ಬರುವ ಮೇ ತಿಂಗಳಿನಲ್ಲಿ ಜರಗುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ 140ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಲಕ್ಷ್ಮಣ ಸವದಿ
ಅಥಣಿ(ಮಾ.10): ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆಗಳನ್ನು ಜನರ ಮುಂದಿಡಲು ರಾಜ್ಯಾದ್ಯಂತ ವಿಜಯ ಸಂಕಲ್ಪ ಯಾತ್ರೆ ನಡೆಯುತ್ತಿದೆ. ಸರ್ಕಾರದ ಸಾಧನೆಗಳನ್ನು ಜನರು ಮೆಚ್ಚಿದ್ದು, ಜನರ ಮನಸ್ಸಿನಲ್ಲಿ ಬಿಜೆಪಿ ಪಕ್ಷವಿದೆ. ಹಾಗಾಗಿ ಸಾಧನೆಗಳನ್ನು ಮನೆ ಮನೆಗೆ ತಲುಪಿಸಬೇಕು ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದರು.
ಕಾಗವಾಡ ವಿಧಾನಸಭಾ ಮತಕ್ಷೇತ್ರದ ಐನಾಪುರ ಪಟ್ಟಣದಲ್ಲಿ ಗುರುವಾರ ಏರ್ಪಡಿಸಿದ ಬಿಜೆಪಿ ಸಂಕಲ್ಪ ಯಾತ್ರೆಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯಕ್ಕೆ ಬೇಕಾಗಿರುವುದು ಜನರ ಅಭಿವೃದ್ಧಿ ಬಯಸುವ ಸರ್ಕಾರ. ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಕಾಗವಾಡ ಮತ್ತು ಅಥಣಿ ಮತಕ್ಷೇತ್ರಗಳು ಸೇರಿದಂತೆ ರಾಜ್ಯದ ತುಂಬೆಲ್ಲ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು, ಬರುವ ಮೇ ತಿಂಗಳಿನಲ್ಲಿ ಜರಗುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ 140ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅತಿರಥರ ಅಖಾಡ: ಬೆಳಗಾವಿಯಲ್ಲಿ ಹೇಗಿದೆ ರಣಕಣ?
ಮಾಜಿ ಸಚಿವ ರಮೇಶ ಜಾರಕಿಹೊಳಿ ಮಾತನಾಡಿ, ಬಹುದಿನಗಳಿಂದ ಬೇಡಿಕೆಯಾಗಿ ಉಳಿದಿರುವ ಬಸವೇಶ್ವರ ಏತ ನೀರಾವರಿ ಯೋಜನೆಯನ್ನು ಆದಷ್ಟು ಬೇಗನೆ ಮುಗಿಸಿ ಮುಖ್ಯಮಂತ್ರಿಗಳಿಂದ ಉದ್ಘಾಟಿಸುತ್ತವೆ. ನಾನು ಲಕ್ಷ್ಮಣ ಸವದಿ ಹಾಗೂ ಶ್ರೀಮಂತ ಪಾಟೀಲ ಮತ್ತು ಮಹೇಶ ಕುಮಟಳ್ಳಿ ಕೂಡಿ ಕಾಗವಾಡ ಮತ್ತು ಅಥಣಿ ಮತಕ್ಷೇತ್ರಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವುದಾಗಿ ಭರವಸೆ ನೀಡಿದರು.
