ಪಕ್ಷ ಸೇರಿದ ನಾಲ್ಕೇ ದಿನದಲ್ಲಿ ಅಣ್ಣಾಮಲೈಗೆ ಬಿಜೆಪಿಯಿಂದ ಭರ್ಜರಿ ಗಿಫ್ಟ್...!

By Suvarna News  |  First Published Aug 29, 2020, 8:17 PM IST

ಇತ್ತೀಚೆಗಷ್ಟೇ ಬಿಜೆಪಿಗೆ ಸೇರ್ಪಡೆಯಾಗಿದ್ದ ಕರ್ನಾಟಕ ಸಿಂಗಂ ಖ್ಯಾತಿಯ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರಿಗೆ ಪಕ್ಷ ಭರ್ಜರಿ ಗಿಫ್ಟ್ ಕೊಟ್ಟಿದೆ. ಈ ಮೂಲಕ ಅವರನ್ನ ಗೌರವಿಸಿದೆ.


ಚೆನ್ನೈ, (ಆ.29):  ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನ ತಮಿಳುನಾಡು ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಆಗಸ್ಟ್ 25 ರಂದು ಅಣ್ಣಾಮಲೈ ಬಿಜೆಪಿಗೆ ಸೇರ್ಪಡೆಯಾಗಿದ್ದು ಅವರಿಗೆ ನಿರೀಕ್ಷೆಯಂತೆ ತಮಿಳುನಾಡು ಬಿಜೆಪಿ ಘಟಕದಲ್ಲಿ ಉನ್ನತ ಸ್ಥಾನ ನೀಡಲಾಗಿದೆ.  ತಮಿಳುನಾಡಿನಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗಾಗಿ ಈ ಹುದ್ದೆ ಕೊಡಲಾಗಿದೆ.

Tap to resize

Latest Videos

undefined

ಮೊನ್ನೇ ಅಷ್ಟೇ ಬಿಜೆಪಿ ಸೇರಿದ್ದ ಮಾಜಿ IPS ಅಣ್ಣಾಮಲೈ ವಿರುದ್ಧ ಕೇಸ್ ಬುಕ್

ಇನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್. ಮುರುಗನ್ ಪ್ರತಿಕ್ರಿಯಿಸಿ, ಪಕ್ಷದ ಉಪಾಧ್ಯಕ್ಷರಾದ ಅಣ್ಣಾಮಲೈ ಯಶಸ್ವಿಯಾಗಲಿದ್ದಾರೆ ಎಂದು ವಿಶ್ವಾಸವ್ಯಕ್ತಪಡಿಸಿದ್ದಾರೆ.

 ಕೊಯಮತ್ತೂರಿನ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಣ್ಣಾಮಲೈ ಲಾಕ್ಡೌನ್ ನಿಯಮ ಉಲ್ಲಂಘಿಸಿ ಅಧಿಕ ಜನರನ್ನು ಸೇರಿಸಿದ್ದಾರೆ ಎನ್ನುವ ಆರೋಪದ ಮೇಲೆ ಅಣ್ಣಾಮಲೈ ಮತ್ತು ಬಿಜೆಪಿ ಕಾರ್ಯಕರ್ತರ ವಿರುದ್ಧ ಕೇಸ್ ದಾಖಲಿಸಲಾಗಿದ್ದನ್ನು ಇಲ್ಲಿ ಸ್ಮರಿಸಬಹದು.

click me!