ಒಳ ಮೀಸಲಾತಿ ಸಮಿತಿ ಕಣ್ಣೊರೆಸುವ ತಂತ್ರ: ಸಿದ್ದರಾಮಯ್ಯ

By Govindaraj SFirst Published Dec 15, 2022, 8:49 AM IST
Highlights

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಬೇಡಿಕೆ ಪರಿಶೀಲನೆಗೆ ಸಂಪುಟ ಉಪ ಸಮಿತಿ ರಚನೆ ಮಾಡಿರುವುದು ಕೇವಲ ಕಣ್ಣೊರೆಸುವ ತಂತ್ರ. ಸರ್ಕಾರಕ್ಕೆ ನಿಜವಾಗಿಯೂ ಬದ್ಧತೆಯಿದ್ದರೆ ಸದಾಶಿವ ಆಯೋಗದ ವರದಿಯನ್ನು ಅಧಿವೇಶನದಲ್ಲಿ ಮಂಡಿಸಲಿ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. 

ಬೆಂಗಳೂರು (ಡಿ.15): ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಬೇಡಿಕೆ ಪರಿಶೀಲನೆಗೆ ಸಂಪುಟ ಉಪ ಸಮಿತಿ ರಚನೆ ಮಾಡಿರುವುದು ಕೇವಲ ಕಣ್ಣೊರೆಸುವ ತಂತ್ರ. ಸರ್ಕಾರಕ್ಕೆ ನಿಜವಾಗಿಯೂ ಬದ್ಧತೆಯಿದ್ದರೆ ಸದಾಶಿವ ಆಯೋಗದ ವರದಿಯನ್ನು ಅಧಿವೇಶನದಲ್ಲಿ ಮಂಡಿಸಲಿ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಒಳ ಮೀಸಲಾತಿ ಕುರಿತು ಸಂಪುಟ ಉಪ ಸಮಿತಿ ರಚನೆಯಾಗಿರುವ ಬಗ್ಗೆ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಸಮಿತಿ ರಚನೆ ಮಾಡುವ ಮೂಲಕ ಕಣ್ಣೊರೆಸುವ ತಂತ್ರ ಬೇಡ. ಇನ್ನೂ ಸದಾಶಿವ ಆಯೋಗ ವರದಿ ಅಧಿವೇಶನದಲ್ಲಿ ಮಂಡನೆಯಾಗಿಲ್ಲ, ಚರ್ಚೆಯಾಗಿಲ್ಲ. ಮೊದಲು ವಿಧಾನಸಭೆಯಲ್ಲಿ ಇದನ್ನು ಮಂಡಿಸಿ ಚರ್ಚೆ ಮಾಡಲಿ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಿ ಎಂದು ಆಗ್ರಹಿಸಿದರು.

2023ರಲ್ಲಿ ಕಾಂಗ್ರೆಸ್‌ಗೆ ಅಧಿಕಾರ: ಕಾಂಗ್ರೆಸ್‌ ಪಕ್ಷ 2023ರ ಚುನಾವಣೆಯಲ್ಲಿ ಬಹುಮತ ಪಡೆದು ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತೇವೆ ಎಂದು ಮಾಜಿ ಸಿ.ಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಬುಧವಾರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50ಕ್ಕೆ ಹೊಂದಿಕೊಂಡ ಬೆಳಗಲ್ಲ ಗ್ರಾಮದ ಸಮೀಪದಲ್ಲಿ ಮಾಜಿ ಸಚಿವ ಲಿಂ,ಎಸ್‌.ಆರ್‌.ಕಾಶಪ್ಪನವರ ಅವರ ಹೆಸರಿನ ಎಸ್‌.ಆರ್‌.ಕೆ ಶುಗರ್ಸ್‌ ಪ್ರೈವೆಟ್‌ ಲಿಮಿಟೆಡ್‌ನ ಭೂಮಿಪೂಜೆ ಮತ್ತು ನಾಮಫಲಕ ಅನಾವರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಂಪುಟ ವಿಸ್ತರಣೆಗೆ ಮತ್ತೆ ಸಮಯ ನೀಡ್ತೇನೆಂದ ಅಮಿತ್‌ ಶಾ!

