ಕರ್ನಾಟಕದಲ್ಲಿ ಮೋದಿ ಅಲೆ ವ್ಯಾಪಕ: ಮಾಜಿ ಸಚಿವ ಶ್ರೀರಾಮುಲು

Published : Jan 23, 2024, 01:35 PM IST
ಕರ್ನಾಟಕದಲ್ಲಿ ಮೋದಿ ಅಲೆ ವ್ಯಾಪಕ: ಮಾಜಿ ಸಚಿವ ಶ್ರೀರಾಮುಲು

ಸಾರಾಂಶ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರಕ್ಕೆ ಪಕ್ಷದ ಅಭ್ಯರ್ಥಿಯಾಗಲು ಕ್ಷೇತ್ರಾದ್ಯಂತ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ತಮ್ಮ ಮೇಲೆ ಒತ್ತಡ ಹೇರುತ್ತಿದ್ದು, ಜನಬೆಂಬಲದ ಪರಿಣಾಮವಾಗಿ ಅಭ್ಯರ್ಥಿಯಾಗಲು ಇಚ್ಛಿಸಿರುವೆ. ಆದರೆ ಪಕ್ಷದ ವರಿಷ್ಠರು ಅಂತಿಮವಾಗಿ ಯಾರಿಗೆ ಟಿಕೆಟ್ ನೀಡುತ್ತಾರೋ ಅವರ ಪರ ಪ್ರಚಾರ ಕೈಗೊಳ್ಳುವೆ: ಮಾಜಿ ಸಚಿವ ಬಿ.ಶ್ರೀರಾಮುಲು 

ಕೊಟ್ಟೂರು(ಜ.23):  ಪ್ರಧಾನಿ ನರೇಂದ್ರ ಮೋದಿಯವರ ಅಲೆ ರಾಜ್ಯದಲ್ಲಿ ವ್ಯಾಪಕವಾಗಿ ಕಾಣಿಸಿಕೊಳ್ಳತೊಡಗಿದೆ. ಅಲ್ಲದೇ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಂಪೂರ್ಣವಾಗಿ ವಿಫಲವಾಗಿದ್ದು ಇದರ ಪರಿಣಾಮ ಮತದಾರರು ಬಿಜೆಪಿಯತ್ತ ವಾಲಿದ್ದಾರೆ ಮಾಜಿ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರಕ್ಕೆ ಪಕ್ಷದ ಅಭ್ಯರ್ಥಿಯಾಗಲು ಕ್ಷೇತ್ರಾದ್ಯಂತ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ತಮ್ಮ ಮೇಲೆ ಒತ್ತಡ ಹೇರುತ್ತಿದ್ದು, ಜನಬೆಂಬಲದ ಪರಿಣಾಮವಾಗಿ ಅಭ್ಯರ್ಥಿಯಾಗಲು ಇಚ್ಛಿಸಿರುವೆ. ಆದರೆ ಪಕ್ಷದ ವರಿಷ್ಠರು ಅಂತಿಮವಾಗಿ ಯಾರಿಗೆ ಟಿಕೆಟ್ ನೀಡುತ್ತಾರೋ ಅವರ ಪರ ಪ್ರಚಾರ ಕೈಗೊಳ್ಳುವೆ ಎಂದರು. ನಾನು ಸ್ಪರ್ಧಾಕಾಂಕ್ಷಿಯಾಗಿದ್ದರೂ ಹಾಲಿ ಸಂಸದ ದೇವೇಂದ್ರಪ್ಪ ಅವರಿಗೆ ಪಕ್ಷ ಸ್ಪರ್ಧಿಸಲು ಅವಕಾಶ ನೀಡಿದರೆ ಅವರ ಪರವಾಗಿ ಪ್ರಚಾರ ಕೈಗೊಂಡು ಬಿಜೆಪಿ ಗೆಲುವಿಗೆ ಶ್ರಮಿಸುವೆ ಎಂದರು.

2 ತಿಂಗಳ ರಥಯಾತ್ರೆ ಮೂಲಕ ಅಯೋಧ್ಯೆ ತಲುಪಿದ ಕರ್ನಾಟಕದ ಕಿಷ್ಕಿಂಧೆ ಹನುಮರಥ

ಲೋಕಸಭಾ ಚುನಾವಣೆಗೆ ಜೆಡಿಎಸ್ ಜತೆ ಬಿಜೆಪಿ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆ ರಾಜ್ಯದ 28 ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸ ಹೊಂದಿದ್ದೇವೆ ಎಂದರು. ಕೊಟ್ಟೂರು ಬಿಜೆಪಿ ಘಟಕಾಧ್ಯಕ್ಷ ಭರಮನಗೌಡ ಪಾಟೀಲ್, ಹರೀಶ್‌ಗೌಡ, ಪಪಂ ಸದಸ್ಯರಾದ ಮರಬದ ಕೊಟ್ರೇಶ್, ಸಿದ್ದಯ್ಯ, ಕೆಂಗರಾಜ್‌, ಚಂದ್ರು ಜಂಬೂರು, ಅಂಗಡಿ ಪಂಪಾಪತಿ, ಪ್ರಜ್ವಲ್, ಪ್ರಶಾಂತ, ಅಭಿಷೇಕ್ ಮತ್ತಿತರರು ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