
ಬೆಂಗಳೂರು(ಸೆ.18): ಬಿಬಿಎಂಪಿ ಚುನಾವಣೆ ಎದುರಿಸುವ ಸಾಮರ್ಥ್ಯ ಬಿಜೆಪಿಗೆ ಇಲ್ಲ. ಏಕೆಂದರೆ, ಜನರ ಬಳಿಗೆ ಹೋಗುವ ಧೈರ್ಯ ಅವರಿಗೆ ಇಲ್ಲ. ರಾಜ್ಯ ಸುತ್ತುವ ಮೂಲಕ ಜನರ ಸಮಸ್ಯೆ ಬಗೆಹರಿಸುವುದೂ ಇಲ್ಲ. ಮುಖ್ಯಮಂತ್ರಿ, ಮಂತ್ರಿಗಳು ಬೆಂಗಳೂರಿನಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ದೂರಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಬೆಂಗಳೂರಿನ ಜನಸಂಖ್ಯೆ 1.10 ಕೋಟಿ. ಕೇವಲ ವಲಯಗಳನ್ನು ಮಾಡಿ ಆಯುಕ್ತರ ಹುದ್ದೆಯನ್ನು ಮುಖ್ಯ ಆಯುಕ್ತರ ಹುದ್ದೆ ಎಂದು ಬದಲಾಯಿಸಿದರೆ ಮಹಾನಗರ ಅಭಿವೃದ್ಧಿ ಆಗುವುದೇ? ಪ್ರತಿವರ್ಷ ಮಳೆ ಬರುತ್ತದೆ. ಈವರೆಗೆ ರಾಜ ಕಾಲುವೆಗಳ ದುರಸ್ತಿ ಆಗಿಲ್ಲ ಎಂದು ಟೀಕಿಸಿದ್ದಾರೆ.
ಪ್ರಧಾನಿ ಮೋದಿ ಹುಟ್ಟುಹಬ್ಬ ನಿರುದ್ಯೋಗಿಗಳ ದಿನ: ಸಿದ್ದರಾಮಯ್ಯ
ಪಾಲಿಕೆ ಆಸ್ತಿಯನ್ನು ಅಡಮಾನ ಇಟ್ಟವರು ಯಾರು? ಬಿಜೆಪಿಯವರಿಂದ ಬೆಂಗಳೂರು ಅಭಿವೃದ್ಧಿ ಅಸಾಧ್ಯ. ಕೇವಲ ಭಾಷಣ ಮತ್ತು ಭ್ರಷ್ಟಾಚಾರವನ್ನು ಮಾತ್ರ ಅವರಿಂದ ನಿರೀಕ್ಷೆ ಮಾಡಬಹುದು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.