
ಗದಗ(ಫೆ.04): 'ಮಾತನಾಡಿದರೆ ಪಕ್ಷಕ್ಕೆ ಡ್ಯಾಮೇಜ್ ಆಗಬಹುದು ಎಂದು ನಾನು ಇಷ್ಟು ದಿನ ಸುಮ್ಮನೆ ಇದ್ದೆ. ಆದರೆ, ಇನ್ನು ಮುಂದೆ ಸುಮ್ಮನೆ ಇರೋದಿಲ್ಲ. ಇನ್ನು ಮುಂದೆ ನಾನು ಯಾರ ಮುಲಾಜೂ ಇಲ್ಲದೆ ಮಾತನಾಡು ತ್ತೇನೆ. ಈ ಬಾರಿ ನಮ್ಮಂಥವರನ್ನು ಅವಮಾನ ಮಾಡಿದರೆ ಸುಮ್ಮ ನಿರಲ್ಲ, ಬೀದಿಗೆ ಇಳಿದು ಮಾತನಾಡುತ್ತೇನೆ' ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತ ನಾಡಿ, ದೆಹಲಿಗೆ ಅಪಾಯಿಂಟ್‌ಮೆಂಟ್ ಮೇಲೆಯೇ ಹೋಗಬೇಕು ಎಂದೇನೂ ಇಲ್ಲ, ಅವಕಾಶ ಸಿಕ್ಕಾಗಲೆಲ್ಲ ಹೋಗುತ್ತಿರುತ್ತೇನೆ. ಮುಂದೆಯೂ ಹೋಗುತ್ತೇನೆ. ಎಲ್ಲ ವಿಚಾರವನ್ನು ವನ್ನು ಹೈಕಮಾಂಡ್‌ಗೆ ಹೇಳಿ ಬರುತ್ತೇನೆ. ನಾನು ಪಕ್ಷ ಬಿಡುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ, ಪಕ್ಷ ಬಿಡುವ ಸಂದರ್ಭ ಬಂದಲ್ಲಿ ಹೇಳಿಯೇ ಹೋಗುತ್ತೇನೆ. ಆದರೆ ಬಡವರು, ಶ್ರಮಿಕರು, ರೈತರ ಪರ ಇರುವ ಕಾರ್ಯಕರ್ತರ ಜತೆ ಇರುತ್ತೇನೆ ಎಂ ಎಂದು ಹೇಳಿದರು.
ಆಂಧ್ರಪ್ರದೇಶ ರಾಜ್ಯಸಭೆ ಸೀಟಿನ ಮೇಲೆ ಬಿ.ಶ್ರೀರಾಮುಲು ಕಣ್ಣು?
ಬಿಜೆಪಿ ನನಗೆ ಎಲ್ಲ ಅವಕಾಶಗಳನ್ನು ನೀಡಿದೆ. ಪಕ್ಷ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ. ಒಂದು ವೇಳೆ, ನಾನು ಹೋಗಬೇಕು ಅಂದುಕೊಂಡರೆ ನನ್ನನ್ನು ತಡೆಯೋಕೆ ಆಗುತ್ತಾ? ಜೈಲಿನಲ್ಲಿ ಇಡೋಕ್ಕೆ ಆಗುತ್ತಾ? ಈಗಿನ ಕಾಲದಲ್ಲಿ ಯಾರು, ಯಾರ ಮಾತನ್ನೂ ಕೇಳೋಲ್ಲ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಕಾರ್ಯ ನಿರ್ವಹಿಸುತ್ತಿದ್ದರೂ ಭಿನ್ನಾಭಿಪ್ರಾಯಗಳಿವೆ. ಈ ಕುರಿತು ರಾಷ್ಟ್ರೀಯ ನಾಯಕರು ಕೂರಿಸಿ ಮಾತನಾಡುವ ಕೆಲಸ ಮಾಡಬೇಕು. ವಿಜಯಪುರ ಭಾಗದ ಜನ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು, ಬೆಳಗಾವಿ ಭಾಗದ ಜನ ರಮೇಶ್ ಜಾರಕಿಹೊಳಿ ಅವರನ್ನು, ಉತ್ತರ ಕನ್ನಡ ಭಾಗದ ಜನ ಅನಂತಕುಮಾರ್ ಅವರನ್ನು, ಹೈದರಾಬಾದ್ ಕರ್ನಾಟಕ ಭಾಗದ ಜನ ಶ್ರೀರಾಮುಲು ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಬೇಕೆಂದು ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಏನೇ ಆಗಲಿ, ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ ಎಂದರು.
ರೆಡ್ಡಿ ಜೊತೆಗೆ ತಿಕ್ಕಾಟ ಬೆನ್ನಲ್ಲೇ ಚಿಗುರಿತು ದೋಸ್ತಿ: ರಾಮುಲು, ಜಾರಕಿಹೊಳಿ ಈಗ ಭಾಯಿ- ಭಾಯಿ!
ಬಿಜೆಪಿ ಬಿಡೋದಿಲ್ಲ
ಬಿಜೆಪಿ ನನಗೆ ಎಲ್ಲ ಅವಕಾಶಗಳನ್ನು ನೀಡಿದೆ. ಪಕ್ಷ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ. ನಾನು ಪಕ್ಷ ಬಿಡುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ, ಪಕ್ಷ ಬಿಡುವ ಸಂದರ್ಭ ಬಂದಲ್ಲಿ ಹೇಳಿಯೇ ಹೋಗುತ್ತೇನೆ. ಆದರೆ ಬಡವರು, ಶ್ರಮಿಕರು, ರೈತರ ಪರ ಇರುವ ಕಾರ್ಯಕರ್ತರ ಜತೆ ಇರುತ್ತೇನೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.