
ಹಿರೇಕೆರೂರು(ಅ.20): ದೇಶದಲ್ಲಿ ನರೇಂದ್ರ ಮೋದಿ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳು ಬಿಜೆಪಿ ಶಕ್ತಿಯನ್ನು ಮತ್ತಷ್ಟು ವೃದ್ಧಿಸಿವೆ. ಬಿಜೆಪಿ ಸದಸ್ಯತ್ವ ಪಡೆದುಕೊಳ್ಳಲು ಯುವಕರು, ಮಹಿಳೆಯರು ಕಾತರಾಗಿದ್ದಾರೆ. ಆದ್ದರಿಂದ ಬಿಜೆಪಿ ಕಾರ್ಯಕರ್ತರು ಹಿರೇಕೆರೂರು ಕ್ಷೇತ್ರದಿಂದ ವಿದ್ಯಾರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಮಾಡಿಸಬೇಕು ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.
ಹಿರೇಕೆರೂರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮುಂಭಾಗ ಶುಕ್ರವಾರ ಬಿಜೆಪಿ ಯುವ ಮೋರ್ಚಾ ವತಿಯಿಂದ ಆಯೋಜಿಸಿದ್ದ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಮಾತನಾಡಿದ ಅವರು, ಸದೃಢ ರಾಷ್ಟ್ರ ಕಟ್ಟಲು ಪ್ರಧಾನಿ ನರೇಂದ್ರ ಮೋದಿ ಅವರೂಂದಿಗೆ ನಾವೆಲ್ಲರೂ ಕೈಜೋಡಿಸಬೇಕು ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ಸಾಧನೆ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಬೇಕು. ಸುಭದ್ರ ಭಾರತ ನಿರ್ಮಾಣಕ್ಕಾಗಿ ಪ್ರತಿಯೊಬ್ಬರು ಬಿಜೆಪಿ ಬೆಂಬಲಿಸಬೇಕು ಎಂದರು,
ಚನ್ನಪಟ್ಟಣ ಬೈಎಲೆಕ್ಷನ್: ಜೆಡಿಎಸ್‌ಗೇ ಟಿಕೆಟ್ ಕೊಡಿ ಅಂತ ಹೇಳಲು ನಾನು ಸಿದ್ಧ ಇಲ್ಲ, ನಿಖಿಲ್ ಕುಮಾರಸ್ವಾಮಿ
ಈ ಸಂದರ್ಭದಲ್ಲಿ ತಾಲೂಕು ಯುವಮೋರ್ಚಾ ಅಧ್ಯಕ್ಷರಾದ ಜಗದೀಶ್ ದೊಡ್ಡಗೌಡ್ರ, ಜಿಲ್ಲಾ ಯುವಮೋರ್ಚಾ ಅಧ್ಯಕ್ಷರಾದ ಅಭಿಷೇಕ ಗೂಡಗೂರವರು, ಮಂಡಲ ಅಧ್ಯಕ್ಷ ಶಿವಕುಮಾರ ತಿಪ್ಪಶೆಟ್ಟಿ ಹಾಗೂ ಯುವ ಮೋರ್ಚಾ ಉಪಾಧ್ಯಕ್ಷರಾದ ಹನುಮಂತ ಚೌಡಣ್ಣನವರ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುಪ್ರಿತ್ ಧಾರವಾಡಕರ, ಲಿಂಗಾಚಾರ ಮಾಯಾಚಾರ, ಶಶಿಕಾಂತ ಸುತ್ತಕೋಟಿ, ಪಟ್ಟನ ಪಂಚಾಯತ ಸದಸ್ಯರಾದ ಹರೀಶ್ ಕಲಾಲ, ಮಾರುತಿ ಪಾಷಿ, ಶ್ರೀಕಾಂತ ವಡ್ಡರ, ಪ್ರವೀಣ್ ಸಣ್ಣಕ್ಕಿ, ಯೋಗೀಶ, ವೀರೇಶ ಮರಿಗೌಡ್ರ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.