
ಬಾದಾಮಿ (ಮಾ.24): ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಸ್ವಕ್ಷೇತ್ರ ಬಾದಾಮಿಗೆ ನಾನಾ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಭೂಮಿಪೂಜೆಗೆ ಆಗಮಿಸುತ್ತಿದ್ದಾರೆ. ಕೋಲಾರದಲ್ಲಿ ಸ್ಪರ್ಧೆ ಹೈಕಮಾಂಡ್ ಬ್ರೇಕ್ ಹಾಕಿದ ನಂತರ ಸಿದ್ದರಾಮಯ್ಯ ಅವರು ಬಾದಾಮಿಗೆ ಆಗಮಿಸುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ. ಒಂದು ವೇಳೆ ಅವರು ಮುಂದಿನ ಸ್ಪರ್ಧೆಯನ್ನು ಎಲ್ಲಿಂದ ಮಾಡಬೇಕು ಎಂಬ ತೀರ್ಮಾನವನ್ನೂ ಇಲ್ಲಿ ತೆಗೆದುಕೊಳ್ಳಬಹುದಾ ಎಂಬ ಪ್ರಶ್ನೆ ಕೂಡ ಎದುರಾಗಿದೆ. ಅಲ್ಲದೆ, ಬಾದಾಮಿಯಿಂದಲೇ ಸ್ಪರ್ಧೆ ಮಾಡುವಂತೆ ಸ್ಥಳೀಯರು ಕೂಡ ಒತ್ತಡ ಹಾಕುವ ಸಾಧ್ಯತೆ ಇದೆ ಎನ್ನಲಾಗಿದೆ.
ಪಟ್ಟಣದ ಎಪಿಎಂಸಿ ಆವರಣದಲ್ಲಿ ಮಾ.24ರಂದು ಬೆಳಗ್ಗೆ 10.30ಕ್ಕೆ ಶಾಶ್ವತ ಕುಡಿಯುವ ನೀರು ಯೋಜನೆ ಉದ್ಘಾಟನೆ ಹಾಗೂ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಭೂಮಿಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. . 228 ಕೋಟಿ ವೆಚ್ಚದಲ್ಲಿ ಬಾದಾಮಿ, ಕೆರೂರ ಸೇರಿದಂತೆ 18 ಗ್ರಾಮಗಳ ಕುಡಿಯುವ ನೀರಿನ ಯೋಜನೆ, .64 ಕೋಟಿ ವೆಚ್ಚದಲ್ಲಿ ವಿವಿಧ ರಸ್ತೆ ಕಾಮಗಾರಿ, 100 ಕೋಟಿ ವೆಚ್ಚದ ಕುಡಿಯುವ ನೀರಿನ ಯೋಜನೆ ಸೇರಿದಂತೆ ಅಂದಾಜು . 1000 ಕೋಟಿ ವೆಚ್ಚದಲ್ಲಿನ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ, ಭೂಮಿಪೂಜೆ ನಡೆಯಲಿದೆ.
ಮೈಸೂರಲ್ಲಿ ಚಿತ್ರನಗರಿ ನಿರ್ಮಾಣ ಸದ್ಯದಲ್ಲೇ ಆರಂಭ: ಸಿಎಂ ಬೊಮ್ಮಾಯಿ
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ, ಸಚಿವರಾದ ಗೋವಿಂದ ಕಾರಜೋಳ, ಮುರುಗೇಶ ನಿರಾಣಿ, ಸಂಸದ ಪಿ.ಸಿ.ಗದ್ದಿಗೌಡರ ಸೇರಿದಂತೆ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಭಾಗವಹಿಸುವರು. 50 ಸಾವಿರ ಜನ ಭಾಗವಹಿಸುವ ನಿರೀಕ್ಷೆ ಇದೆ ಎನ್ನಲಾಗಿದೆ.
