ನನಗೆ ಟಿಕೆಟ್‌ ಗ್ಯಾರಂಟಿ, ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಿ: ಡಾ. ಸುಧಾಕರ್

By Kannadaprabha News  |  First Published Mar 12, 2024, 6:07 AM IST

ಇನ್ನೇನು ಎರಡು ಮೂರು ದಿನಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಘೋಷಣೆ ಆಗುತ್ತದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡುವಂತೆ ಮನವಿ ಮಾಡಿದ್ದೇನೆ. ಈ ಸಲ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿಕೊಡಿ ಎಂಬ ಬೆಂಬಲಿಗರಿಗೆ ಮನವಿ ಮಾಡಿದ ಮಾಜಿ ಸಚಿವ ಡಾ. ಕೆ ಸುಧಾಕರ್


ಚಿಕ್ಕಬಳ್ಳಾಪುರ(ಮಾ.12): ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಮಾಜಿ ಸಚಿವ ಡಾ. ಕೆ ಸುಧಾಕರ್ ಚುನಾವಣೆಯಲ್ಲಿ ತಮ್ಮನ್ನು ಗೆಲ್ಲಿಸಿ, ವೇದನೆ ಕಡಿಮೆ ಮಾಡುವಂತೆ ಕೋರಿ ಟಿಕೆಟ್ ಘೋಷಣೆಗೂ ಮುನ್ನ ಕ್ಷೇತ್ರದ ಜನರಿಗೆ ಮನವಿ ಮಾಡಿದ್ದಾರೆ. ಅಲ್ಲದೆ, ಮಾ. 15ರಂದು ಪ್ರಧಾನಿ ಮೋದಿ ಅವರು ರಾಜ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

ಸೋಮವಾರ ನಗರದ ಖಾಸಗಿ ಪಾರ್ಟಿ ಹಾಲ್‌ನಲ್ಲಿ ಕಾರ್ಯಕರ್ತರ ಸಭೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸುವುದರ ಮೂಲಕ ನನ್ನ ವೇದನೆ ಕಡಿಮೆ ಮಾಡಿ ಎಂದು ಮನವಿ ಮಾಡಿದರು.

Tap to resize

Latest Videos

ಕಾಂಗ್ರೆಸ್‌ ಸರ್ಕಾರದಿಂದ ಬಯಲುಸೀಮೆಗೆ ವಂಚನೆ: ಮಾಜಿ ಸಚಿವ ಡಾ.ಕೆ.ಸುಧಾಕರ್‌

ಇನ್ನೇನು ಎರಡು ಮೂರು ದಿನಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಘೋಷಣೆ ಆಗುತ್ತದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡುವಂತೆ ಮನವಿ ಮಾಡಿದ್ದೇನೆ. ಈ ಸಲ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿಕೊಡಿ ಎಂಬ ಬೆಂಬಲಿಗರಿಗೆ ಮನವಿ ಮಾಡಿದರು. ಚಿಕ್ಕಬಳ್ಳಾಪುರದ ನಂದಿ ಗ್ರಾಮದಲ್ಲಿ ನಡೆದ ಶ್ರೀ ಭೋಗನಂದೀಶ್ವರ ಜಾತ್ರೆ ಹಾಗೂ ಬ್ರಹ್ಮರಥೋತ್ಸವ ದ ವೇಳೆ ಕೆಲವರು ನನ್ನ ಹೆಸರನ್ನು ಹರಕೆ ಕಟ್ಟಿ ಅಭ್ಯರ್ಥಿಯಾಗುವಂತೆ ಪ್ರಾರ್ಥಿಸಿದ್ದಾರೆ. ಅವರಿಗೆ ನಾನು ಋಣಿಯಾಗಿದ್ದೇನೆ ಎಂದರು.

ಚಿಕ್ಕಬಳ್ಳಾಪುರದಿಂದ ಮೋದಿ ಚಾಲನೆ:

ರಾಜ್ಯದಲ್ಲಿ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರರ ಮೋದಿ ಅವರು ಮಾ. 15 ರಂದು ಚಾಲನೆ ನೀಡಲಿದ್ದಾರೆ. ಅಂದು ಬೆಳಗ್ಗೆ 10 ಗಂಟೆಗೆ ಪ್ರಧಾನಿ ದೇವನಹಳ್ಳಿಗೆ ಬರಲಿದ್ದಾರೆ. ಕಾರ್ಯಕರ್ತರು ಹಾಗೂ ರೈತರು ಉತ್ಸಾಹದಿಂದ ಅವರನ್ನು ಬರಮಾಡಿಕೊಳ್ಳಲಿದ್ದಾರೆ. ನಂತರ ಚಿಕ್ಕಬಳ್ಳಾಪುರಕ್ಕೆ ಆಗಮಿಸಿ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ ಎಂದರು.

ರಾಜ್ಯದಲ್ಲಿ 500ಕ್ಕೂ ಹೆಚ್ಚು ರೈತರ ಆತ್ಮಹತ್ಯೆ: ವಿಜಯೇಂದ್ರ

ಕಳೆದೊಂದು ವರ್ಷದಿಂದ ಚಿಕ್ಕಬಳ್ಳಾಪುರ ಅಭಿವೃದ್ಧಿ ವಂಚಿತವಾಗಿದೆ. ಬಿಜೆಪಿ ನನಗೆ ಅವಕಾಶ ನೀಡಿದರೆ ಕಾರ್ಯಕರ್ತರು ಉತ್ಸಾಹದಿಂದ ಕೆಲಸ ಮಾಡಲಿದ್ದಾರೆ. ಹಿಂದಿನ ಲೋಪವನ್ನು ಸರಿಪಡಿಸಲು ನಾನು ದಿಟ್ಟ ಉತ್ತರ ನೀಡುತ್ತೇನೆ. ನರೇಂದ್ರ ಮೋದಿಯವರ ಪರವಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಧ್ವನಿಯಾಗಿ ಕೆಲಸ ಮಾಡುತ್ತೇನೆ. ಜೆಡಿಎಸ್‌ ಮೈತ್ರಿಯೂ ಇರುವುದರಿಂದ ಬಿಜೆಪಿಗೆ ಹೆಚ್ಚು ಬಲ ಬಂದಿದೆ ಎಂದರು.

ಒಂದು ಅಗಳು ಅನ್ನದಾನ ಮಾಡದ ವ್ಯಕ್ತಿಯನ್ನು ಚಿಕ್ಕಬಳ್ಳಾಫುರದ ಜನ ಶಾಸಕರನ್ನಾಗಿ ಮಾಡಿದ್ದಾರೆ. ತಾವು ಹಗಲು ರಾತ್ರಿ ಕ್ಷೇತ್ರಕ್ಕಾಗಿ ದುಡಿದರೂ ನನ್ನನ್ನು ಸೋಲಿಸಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.

click me!