
ನವದೆಹಲಿ: ಕಾಂಗ್ರೆಸ್ ಹಿರಿಯ ಧುರೀಣ, ಕೇರಳದ ಮಾಜಿ ಮುಖ್ಯಮಂತ್ರಿ ಕೆ. ಕರುಣಾಕರನ್ ಪುತ್ರಿ ಪದ್ಮಜಾ ವೇಣುಗೋಪಾಲ್ ಕಾಂಗ್ರೆಸ್ ತೊರೆದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಸಮ್ಮುಖದಲ್ಲಿ ಗುರುವಾರ ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ. ಇದು ಕೇರಳದಲ್ಲಿ ಬಿಜೆಪಿಗೆ ಆನೆಬಲ ತಂದಿದೆ. ಈ ಬಗ್ಗೆ ಮಾತನಾಡಿದ ಪದ್ಮಜಾ ಕಾಂಗ್ರೆಸ್ ಪಕ್ಷದ ಕುರಿತಾಗಿ ನನಗೆ ಕಳೆದ ವಿಧಾನಸಭಾ ಚುನಾವಣೆಯಿಂದಲೂ ಅಸಮಾಧಾನ ಇತ್ತು. ಹಿರಿಯ ನಾಯಕಿ ಸೋನಿಯಾ ಗಾಂಧಿ ಕುರಿತು ಅಪಾರ ಗೌರವವಿದ್ದರೂ ನನ್ನ ಸಮಸ್ಯೆಗಳನ್ನು ಹೇಳಿಕೊಳ್ಳಲು ಅವರ ಭೇಟಿಗೆ ಅವಕಾಶವನ್ನೇ ನೀಡಲಿಲ್ಲ. ಈ ಹಿನ್ನೆಲೆಯಲ್ಲಿ ಬೇಸತ್ತು ಪಕ್ಷ ತೊರೆದಿದ್ದೇನೆ’ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.