ಶಿವಮೊಗ್ಗ ಕಲ್ಲು ತೂರಾಟ ಪ್ರಕರಣಕ್ಕೆ ಕಾಂಗ್ರೆಸ್ ಸರ್ಕಾರ ಕುಮ್ಮಕ್ಕು: ಈಶ್ವರಪ್ಪ ಆರೋಪ ಹೊಸದೇನಲ್ಲ, ಸವದಿ

Published : Oct 03, 2023, 08:28 PM ISTUpdated : Oct 03, 2023, 08:29 PM IST
ಶಿವಮೊಗ್ಗ ಕಲ್ಲು ತೂರಾಟ ಪ್ರಕರಣಕ್ಕೆ ಕಾಂಗ್ರೆಸ್ ಸರ್ಕಾರ ಕುಮ್ಮಕ್ಕು: ಈಶ್ವರಪ್ಪ ಆರೋಪ ಹೊಸದೇನಲ್ಲ, ಸವದಿ

ಸಾರಾಂಶ

ಈಶ್ವರಪ್ಪನವರು ಇಂತಹ ಆರೋಪ ಮಾಡುವುದು ಹೊಸದಲ್ಲ. ಬಿಜೆಪಿಯವರು ಹಿಂದುತ್ವ ಆಧಾರದ ಮೇಲೆ ಚುನಾವಣೆ ಮಾಡುತ್ತಾರೆ. ಕಾಂಗ್ರೆಸ್ ಪಕ್ಷ ಎಲ್ಲ ಜನರನ್ನೂ ಒಟ್ಟಿಗೆ ತೆಗೆದುಕೊಂಡು ಕಾರ್ಯ ಮಾಡುತ್ತದೆ. ಕೆ.ಎಸ್‌.ಈಶ್ವರಪ್ಪನವರು ಹಿಂದುತ್ವವನ್ನು ಪ್ರತಿಪಾದನೆ ಮಾಡುತ್ತಾರೆ: ಕಾಂಗ್ರೆಸ್‌ ಶಾಸಕ ಲಕ್ಷ್ಮಣ ಸವದಿ 

ಬೆಳಗಾವಿ(ಅ.03):  ಆಡಳಿತ ಪಕ್ಷದಲ್ಲೇ ಇದ್ದು ಓರ್ವ ಮಂತ್ರಿಯಾಗಿ ಇಂತಹ ಹೇಳಿಕೆ ನೀಡುತ್ತಿದ್ದರು. ಸ್ವಪಕ್ಷದ ಸಿಎಂ ಮೇಲೆ ಆಪಾದನೆ ಮಾಡುತ್ತಿದ್ದರು. ಸದ್ಯ ವಿರೋಧ ಪಕ್ಷದಲ್ಲಿದ್ದಾರೆ. ಇದೇನು ಹೊಸದೇನಲ್ಲ ಎನ್ನುವ ಮೂಲಕ ಮಾಜಿ ಸಚಿವ ಈಶ್ವರಪ್ಪ ಅವರಿಗೆ ಅಥಣಿ ಕಾಂಗ್ರೆಸ್‌ ಶಾಸಕ ಲಕ್ಷ್ಮಣ ಸವದಿ ತಿರುಗೇಟು ನೀಡಿದರು.

ಶಿವಮೊಗ್ಗದಲ್ಲಿ ಕಲ್ಲು ತೂರಾಟ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರ ಕುಮ್ಮಕ್ಕು ಎಂಬ ಈಶ್ವರಪ್ಪ ಹೇಳಿಕೆ ವಿಚಾರವಾಗಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪನವರು ಇಂತಹ ಆರೋಪ ಮಾಡುವುದು ಹೊಸದಲ್ಲ. ಬಿಜೆಪಿಯವರು ಹಿಂದುತ್ವ ಆಧಾರದ ಮೇಲೆ ಚುನಾವಣೆ ಮಾಡುತ್ತಾರೆ. ಕಾಂಗ್ರೆಸ್ ಪಕ್ಷ ಎಲ್ಲ ಜನರನ್ನೂ ಒಟ್ಟಿಗೆ ತೆಗೆದುಕೊಂಡು ಕಾರ್ಯ ಮಾಡುತ್ತದೆ. ಕೆ.ಎಸ್‌.ಈಶ್ವರಪ್ಪನವರು ಹಿಂದುತ್ವವನ್ನು ಪ್ರತಿಪಾದನೆ ಮಾಡುತ್ತಾರೆ ಎಂದು ಹೇಳಿದರು.

ಬಿಜೆಪಿ- ಜೆಡಿಎಸ್‌ ಮೈತ್ರಿ: ಯಡಿಯೂರಪ್ಪ ಜೈಲಿಗೆ ಹೋಗಲು ಕುಮಾರಸ್ವಾಮಿ ಕಾರಣ, ಲಕ್ಷ್ಮಣ ಸವದಿ

ಶಾಮನೂರು ಶಿವಶಂಕರಪ್ಪ ಲಿಂಗಾಯತರನ್ನು ಕಾಂಗ್ರೆಸ್ ಕಡೆಗಣಿಸಿದೆ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಯಾವ ಅರ್ಥದಲ್ಲಿ ಹೇಳಿದ್ದಾರೆ ಎಂಬುವುದು ಗೊತ್ತಿಲ್ಲ ಎಂದು ತಿಳಿಸಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