
ನವದೆಹಲಿ( ಜು. 13) ರಾಜ್ಯ ಬಿಜೆಪಿ ನಾಯಕರ ದೆಹಲಿ ದಂಡಯಾತ್ರೆ ಒಂದು ಹಂತಕ್ಕೆ ಮುಗಿದ ಲಕ್ಷಣ ಕಾಣುತ್ತಿದ್ದರೆ ಕಾಂಗ್ರೆಸ್ ನಾಯಕರ ದೆಹಲಿ ಪ್ರವಾಸ ಶುರುವಾಗಿದೆ. ಕರ್ನಾಟಕ ಕಾಂಗ್ರೆಸ್ ನ ಬೆಳವಣಿಗೆ ಕಾರಣಕ್ಕೆ ಅಧ್ಯಕ್ಷೆ ಸೋನಿಯಾ ಗಾಂಧಿ ಮನೆ ಕದವನ್ನು ಮಾಜಿ ಸಚಿವ ಕೆ.ಜೆ ಜಾಜ್೯ ತಟ್ಟಿದ್ದಾರೆ.
ದೆಹಲಿಯ ಜನಪತ್ ನಿವಾಸದಲ್ಲಿ ಸೋನಿಯಾಗಾಂಧಿಯವರನ್ನು ಭೇಟಿಯಾದ ಜಾಜ್೯ 20 ನಿಮಿಷಕ್ಕೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ರಾಜ್ಯ ರಾಜಕೀಯ ಬೆಳವಣಿಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ತಮ್ಮ ಮುಂದಿನ ಚುನಾವಣಾ ಕ್ಷೇತ್ರ ಘೋಷಿಸಿದ ಸಿದ್ದರಾಮಯ್ಯ
ಬಳಿಕ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ ಸಹ ಸೋನಿಯಾ ಅವರನ್ನು ಭೇಟಿ ಮಾಡಿದ್ದಾರೆ. ಕರ್ನಾಟಕ ಕಾಂಗ್ರೆಸ್ ನಲ್ಲಿ ಡಿಕೆಶಿ ಮತ್ತು ಸಿದ್ದರಾಮಯ್ಯ ಬೆಂಬಲಿಗರ ನಡುವೆ ಮುಂದಿನ ಸಿಎಂ ವಿಚಾರ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿತ್ತು. ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆಯೂ ಕೇಳಿಬಂದಿತ್ತು.
ಕೆಲ ದಿನಗಳ ಹಿಂದೆ ಡಿಕೆಶಿ ದೆಹಲಿ ಪ್ರವಾಸ ಮಾಡಿದ್ದರು. ಸಿದ್ದರಾಮಯ್ಯ ಸಹ ದೆಹಲಿಗೆ ಭೇಟಿ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.