ಈ ವೇಳೆ ಸಚಿವ ಶಶಿಕಲಾ ಜೊಲ್ಲೆ, ಶಾಸಕ ಶ್ರೀಮಂತ ಪಾಟೀಲ ಮಾತನಾಡಿದರು. ಬಿಜೆಪಿ ಸಂಕಲ್ಪ ಯಾತ್ರೆಯಲ್ಲಿ ಜಿಲ್ಲಾ ಅಧ್ಯಕ್ಷ ಡಾ.ರಾಜೇಶ ನೇರ್ಲಿ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಅರುಣ ಶಹಾಪುರ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ದೀಪಕ ಪಾಟೀಲ, ಜಿಲ್ಲಾ ಉಪಾಧ್ಯಕ್ಷ ವಿನಾಯಕ ಬಾಗಡಿ, ಕೆಎಂಎಫ್ ನಿರ್ದೇಶಕ ಅಪ್ಪಾಸಾಬ್ ಅವತಾಡೆ, ಮುಖಂಡರಾದ ರಾಜೇಂದ್ರ ಪೋತದಾರ, ದಾದಾ ಪಾಟೀಲ, ಸತೀಶ ಅಪ್ಪಾಜಿಗೋಳ, ಅಭಯ ಮಾನ್ವಿ, ಅಭಯಕುಮಾರ ಅಕಿವಾಟೆ, ಅಭಯಕುಮಾರ ಅಕಿವಾಟೆ, ನಾನಾಸಾಹೇಬ್ ಅವತಾಡೆ, ನಿಂಗಪ್ಪ ಖೋಕಲೆ, ಡಾ.ಮೋಹನರಾವ್ ಕಾರ್ಚಿ, ಯೋಗೇಶ ಪೋತದಾರ, ಉತ್ಕರ್ಷ ಪಾಟೀಲ, ಅಣ್ಣಾಸಾಬ್ ಡೂಗನವರ, ಭೂತಾಳಿ ಥರಥರೆ ಸೇರಿದಂತೆ ಅನೇಕರು ಇದ್ದರು.
ಶ್ರೀಸಿದ್ದೇಶ್ವರ ದೇವಸ್ಥಾನದಿಂದ ಐನಾಪುರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಕಲ್ಪ ಯಾತ್ರೆಯ ಭವ್ಯ ಮೆರವಣಿಗೆ ಜರುಗಿತು.ನೂರಾರು ಬೈಕ್‌ಗಳ ಮೇಲೆ ಕಾರ್ಯಕರ್ತರು ರಾರಯಲಿಯಲ್ಲಿ ಪಾಲ್ಗೊಟಡಿದ್ದರು. ಐನಾಪುರ ಪಟ್ಟಣದ ಗಾಂಧಿ ಚೌಕನಲ್ಲಿ ವಿಜಯ ಸಂಕಲ್ಪ ಯಾತ್ರೆಯ ಮುಖಂಡರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.
Party Rounds: ಬೆಳಗಾವಿ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ರಮೇಶ್ ಜಾರಕಿಹೊಳಿ ನಡೆ
ರಾಜ್ಯಕ್ಕೆ ಬೇಕಾಗಿರುವುದು ಜನರ ಅಭಿವೃದ್ಧಿ ಬಯಸುವ ಸರ್ಕಾರ. ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಕಾಗವಾಡ ಮತ್ತು ಅಥಣಿ ಮತಕ್ಷೇತ್ರಗಳು ಸೇರಿದಂತೆ ರಾಜ್ಯದ ತುಂಬೆಲ್ಲ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು, ಬರುವ ಮೇ ತಿಂಗಳಿನಲ್ಲಿ ಜರಗುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ 140ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಅಂತ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.
ನಾನು ಪೂರ್ವ ನಿಯೋಜಿತ ಕಾರ್ಯಕ್ರಮ ಇರುವುದರಿಂದ ಅಲ್ಲಿಗೆ ಹೋಗಿದ್ದೆ. ನಿಪ್ಪಾಣಿಯಲ್ಲಿ ನಡೆದ ಜನ ಸಂಕಲ್ಪ ಯಾತ್ರೆಗೆ ನಾನು ಬೇಕು ಅಂತಾ ಗೈರಾಗಿಲ್ಲ. ಬಿಜೆಪಿಯಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವೆಲ್ಲರೂ ಒಂದಾಗಿ ಒಗ್ಗಟ್ಟಾಗಿದ್ದೇವೆ ಅಂತ ಮಾಜಿ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.