1000 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ: ಪಟ್ಟಣದ ಎಪಿಎಂಸಿ ಆವರಣದಲ್ಲಿ ಮಾ.24ರಂದು ಬೆಳಗ್ಗೆ 10.30ಕ್ಕೆ ಶಾಶ್ವತ ಕುಡಿಯುವ ನೀರು ಯೋಜನೆ ಉದ್ಘಾಟನೆ ಹಾಗೂ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಭೂಮಿಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 228 ಕೋಟಿ ವೆಚ್ಚದಲ್ಲಿ ಬಾದಾಮಿ, ಕೆರೂರ ಸೇರಿದಂತೆ 18 ಗ್ರಾಮಗಳ ಕುಡಿಯುವ ನೀರಿನ ಯೋಜನೆ, .64 ಕೋಟಿ ವೆಚ್ಚದಲ್ಲಿ ವಿವಿಧ ರಸ್ತೆ ಕಾಮಗಾರಿ, .100 ಕೋಟಿ ವೆಚ್ಚದ ಕುಡಿಯುವ ನೀರಿನ ಯೋಜನೆ ಸೇರಿದಂತೆ ಅಂದಾಜು 1000 ಕೋಟಿ ವೆಚ್ಚದಲ್ಲಿನ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ, ಭೂಮಿಪೂಜೆ ನಡೆಯಲಿದೆ ಎಂದು ಮುಖಂಡ ಹೊಳಬಸು ಶೆಟ್ಟರ, ಹನಮಂತ ಯಕ್ಕಪ್ಪನವರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ, ಸಚಿವರಾದ ಗೋವಿಂದ ಕಾರಜೋಳ, ಮುರುಗೇಶ ನಿರಾಣಿ, ಸಂಸದ ಪಿ.ಸಿ.ಗದ್ದಿಗೌಡರ ಸೇರಿದಂತೆ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಭಾಗವಹಿಸುವರು. 50 ಸಾವಿರ ಜನ ಭಾಗವಹಿಸುವ ನಿರೀಕ್ಷೆ ಇದೆ ಎಂದು ಹೇಳಿದರು.
ಎಸ್‌ಸಿ, ಎಸ್‌ಟಿ ಮೀಸಲು ಹೆಚ್ಚಳ ಶೆಡ್ಯೂಲ್ 9ಕ್ಕೆ ಸೇರಿಸಿ: ಕೇಂದ್ರಕ್ಕೆ ರಾಜ್ಯದಿಂದ ಪತ್ರ
ಸುದ್ದಿಗೋಷ್ಠಿಯಲ್ಲಿ ಪುರಸಭೆ ಅಧ್ಯಕ್ಷ ರಾಜಮಹ್ಮದ್ ಬಾಗವಾನ, ಸದಸ್ಯರಾದ ಫಾರೂಖ ದೊಡಮನಿ, ಪರಶುರಾಮ ರೋಣದ, ಪಾಂಡು ಕಟ್ಟೀಮನಿ, ಮುಖಂಡರಾದ ಎಫ್.ಆರ್.ಪಾಟೀಲ(ಮಣ್ಣೇರಿ), ಶಶಿಕಾಂತ ಉದಗಟ್ಟಿ, ರೇವಣಸಿದ್ದಪ್ಪ ನೋಟಗಾರ, ಮಂಜುನಾಥ ಗುಬ್ಬಿ, ಹನಮಂತ ದೇವರಮನಿ, ಶಿವು ಮಣ್ಣೂರ, ಗುರುನಾಥ ಹುದ್ದಾರ, ಶಿವಪ್ಪ ಹನಮಸಾಗರ, ಯಮನಪ್ಪ ಶೆಟಗಾರ, ಮಹೇಶ ಪೂಜಾರ, ಚಂದ್ರಶೇಖರ ಚಿಂತಾಕಲ್, ಪ್ರವೀಣ ಜೋಗಿನ, ಬಸವರಾಜ ಬ್ಯಾಹಟ್ಟಿ, ಬಸವರಾಜ ಡೊಳ್ಳಿನ, ಸಿದ್ದನಗೌಡ ಗೌಡರ ಸೇರದಂತೆ ಇತರರು ಹಾಜರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.