
ಗುವಾಹಟಿ: ಪಕ್ಷದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿ ಸೋಮವಾರವಷ್ಟೇ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಅಸ್ಸಾಂ ಕಾಂಗ್ರೆಸ್ ಘಟಕದ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೊಹ್ರಾ, ಬಿಜೆಪಿ ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ.
ಮಂಗಳವಾರ ಇಲ್ಲಿ ಬೊಹ್ರಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಈ ವಿಷಯ ಪ್ರಕಟಿಸಿದ್ದಾರೆ. ‘ಬೊಹ್ರಾ ಕಾಂಗ್ರೆಸ್‌ನಲ್ಲಿದ್ದು ಹಲವು ವರ್ಷಗಳಿಂದ ನಲುಗಿ ಹೋಗಿದ್ದಾರೆ. ಹೀಗಾಗಿ ಫೆ.22ರಂದು ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಅವರಿಗೆ ಪಕ್ಷದಲ್ಲಿ ಅವರು ಬಯಸಿದ ಸ್ಥಾನ ನೀಡಲಾಗುವುದು. ಅವರ ಸೇರ್ಪಡೆ, ಕಾಂಗ್ರೆಸ್ ಹಿಂದೂಗಳ ಇರುವ ಸ್ಥಳವಲ್ಲ ಎಂಬುದನ್ನು ಸಾಬೀತುಪಡಿಸಿದೆ’ ಎಂದು ಹೇಳಿದ್ದಾರೆ.
ಪಕ್ಷದ ಹಾಲಿ ರಾಜ್ಯಾಧ್ಷಕ್ಷ ಗೌರವ್ ಗೊಗೋಯ್ ಜೊತೆಗಿನ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಬೊಹ್ರಾ ಪಕ್ಷ ತೊರೆದಿದ್ದಾರೆ. ವಿಶೇಷವೆಂದರೆ 2014ರಲ್ಲಿ ಹಿಮಂತಾ ಕೂಡಾ ಅಂದಿನ ಕಾಂಗ್ರೆಸ್ ಮುಖ್ಯಮಂತ್ರಿ, ಗೌರವ್‌ರ ತಂದೆ ತರುಣ್ ಗೊಗೋಯ್ ಜೊತೆಗಿನ ಭಿನ್ನಾಭಿಪ್ರಾಯದ ಕಾರಣ ಪಕ್ಷ ತೊರೆದಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.