
ಬೆಂಗಳೂರು, [ಡಿ.19]: ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಅವರನ್ನು ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಬಿಜೆಪಿ ನಾಯಕಿ ಕೆ.ರತ್ನಪ್ರಭಾ ಅವರನ್ನು ರಾಜ್ಯ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕ ಮಾಡಿ ಇಂದು [ಗುರುವಾರ] ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ನಿವೃತ್ತ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಬಿಜೆಪಿ ಸೇರ್ಪಡೆ
ಇದಕ್ಕೆ ರತ್ನಪ್ರಭಾ ಅವರು ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಈ ಬಗ್ಗೆ ಅವರೇ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.
ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ನಿವೃತ್ತರಾದ ಬಳಿಕ ಕೆ.ರತ್ನಪ್ರಭಾ ಅವರು ಬಿಜೆಪಿ ಸೇರಿದ್ದರು. 37 ವರ್ಷಗಳ ಕಾಲ ಸರ್ಕಾರಿ ಕರ್ತವ್ಯದಲ್ಲಿದ್ದ ಕೆ.ರತ್ನಪ್ರಭಾ 2019ರ ಲೋಕಸಭಾ ಚುನಾವಣೆ ವೇಳೆ ಕಲಬುರಗಿಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಸೇರಿದ್ದರು.
ಅಷ್ಟೇ ಅಲ್ಲದೇ ಅಂದು ಕಲಬುರಗಿ ಲೋಕಸಭಾ ಕ್ಷೇತ್ರಕ್ಕೆ ರತ್ನಪ್ರಭಾ ಅವರ ಹೆಸರು ಕೇಳಿಬಂದಿತ್ತು. ಕೊನೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಅಂಗೀಕಾರವಾಗಿದ್ದರಿಂದ ಉಮೇಶ್ ಜಾಧವ್ ಅವರಿಗೆ ಬಿಜೆಪಿ ಟಿಕೆಟ್ ದೊರಕಿತು.
ರತ್ನಪ್ರಭಾ ಸೇವಾವಧಿ ವಿಸ್ತರಣೆಯ ಅಸಲಿ ಕಹಾನಿ ಏನು?
ರತ್ನಪ್ರಭಾ ಅವರ ಅವರ ಸೇವಾವಧಿ 2018 ಜೂನ್ 30ಕ್ಕೆ ಮುಕ್ತಾಯವಾಗಬೇಕಿತ್ತು. ಆದ್ರೆ, ಅಂದಿನ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮತ್ತೆ ಮೂರು ತಿಂಗಳ ಅವಧಿಗೆ ಅವರ ಸೇವಾವಧಿಯನ್ನು ವಿಸ್ತರಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.