ನನ್ನ ಪುತ್ರ ನಿಖಿಲ್ ಕುಮಾರಸ್ವಾಮಿ, ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾ ವಣೆಯಲ್ಲಿ ಪರಾಜಯ ಹೊಂ ದಿದ್ದಾನೆ, ಒಪ್ಪುತ್ತೇನೆ. ಚುನಾವಣೆ ವ್ಯವಸ್ಥೆಯಲ್ಲಿ ಸೋಲು- ಗೆಲುವು ಇದ್ದೇ ಇರುತ್ತದೆ ಹಾಗೂ ಒಬ್ಬರು ಗೆಲ್ಲಬೇಕಾದರೆ ಇನ್ನೊಬ್ಬರು ಸೋಲಲೇಬೇಕಾಗುತ್ತದೆ. ಆದರೆ, ಸೋಲಿಗೆ ಅನೇಕ ಕಾರಣಗಳಿರುತ್ತವೆ. ಹಾಗೆಂದು ನಿಖಿಲ್ ಸೋಲಿನ ಕಾರಣಗಳ ಬಗ್ಗೆ ಚರ್ಚಿಸುವುದು ನನ್ನ ಉದ್ದೇಶವಲ್: ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ
ಬೆಂಗಳೂರು(ನ.26): ನನ್ನ ಮಗ ಮೂರನೇ ಸಲ ಸೋತಿದ್ದಾನೆ. ಅವನು ಚುನಾವಣೆಯಲ್ಲಿ ಮಾತ್ರ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಸೋತಿಲ್ಲ. ಅವನ ಮಾನವೀಯತೆ, ಸಹೃದಯತೆ ಸೋತಿಲ್ಲ ಎಂದು ನಿಖಿಲ್ ಕುಮಾರಸ್ವಾಮಿಯವರ ತಾಯಿ, ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.
ಚನ್ನಪಟ್ಟಣ ಕ್ಷೇತ್ರದ ಫಲಿತಾಂಶದ ನಂತರ ಇದೇ ಮೊದಲ ಬಾರಿಗೆ 'ಎಕ್ಸ್' ಜಾಲತಾಣದಲ್ಲಿ ಭಾವನಾತ್ಮಕ ಪೋಸ್ಟ್ ಮಾಡಿರುವ ಅನಿತಾ ಕುಮಾರಸ್ವಾಮಿಯ ಅವರು ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದಾರೆ.
undefined
ಸಿನಿಮಾನೂ ಇಲ್ಲ.. ರಾಜಕೀಯವೂ ಇಲ್ಲ.. ನಿಖಿಲ್ ಅತಂತ್ರ! ಕುರುಕ್ಷೇತ್ರ ಸಿನಿಮಾದಿಂದ ಅಂಟಿತಾ ನಿಖಿಲ್ಗೆ ಶಾಪ?
ಅನಿತಾರವರ ಪೋಸ್ಟ್ ಹೀಗಿದೆ:
ನನ್ನ ಪುತ್ರ ನಿಖಿಲ್ ಕುಮಾರಸ್ವಾಮಿ, ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾ ವಣೆಯಲ್ಲಿ ಪರಾಜಯ ಹೊಂ ದಿದ್ದಾನೆ, ಒಪ್ಪುತ್ತೇನೆ. ಚುನಾವಣೆ ವ್ಯವಸ್ಥೆಯಲ್ಲಿ ಸೋಲು- ಗೆಲುವು ಇದ್ದೇ ಇರುತ್ತದೆ ಹಾಗೂ ಒಬ್ಬರು ಗೆಲ್ಲಬೇಕಾದರೆ ಇನ್ನೊಬ್ಬರು ಸೋಲಲೇಬೇಕಾಗುತ್ತದೆ. ಆದರೆ, ಸೋಲಿಗೆ ಅನೇಕ ಕಾರಣಗಳಿರುತ್ತವೆ. ಹಾಗೆಂದು ನಿಖಿಲ್ ಸೋಲಿನ ಕಾರಣಗಳ ಬಗ್ಗೆ ಚರ್ಚಿಸುವುದು ನನ್ನ ಉದ್ದೇಶವಲ್ಲ. ರಾಜಕಾರಣದಲ್ಲಿ ನನಗಾಗಲಿ, ನನ್ನ ಪತಿಗಾಗಲಿ ಅಥವಾ ನನ್ನ ಪೂಜ್ಯ ಮಾವನವರಿಗೇ ಆಗಲಿ ಗೆಲುವು, ಸೋಲು ಹೊಸದೇನಲ್ಲ. ಎರಡನ್ನೂ ಸಮಚಿತ್ತದಿಂದ ಸ್ವೀಕರಿಸಿದ್ದೇವೆ. ಗೆದ್ದಾಗ ಬೀಗಿಲ್ಲ. ಸೋತಾಗ ಕುಗ್ಗಿಲ್ಲ. ಸೋತ ಹತಾಶೆಯಲ್ಲಿ ಅನ್ಯರನ್ನು ಹೀಗಳೆದಿಲ್ಲ. ನನ್ನ ಮಗನಿಗೂ ಇದೇ ಅನ್ವಯ ಆಗುತ್ತದೆ.