ಹಸಿವು ಮುಕ್ತ ಕರ್ನಾಟಕವನ್ನು ನಿರ್ಮಾಣ ಮಾಡಲು ಕಾಂಗ್ರೆಸ್‌ ನೇತೃತ್ವದ ಸರ್ಕಾರವಿದ್ದಾಗ ಬಿಪಿಎಲ್‌ ಕಾರ್ಡ್‌ದಾರರಿಗೆ .3 ಸಾವಿರ ಕೋಟಿ ಅನುದಾನದಲ್ಲಿ ರಾಜ್ಯದ ಒಟ್ಟು 4 ಕೋಟಿ ಜನರಿಗೆ ಪ್ರತಿಯೊಬ್ಬರಿಗೆ 7 ಕೆ.ಜಿ.ಯಂತೆ ಉಚಿತ ಅಕ್ಕಿಯನ್ನು ನೀಡಿದ್ದೇವೆ. ಆದರೆ, ಬಿಜೆಪಿ ಸರ್ಕಾರ 2 ಕೆ.ಜಿ ಕಡಿತಗೊಳಿಸಿ 5 ಕೆ.ಜಿ ನೀಡುವ ಮೂಲಕ ಬಡವರ ಹೊಟ್ಟೆಯ ಮೇಲೆ ಹೊಡೆದಿದೆ. ಬೊಮ್ಮಾಯಿ ಅವರು ಇದು ಕೇಂದ್ರದ ಯೋಜನೆ ಎಂದು ಸುಳ್ಳು ಬೇರೆ ಹೇಳುತ್ತಿದ್ದಾರೆ. ಬೊಮ್ಮಾಯಿ ಜನರ ಬಗ್ಗೆ ಬರೀ ಮೊಸಳೆ ಕಣ್ಣೀರು ಹಾಕಿದರೆ ಸಾಲದು. ಎಲ್ಲಾ ಖಜಾನೆ ದುಡ್ಡು, ಇದು ಯಾರಪ್ಪನ ದುಡ್ಡಲ್ಲ. ಬಡವರಿಗಾಗಿ ದುಡ್ಡು ಖರ್ಚು ಮಾಡುವುದು ನಿಮ್ಮ ಕರ್ತವ್ಯ. ನಾವು ಮತ್ತೆ ಅಧಿಕಾರಕ್ಕೆ ಬಂದರೆ ಬಡವರಿಗೆ 10 ಕೆ.ಜಿ ಉಚಿತ ಅಕ್ಕಿ ನೀಡುತ್ತವೆ ಎಂದರು.

ಸಿ.ಟಿ.ರವಿ ವಿರುದ್ಧ ಇ.ಡಿ.ಗೆ ದೂರು: ಕಾಂಗ್ರೆಸ್‌

ಬಿಜೆಪಿಯಿಂದ ರೈತರ ಕಬ್ಬಿಗೆ ಬೆಲೆ ನಿಗದಿ ಮಾಡಲು ಆಗಲಿಲ್ಲ. ನಾವು ಅಧಿಕಾರಕ್ಕೆ ಬಂದರೆ ಕಬ್ಬು ಬೆಳೆಗಾರರು ಅಷ್ಟೇ ಅಲ್ಲ, ಎಲ್ಲ ಬೆಳೆಗಳ ಬೆಲೆ ನಿಗದಿ ಮಾಡುತ್ತೇವೆ. ನಾವು ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಸ್ಥಗಿತಗೊಂಡಿರುವ ಯೋಜನೆಗಳನ್ನೆಲ್ಲ ಮುಂದುವರಿಸುತ್ತೇವೆ. ರಾಜ್ಯದಲ್ಲಿ ಮೇಕೆದಾಟು, ಕೃಷ್ಣಾ ಮೇಲ್ದಂಡೆ ಯೋಜನೆ ಸೇರಿದಂತೆ ಎಲ್ಲವನ್ನು ಮುಗಿಸಿ ಕೊಡುತ್ತೇವೆ. ನಾವು ಅಧಿಕಾರದಲ್ಲಿ ಇದ್ದಾಗ ರಾಜ್ಯದ ನೀರಾವರಿಗಾಗಿ ಪ್ರತಿ ವರ್ಷ 10 ಸಾವಿರ ಕೋಟಿಯಂತೆ 5 ವರ್ಷದ ಅವಧಿಯಲ್ಲಿ .56 ಸಾವಿರ ಕೋಟಿ ಅನುದಾನ ಖರ್ಚು ಮಾಡಲಾಗಿದೆ. ಕಬ್ಬು ಬೆಳಗಾರರಿಗೆ ಪ್ರತಿ ಟನ್‌ಗೆ .200ರಂತೆ ಪೋ›ತ್ಸಾಹ ಧನವಾಗಿ .1800 ಕೋಟಿ ಹಣ ನೀಡಿದ್ದೇನೆ. 2 ಲಕ್ಷ ಕೃಷಿಹೊಂಡಗಳನ್ನು ನಿರ್ಮಿಸಲಾಗಿದೆ. ರೈತರ ಮತ್ತು ನೇಕಾರರ .50 ಸಾವಿರ ಸಾಲ ಮನ್ನಾ ಮಾಡಲಾಗಿದೆ ಎಂದರು.

click me!