ಸಿದ್ದು ಭವಿಷ್ಯದ ಸಿಎಂ ಅಂತ ಕೆಲವರು ಹೇಳಿದ್ರೆ ತಪ್ಪಿಲ್ಲ: ಪರಂ

Published : Jan 06, 2023, 01:00 AM IST
ಸಿದ್ದು ಭವಿಷ್ಯದ ಸಿಎಂ ಅಂತ ಕೆಲವರು ಹೇಳಿದ್ರೆ ತಪ್ಪಿಲ್ಲ: ಪರಂ

ಸಾರಾಂಶ

ನನಗೂ ಮುಂದಿನ ಸಿಎಂ ಎಂದು ಕೆಲವರು ಹೇಳ್ತಾರೆ.ಬೆಂಬಲಿಗರ ಬಯಕೆಗೆ ತಡೆಯೊಡ್ಡಲು ಆಗಲ್ಲ: ಕೆಪಿಸಿಸಿ ಮಾಜಿ ಅಧ್ಯಕ್ಷ ಜಿ.ಪರಮೇಶ್ವರ್‌ 

ಹೊಸಪೇಟೆ(ಜ.06): ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಭವಿಷ್ಯದ ಸಿಎಂ ಎಂದು ಕೆಲ ಶಾಸಕರು ಹೇಳಿದರೆ ಅದರಲ್ಲಿ ಏನೂ ತಪ್ಪಿಲ್ಲ. ನನಗೂ ಕೆಲವರು ಮುಂದಿನ ಸಿಎಂ ಎಂದು ಹೇಳುತ್ತಾರೆ. ಬೆಂಬಲಿಗರ ಆಶಯಕ್ಕೆ ನಾವು ತಡೆಯೊಡ್ಡಲು ಆಗುತ್ತದೆಯೇ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ಜಿ.ಪರಮೇಶ್ವರ್‌ ಪ್ರಶ್ನಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಾಸಕಾಂಗ ಪಕ್ಷದ ನಾಯಕರು. ಹೀಗಾಗಿ ಸಹಜವಾಗಿ ಶಾಸಕರು ಭವಿಷ್ಯದ ಸಿಎಂ ಎಂದು ಹೇಳುತ್ತಾರೆ. ಕೆಲವರಿಗೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಸಿಎಂ ಆಗಬೇಕು ಎಂದಿರುತ್ತೆ. ನನ್ನ ಹೆಸರನ್ನೂ ಕೆಲವರು ಹೇಳುತ್ತಾರೆ. ಇದು ಅವರ ಬಯಕೆ, ಅದಕ್ಕೆ ನಾವು ಕಡಿವಾಣ ಹಾಕಲು ಬರುವುದಿಲ್ಲ ಎಂದರು. ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿ ಸಿಎಂ ಆಗಬೇಕೆಂಬ ವಿಷಯದಲ್ಲಿ ಯಾರೂ ಮೌನವಾಗಿಲ್ಲ. ಸಂದರ್ಭ ಬಂದಾಗ ನಿರ್ಧಾರವಾಗುತ್ತದೆ ಎಂದರು.

ಸಿಎಂ ಬೊಮ್ಮಾಯಿಯನ್ನು ನಾಯಿಗೆ ಹೋಲಿಸಿದ ಸಿದ್ದರಾಮಯ್ಯ

ಕಾಂಗ್ರೆಸ್‌ನಲ್ಲಿ ಚುನಾವಣೆ ನಂತರ ಶಾಸಕಾಂಗ ಪಕ್ಷದ ಸಭೆ ಕರೆದು, ಶಾಸಕರ ಅಭಿಪ್ರಾಯ ಪಡೆದು ಒಮ್ಮತದಿಂದ ಸಿಎಂ ಆಯ್ಕೆ ಮಾಡುತ್ತಾರೆ. ಇದು ನಮ್ಮ ಪದ್ಧತಿ. ಬಿಜೆಪಿಯವರನ್ನು ಮೆಚ್ಚಿಸಲು ತೀರ್ಮಾನ ಕೈಗೊಳ್ಳುವುದಿಲ್ಲ ಎಂದರು.
ಶಾಸಕರನ್ನು ಗೆಲ್ಲಿಸಿ ಅಂದ್ರೆ ತಪ್ಪೇನು?: ಮಾಜಿ ಸಿಎಂ ಸಿದ್ದರಾಮಯ್ಯನವರು ಶಾಸಕಾಂಗ ಪಕ್ಷದ ನಾಯಕರು. ಒಂದು ಕ್ಷೇತ್ರದ ಪ್ರಚಾರಕ್ಕೆ ಹೋದಾಗ ಕಾಂಗ್ರೆಸ್‌ ಗೆಲ್ಲಿಸಿ, ನಮ್ಮ ಹಾಲಿ ಶಾಸಕರನ್ನು ಗೆಲ್ಲಿಸಿ ಎಂದು ಹೇಳಿದರೆ ತಪ್ಪೇನೂ ಇಲ್ಲ. ಹಗರಿಬೊಮ್ಮನಹಳ್ಳಿ ಶಾಸಕ ಭೀಮಾ ನಾಯ್ಕ ಅವರಿಗೆ ಮತ್ತೆ ಟಿಕೆಟ್‌ ಕೊಡುವ ಸೂಚನೆಗಳಿವೆ. ಹೀಗಾಗಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯನವರು ಹಾಗೇ ಹೇಳಿರಬಹುದು. ನಾನೂ ಒಬ್ಬ ಶಾಸಕನ ಕ್ಷೇತ್ರಕ್ಕೆ ಹೋದರೆ ಅವರನ್ನು ಗೆಲ್ಲಿಸಿ ಎಂದು ಹೇಳಿದರೆ ತಪ್ಪೇನಿಲ್ಲ ಎಂದರು. ವಿಜಯನಗರ ಕ್ಷೇತ್ರದಲ್ಲೂ ಸಮರ್ಥರಿಗೆ ಟಿಕೆಟ್‌ ನೀಡಲಾಗುವುದು. ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಎಲ್ಲ ಮಾನದಂಡ ಪರಿಗಣಿಸಿ ಟಿಕೆಟ್‌ ಅಂತಿಮಗೊಳಿಸಲಾಗುವುದು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