
ಅಥಣಿ(ಬೆಳಗಾವಿ)(ಜು.29): ರಾಜ್ಯ ಬಿಜೆಪಿ ಹಿರಿಯ ಮುಖಂಡ, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಪಟ್ಟಣಕ್ಕೆ ಶುಕ್ರವಾರ ಧೀಡಿರ್ ಭೇಟಿ ನೀಡಿದ್ದು, ಆರೆಸ್ಸೆಸ್‌ನ ಉತ್ತರ ಕರ್ನಾಟಕ ಪ್ರಾಂತ ಮುಖಂಡ ಅರವಿಂದ ದೇಶಪಾಂಡೆ ಅವರ ಮನೆಗೆ ತೆರಳಿ ಕೆಲಕಾಲ ಸುದೀರ್ಘ ಚರ್ಚಿಸಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪುತ್ರನ ಟಕೆಟ್‌ಗಾಗಿ ಮತ್ತು ಸದ್ಯದ ರಾಜ್ಯ ರಾಜಕಾರಣದ ಸ್ಥಿತಿ ಬಗ್ಗೆ ಈ ವೇಳೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ಹೇಳಿದ್ದು, ಬಿಜೆಪಿ ವಲಯದಲ್ಲಿ ಈ ಭೇಟಿ ತೀವ್ರ ಕುತೂಹಲ ಮೂಡಿಸಿದೆ.
ಸರ್ಕಾರ ಉರುಳಿಸಲು ಯಾರು ಯತ್ನಿಸುತ್ತಿದ್ದಾರೆ, ಡಿಕೆಶಿ ಹೇಳಲಿ: ಈಶ್ವರಪ್ಪ ಸವಾಲ್
ಉಭಯ ನಾಯಕರ ಮಾತುಕತೆ ವೇಳೆ ವಿರೋಧ ಪಕ್ಷದ ನಾಯಕನ ಆಯ್ಕೆ ಸೇರಿ ಹಲವು ವಿಚಾರಗಳು ಚರ್ಚೆಗೆ ಬಂದಿವೆ ಎಂದು ಮೂಲಗಳು ತಿಳಿಸಿವೆ. ಇದಾದ ನಂತರ ಅಥಣಿಯ ಬಿಜೆಪಿ ಕಚೇರಿಯಲ್ಲಿ ಪ್ರಧಾನಿ ಮೋದಿ ಅವರ ಸಾಧನೆ ಪುಸ್ತಕವನ್ನು ಬಿಡುಗಡೆ ಕಾರ್ಯಕ್ರಮದಲ್ಲೂ ಅವರು ಪಾಲ್ಗೊಂಡರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.