ನನ್ನ ಮಗನ ಬಗ್ಗೆ ರಾಜ್ಯದ ಜನತೆಗೆ ಹೆಚ್ಚೇನೂ ಹೇಳುವ ಅಗತ್ಯವಿಲ್ಲ. ಅವನು ಒಳ್ಳೆಯ ಮಗ, ಒಳ್ಳೆಯ ಪತಿ, ಒಳ್ಳೆಯ ತಂದೆ. ರಾಜಕಾರಣಕ್ಕೆ ಬರುವ ಮುನ್ನ ಒಳ್ಳೆಯ ನಾಯಕ ನಟ. ಅವನಂಥ ಒಳ್ಳೆಯ ಮಗನನ್ನು ಪಡೆದಿದ್ದಕ್ಕಾಗಿ ನಾನು, ನನ್ನ ಪತಿ ಹೆಮ್ಮೆಪಡುತ್ತೇವೆ. ತಾಯಿಯಾಗಿ ಅವನ ಯಶಸ್ಸನ್ನು ಸಂಭ್ರಮಿಸುತ್ತೇನೆ. ಅವನಿಗೆ ಕಷ್ಟ ಎದುರಾದಾಗ ಕಣ್ಣೀರಿಟ್ಟಿದ್ದೇನೆ. ನನ್ನ ಕರುಳಬಳ್ಳಿಯ ಮೇಲೆ ನನಗಷ್ಟು ಮಮಕಾರ ಇರುತ್ತದಲ್ಲವೇ?. ನನ್ನಂತಹ ಎಲ್ಲಾ ತಾಯಂದಿರಿಗೂ ನನ್ನ ಭಾವನೆಗಳು ಅರ್ಥವಾಗುತ್ತವೆ ಎನ್ನುವ ವಿಶ್ವಾಸ ನನ್ನದು.
ಮಾಜಿ ಸಿಎಂ ಪುತ್ರರಿಗೆ ಆಘಾತಕಾರಿ ಸೋಲು: ಅವಿರತ ಶ್ರಮ ವ್ಯರ್ಥ
ನನ್ನ ಮಗ 3ನೇ ಸಲ ಸೋತಿದ್ದಾನೆ. ಅವನು ಚುನಾವಣೆಯಲ್ಲಿ ಮಾತ್ರ ಸೋತಿದ್ದಾನೆಯೇಹೊರತುಮನುಷ್ಯನಾಗಿ ಸೋತಿಲ್ಲ. ಅವನ ಮಾನವೀಯತೆ, ಸಹೃದಯತೆ ಸೋತಿಲ್ಲ. ಅವನ ಮನಸ್ಸು, ಹೃದಯ ವೈಶಾಲ್ಯತೆ ಏನೆಂದು ತಾಯಿಯಾಗಿ ನನಗೆ ಚೆನ್ನಾಗಿ ಗೊತ್ತು. ನಾನು ಸದಾ ಆ ಭಗವಂತನಲ್ಲಿ ನಂಬಿಕೆ ಇಟ್ಟಿದ್ದೇನೆ. ನನ್ನ ಮಗನ ಮೇಲೆ ಆ ದೈವದ ಕರುಣೆ, ಅನುಗ್ರಹವಿದೆ ಹಾಗೂ ಚನ್ನಪಟ್ಟಣ ಜನತೆಯ ಪ್ರೀತಿ ವಿಶ್ವಾಸವೂ ಸದಾ ಅವನ ಮೇಲಿರುತ್ತದೆ. ಇಂದಲ್ಲ, ನಾಳೆ ಜನಸೇವೆ ಮಾಡುವ ಅವಕಾಶ ಅವನಿಗೆ ಸಿಕ್ಕೇ ಸಿಗುತ್ತದೆ ಎನ್ನುವ ಅಚಲ ನಂಬಿಕೆ ನೆನ್ನದು ಎಂದು ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.
ಜೆಡಿಎಸ್ ಬೇಕಿಲ್ಲವೆಂದು ಮುಸ್ಲಿಂ ಸಮುದಾಯದ ಸಂದೇಶ: ಸೋಲಿನ ಬೆನ್ನಲ್ಲೇ ನಿಖಿಲ್ ಬೇಸರ
ಬೆಂಗಳೂರು : ಚನ್ನಪಟ್ಟಣ ಸೋಲಿನ ಬೆನ್ನಲ್ಲೇ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಪರೋಕ್ಷವಾಗಿ ಮುಸ್ಲಿಂ ಸಮುದಾಯದ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ‘ಚನ್ನಪಟ್ಟಣದಲ್ಲಿ ನಮ್ಮ ಸಾಂಪ್ರದಾಯಕ ಮತಗಳು ಹೆಚ್ಚಾಗಿದ್ದರೂ, ನಾವು ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಸಾಕಷ್ಟು ಪ್ರಯತ್ನ ಪಟ್ಟರೂ ಆ ಒಂದು ಸಮುದಾಯ ಮಾತ್ರ ನಮ್ಮ ಅವಶ್ಯಕತೆ ಅವರಿಗಿಲ್ಲ ಎನ್ನುವ ಸ್ಪಷ್ಟ ಸಂದೇಶವನ್ನು ನೀಡಿದೆ’ ಎಂದು ನಿಖಿಲ್ ಕುಮಾರಸ್ವಾಮಿ ತೀಕ್ಷ್ಣವಾಗಿ ಹೇಳಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರು ಆ ಒಂದು ಸಮುದಾಯದ (ಮುಸ್ಲಿಂ) ಪರವಾಗಿ ಈ ಹಿಂದೆ ಅನೇಕ ಹೋರಾಟಗಳನ್ನು ಮಾಡಿದ್ದರು. ಅವರ ಪರವಾಗಿ ಅನೇಕ ನಿರ್ಣಯಗಳನ್ನು ಕೈಗೊಂಡಿದ್ದರು. ಮೀಸಲಾತಿ ನೀಡಿದ್ದರು ಎಂದು ತಿಳಿಸಿದರು.