ಮಳೆಗೆ ಕರ್ನಾಟಕ ತತ್ತರ: ಆಸ್ಪತ್ರೆಯಲ್ಲಿ ಕುಳಿತೇ ಸರ್ಕಾರಕ್ಕೆ ಸಿದ್ದರಾಮಯ್ಯ ಚಾಟಿ

Suvarna News   | Asianet News
Published : Aug 06, 2020, 03:25 PM IST
ಮಳೆಗೆ ಕರ್ನಾಟಕ ತತ್ತರ: ಆಸ್ಪತ್ರೆಯಲ್ಲಿ ಕುಳಿತೇ ಸರ್ಕಾರಕ್ಕೆ ಸಿದ್ದರಾಮಯ್ಯ ಚಾಟಿ

ಸಾರಾಂಶ

ಎರಡು ದಿನಗಳಿಂದ ರಾಜ್ಯದಲ್ಲಿ‌ ಮಳೆಯಾಗ್ತಿದೆ ಕರಾವಳಿ, ಮಲೆನಾಡು ಅಷ್ಟೇ ಅಲ್ಲ ಉತ್ತರ ಕರ್ನಾಟಕ ಭಾಗದಲ್ಲೂ ಎದುರಾದ ಪ್ರವಾಹದ ಭೀತಿ| ಕಳೆದ ವರ್ಷದ ಪ್ರವಾಹದಿಂದ ಜನ ಇನ್ನೂ ಚೇತರಿಸಿಕೊಂಡಿಲ್ಲ| ಪರಿಹಾರ ಕಾರ್ಯಗಳೇ ಪೂರ್ಣಗೊಂಡಿಲ್ಲ| ನಾವು ಎಚ್ಚರಿಸಿದ್ರೂ ಸರ್ಕಾರ ಎಚ್ಚೆತ್ತುಕೊಳ್ಳಲಿಲ್ಲ ಎಂದ ಸಿದ್ದರಾಮಯ್ಯ| 

ಬೆಂಗಳೂರು(ಆ.06): ಕಳೆದರಡು ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆ, ಏರುತ್ತಿರುವ ನೆರೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಬೇಕಾಗಿರುವ ಸರ್ಕಾರ‌ ಸಂಪೂರ್ಣ ಸ್ಥಗಿತಗೊಂಡಿದೆ. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆಯೇ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. 

 

ಕೊರೋನಾ ವೈರಸ್‌ ದೃಢಪಟ್ಟಿದ್ದರಿಂದ ಸಿದ್ದರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಲ್ಲಿದ್ದುಕೊಂಡೇ ರಾಜ್ಯ ಸರ್ಕಾರವನ್ನ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಸರಣಿ ಟ್ವೀಟ್‌ ಮಾಡುವ ಮೂಲಕ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. 

ಮಹಾಮಳೆಗೆ ಚಾರ್ಮಾಡಿ ಘಾಟ್‌ ರಸ್ತೆಯಲ್ಲಿ ಗುಡ್ಡ ಕುಸಿತ

ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಮಾತ್ರವಲ್ಲ ಉತ್ತರ ಕರ್ನಾಟಕದಲ್ಲಿಯೂ ಮಳೆಯಿಂದಾಗಿ ಜನ ಪ್ರವಾಹದ ಭೀತಿಯಲ್ಲಿದ್ದಾರೆ. ರಾಜ್ಯ ಸರ್ಕಾರ ತಕ್ಷಣ ಕಾರ್ಯಪ್ರವೃತ್ತವಾಗಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ ಅವರಿಗೆ ಊಟ-ವಸತಿ ವ್ಯವಸ್ಥೆ ಕಲ್ಪಿಸಿ ಅವರಲ್ಲಿ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದ್ದಾರೆ. 

 

ಆಸ್ಪತ್ರೆಯಲ್ಲಿರುವ  ಬಿ.ಎಸ್. ಯಡಿಯೂರಪ್ಪ ಅವರು ತಕ್ಷಣ ಹಿರಿಯ ಸಹದ್ಯೋಗಿಗಳಿಗೆ ಜವಾಬ್ದಾರಿ ಹಂಚಿ  ಅತಿವೃಷ್ಟಿಯ ಸಮಸ್ಯೆಗಳಿಗೆ ಪರಿಹಾರವನ್ನು ಕಲ್ಪಿಸಲು ವ್ಯವಸ್ಥೆ ಮಾಡಬೇಕು.ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರನ್ನು ಸ್ಥಳಕ್ಕೆ ಕಳಿಸಿ ಪ್ರತ್ಯಕ್ಷದರ್ಶಿ ವರದಿಯನ್ನು ತರಿಸಿಕೊಳ್ಳಬೇಕು ಎಂದು ತಾಕೀತು ಮಾಡಿದ್ದಾರೆ.

 

ಕಳೆದ ವರ್ಷದ ಆಗಸ್ಟ್-ಅಕ್ಟೋಬರ್ ತಿಂಗಳ ಪ್ರವಾಹದಿಂದ ಜನತೆ ಇನ್ನೂ ಚೇತರಿಸಿಕೊಂಡಿಲ್ಲ.‌‌ ಹಳೆಯ ಹಾನಿಯ ಪರಿಹಾರ ಕಾರ್ಯವೇ ಇನ್ನೂ ಪೂರ್ಣಗೊಂಡಿಲ್ಲ. ನಿರಂತರವಾಗಿ ಈ ಬಗ್ಗೆ ನಾವು ಎಚ್ಚರಿಸುತ್ತಿದ್ದರೂ ಸರ್ಕಾರ ಸ್ಪಂದಿಸಿಲ್ಲ. ರಾಜ್ಯ ಸರ್ಕಾರದ ಈ ನಿರ್ಲಕ್ಷಕ್ಕೆ ಅಮಾಯಕ ಜನ ಬಲಿಯಾಗುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. 

 

ರಾಜ್ಯದ ಕಂದಾಯ ಸಚಿವರೂ ಕ್ವಾರಂಟೈನ್‌ಗೊಳಗಾಗಿದ್ದಾರೆಂದು ಹೇಳಲಾಗುತ್ತಿದೆ. ಪ್ರವಾಹ ನಿಯಂತ್ರಣ ಮತ್ತು ಪರಿಹಾರ ಕಾರ್ಯದಲ್ಲಿ ಕಂದಾಯ ಇಲಾಖೆಯ ಜವಾಬ್ದಾರಿ‌ ಹೆಚ್ಚಿರುವುದರಿಂದ ಪೂರಕ ವ್ಯವಸ್ಥೆ ಮಾಡುವ ಬಗ್ಗೆ ಯಡಿಯೂರಪ್ಪ ಅವರು ಗಮನ ಹರಿಸಬೇಕು ಎಂದು ಆಗ್ರಹಿಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಸದ ಭೀಮ್ ಆರ್ಮಿ ಸಹ ಸಂಸ್ಥಾಪಕ ಚಂದ್ರಶೇಖರ್ ಅಜಾದ್ ವಿರುದ್ಧ ಮಾಜಿ ಗರ್ಲ್‌ಫ್ರೆಂಡ್ ಬಾಂಬ್
ಜನರೊಂದಿಗೆ ಸಂಪರ್ಕ ಸಾಧಿಸಿ, ಸೋಶಿಯಲ್ ಮೀಡಿಯಾ ಬಳಸಿ: ಸಂಸದರಿಗೆ ಮೋದಿ ಕರೆ