ್ರೆಸ್‌ಗೆ ಬರುತ್ತಾರೆ. ಅಧಿವೇಶನ ಮುಗಿದ ಬಳಿಕ ಯಾವಾಗ ಬೇಕಾದರೂ ಬರಬಹುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ರಾಯಚೂರು ಜಿಲ್ಲೆ ಸಿಂಧನೂರಿನಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ‘ಡಿಸಿಸಿ ಬ್ಯಾಂಕ್‌ ಹಗರಣದ ಪಿತಾಮಹ ಸಿದ್ದರಾಮಯ್ಯ’ ಎಂಬ ಮಾಜಿ ಶಾಸಕ ವರ್ತೂರು ಪ್ರಕಾಶ್‌ ಹೇಳಿಕೆಗೆ ಕಿಡಿ ಕಾರಿದ ಅವರು, ಇಂತಹ ಚಿಲ್ಲರೆ ವಿಚಾರಗಳ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. 

ಆತ ಈ ಹಿಂದೆ ನನ್ನ ಅಭಿಮಾನಿಯಾಗಿದ್ದ. ಈಗ ವಿರೋಧಿಯಾಗಿದ್ದಾನೆ. ರಾಜಕೀಯದಲ್ಲಿ ಯಾರು ಶಾಶ್ವತ ಮಿತ್ರರು ಅಲ್ಲ, ಶತ್ರುಗಳು ಅಲ್ಲ ಎಂದು ಹೇಳಿದರು. ಬಳಿಕ, ವಿಜಯಪುರದಲ್ಲಿ ಮಾತನಾಡಿ, ಟಿಪ್ಪು ಸುಲ್ತಾನ್‌ ಆರಾಧನೆ ಮಾಡುವವರಿಗೆ ಮತ ಹಾಕಬೇಡಿ ಎಂಬ ಅಮಿತ್‌ ಶಾ ಮಾತಿಗೆ ತಿರುಗೇಟು ನೀಡಿದರು. ನಾಥೋರಾಮ್‌ ಗೋಡ್ಸೆ ಮತ್ತು ಸಾವರ್ಕರ್‌ ಪೂಜೆ ಮಾಡುವವರು ನಮಗೇನು ಪಾಠ ಹೇಳಿಕೊಡುತ್ತಾರೆ?. ರಾಷ್ಟ್ರಪಿತ ಮಹಾತ್ಮಾ ಗಾಂಧಿ ​ಅವರನ್ನು ಕೊಂದವರನ್ನು ಪೂಜಿಸುವ ಪಕ್ಷದ ಬಗ್ಗೆ ಏನು ಮಾತನಾಡಬೇಕು? ಸಾವರ್ಕರ್‌, ಬ್ರಿಟಿಷ್‌ ಸರ್ಕಾರದಲ್ಲಿ ಪೆನ್ಷನ್‌ ತೆಗೆದುಕೊಳ್ಳುತ್ತಿದ್ದರು. 

5 ಕೋಟಿ ಪರಿಹಾರ ಕೋರಿದ್ದ ಪತ್ನಿಗೆ 50 ಲಕ್ಷ ಜೀವನಾಂಶ: ಹೈಕೋರ್ಟ್‌

ಅವರನ್ನು ಇವರು ಪೂಜಿಸುತ್ತಾರೆ. ಅವರ ಬಗ್ಗೆ ನಾವು ಮಾತನಾಡಲು ಆಗುತ್ತಾ ಎಂದು ಪ್ರಶ್ನಿಸಿದರು. ಟಿಪ್ಪು, ಓರ್ವ ದೇಶಪ್ರೇಮಿ ಎಂದು ನಂಬಿಕೆ ಇಟ್ಟುಕೊಂಡಿದ್ದೇವೆ. ಅವರ ಜೊತೆ ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಝಾನ್ಸಿರಾಣಿ ಲಕ್ಷ್ಮೇಬಾಯಿ, ಒನಕೆ ಓಬವ್ವ, ಬೆಳವಾಡಿ ಮಲ್ಲಮ್ಮ, ರಾಣಿ ಅಬ್ಬಕ್ಕ ಎಲ್ಲರೂ ದೇಶಪ್ರೇಮಿ ಆಗಿದ್ದಾರೆ. ಅವರನ್ನು ಸ್ವಾತಂತ್ರ್ಯ ಹೋರಾಟಗಾರರು ಎಂದು ನಾವು ಶ್ರದ್ಧೆಯಿಂದ, ಭಕ್ತಿಯಿಂದ ಗೌರವಿಸುತ್ತೇವೆ. ಕಿತ್ತೂರು ರಾಣಿ ಚೆನ್ನಮ್ಮಳ ಜಯಂತಿ ಮಾಡಿದವನು ನಾನು. ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾ​ಧಿಕಾರ ರಚಿಸಿ .262 ಕೋಟಿ ನೀಡಿದವನು ನಾನು ಎಂದರು.

ಕಾಂಗ್ರೆಸ್‌, ಜೆಡಿಎಸ್‌ ಒಂದೇ ನಾಣ್ಯದ ಎರಡು ಮುಖವಿದ್ದಂತೆ ಎಂಬ ಶಾ ಹೇಳಿಕೆಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್‌ ಸಂವಿಧಾನದ ಮೇಲೆ ನಂಬಿಕೆ ಇಟ್ಟುಕೊಂಡಿದೆ. ಬಿಜೆಪಿ ಸಂವಿಧಾನ ವಿರೋಧಿಯಾಗಿದೆ. ಈ ಹಿಂದೆ ಬಿಜೆಪಿ ಮತ್ತು ಜೆಡಿಎಸ್‌ ಸೇರಿ ಸರ್ಕಾರ ರಚನೆ ಮಾಡಿದ್ದರು. ಕಾಂಗ್ರೆಸ್‌, ಜೆಡಿಎಸ್‌ ಒಂದಾಗಲು ಹೇಗೆ ಸಾಧ್ಯ ಎಂದು ತಿರುಗೇಟು ನೀಡಿದರು. ಅಲ್ಲದೆ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 50 ರಿಂದ 60 ಸ್ಥಾನ ಗೆಲ್ಲುವುದೇ ಕಷ್ಟ ಎಂದರು. ಕಾಂಗ್ರೆಸ್‌, ಬಿಜೆಪಿ ಪಕ್ಷದ ಬಿ ಟೀಮ್‌ ಎಂದು ಕುಮಾರಸ್ವಾಮಿ ಸುಳ್ಳು ಹೇಳುತ್ತಿದ್ದಾರೆ. 

2008ರಲ್ಲಿ ಬಿಎಸ್‌ವೈಯನ್ನು ಸಿಎಂ ಮಾಡಿದ್ದು ನಾನೇ: ಜನಾರ್ದನ ರೆಡ್ಡಿ

2006ರಲ್ಲಿ ಬಿಜೆಪಿಯೊಂದಿಗೆ ಸಮ್ಮಿಶ್ರ ಸರ್ಕಾರ ರಚಿಸಿದ್ದು ಇದೇ ಕುಮಾರಸ್ವಾಮಿ. 20 ತಿಂಗಳ ಅಧಿಕಾರದ ಹೆಸರಿನಲ್ಲಿ ಯಡಿಯೂರಪ್ಪನವರಿಗೆ ದ್ರೋಹ ಬಗೆದಿದ್ದಾರೆ. ಆದ್ದರಿಂದ ಕುಮಾರಸ್ವಾಮಿಗೆ ಕಾಂಗ್ರೆಸ್‌ ಬಗ್ಗೆ ಟೀಕಿಸುವ ನೈತಿಕತೆ ಇಲ್ಲ ಎಂದರು. ರಾಹುಲ್‌ ಗಾಂಧಿ ಈಗಾಗಲೇ ಎಐಸಿಸಿಯಿಂದ ಮೂರು ಬಾರಿ ಎಲ್ಲ ವಿಧಾನಸಭಾ ಕ್ಷೇತ್ರಗಳ ಸರ್ವೆ ಮಾಡಿಸಿದ್ದು, ಯಾರು ಗೆಲ್ಲುತ್ತಾರೋ ಅಂಥವರಿಗೆ ಹೈಕಮಾಂಡ್‌ ಟಿಕೆಟ್‌ ನೀಡಲು ನಿರ್ಧರಿಸಿದೆ. ರಾಜ್ಯದಲ್ಲಿ ಕನಿಷ್ಟ130 ರಿಂದ 150 ಸ್ಥಾನಗಳನ್ನು ಕಾಂಗ್ರೆಸ್‌ ಗೆಲ್ಲುತ್ತದೆ. ಇನ್ನು 15 ದಿನಗಳಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿಬಿಡುಗಡೆ ಮಾಡಲಾಗುವುದು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಹಬ್ಬದ ದಿನವೇ ಮಸೀದಿಯಿಂದ ಪ್ರಧಾನಿಯನ್ನು ಉಗಿದು ಹೊರದಬ್ಬಿದರು: Video Viral
ಹೊಗಳಿ ಹೊಗಳಿ ಅನುದಾನ ಪಡೆಯಿರಯ್ಯ -ಡಿಕೆಶಿ ಹೊಗಳಿ 50 ಕೋಟಿ ಅನುದಾನ ಪಡೆದ ಎಚ್ಕೆ ಸುರೇಶ್‌