ಸಚಿವ ಸ್ಥಾನ ಬಗ್ಗೆ ವರಿಷ್ಠರು ತೀರ್ಮಾನಿಸ್ತಾರೆ: ಈಶ್ವರಪ್ಪ

By Govindaraj SFirst Published Jul 26, 2022, 5:00 AM IST
Highlights

ಸಚಿವ ಸ್ಥಾನ ನೀಡುವುದು ಬಿಡುವುದು ಪಕ್ಷದ ವರಿಷ್ಠರಿಗೆ ಬಿಟ್ಟವಿಷಯ ಎಂದು ಶಾಸಕ ಕೆ.ಎಸ್‌.ಈಶ್ವರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಈಗಾಗಲೇ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣದಲ್ಲಿ ‘ಬಿ’ ರಿಪೋರ್ಟ್‌ನಲ್ಲಿ ಕ್ಲೀನ್‌ ಚಿಟ್‌ ನೀಡಿದ್ದಾರೆ.

ಶಿವಮೊಗ್ಗ (ಜು.26): ಸಚಿವ ಸ್ಥಾನ ನೀಡುವುದು ಬಿಡುವುದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಷಯ ಎಂದು ಶಾಸಕ ಕೆ.ಎಸ್‌.ಈಶ್ವರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಈಗಾಗಲೇ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣದಲ್ಲಿ ‘ಬಿ’ ರಿಪೋರ್ಟ್‌ನಲ್ಲಿ ಕ್ಲೀನ್‌ ಚಿಟ್‌ ನೀಡಿದ್ದು, ಆರೋಪದಿಂದ ಮುಕ್ತನಾಗಿದ್ದೇನೆ. ಮುಂದಿನ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ನನಗೆ ಸಚಿವ ಸ್ಥಾನ ನೀಡಬೇಕೋ ಅಥವಾ ಬೇಡವೇ ಎಂಬುದರ ಬಗ್ಗೆ ವರಿಷ್ಠರು ತೀರ್ಮಾನಿಸುತ್ತಾರೆ ಎಂದರು. 

ಇನ್ನು ಬಿ.ಎಸ್‌.ಯಡಿಯೂರಪ್ಪ ತಮ್ಮ ಕ್ಷೇತ್ರವನ್ನು ಪುತ್ರ ವಿಜಯೇಂದ್ರರಿಗೆ ನೀಡುವ ಬಗ್ಗೆ ಘೋಷಿಸಿರುವುದು ರಾಜ್ಯದ ಮತ್ತು ಪಕ್ಷದ ಹಿತದೃಷ್ಠಿಯಿಂದ ತೆಗೆದುಕೊಂಡ ತೀರ್ಮಾನವಾಗಿದೆ. ವಿಜಯೇಂದ್ರಗೆ ಟಿಕೆಟ್‌ ನೀಡಲು ಕೇಂದ್ರದ ನಾಯಕರು ಒಪ್ಪಿಗೆ ನೀಡುತ್ತಾರೆ ಎಂಬ ವಿಶ್ವಾಸದಿಂದ ಹೇಳಿಕೆ ನೀಡಿರಬಹುದು ಎಂದರು. ಇನ್ನು ಇಂದಿರಾ ಗಾಂಧಿ ಪ್ರಧಾನಿ ಆಗಿದ್ದಾಗ ಚುನಾವಣೆ ಸಂದರ್ಭದಲ್ಲಿ ಯಾರಿಗೆ ‘ಬಿ​’ ಫಾರಂ ನೀಡಿದ್ದರೂ ಆ ಅಭ್ಯರ್ಥಿ ಗೆಲುವು ನಿಶ್ಚಿತವಾಗಿತ್ತು. ಆದರೆ, ಇಂದು ಕಾಂಗ್ರೆಸ್‌ ಪಕ್ಷ ‘ಬಿ’ ಫಾರಂ ನೋಡಿದರೆ ಓಡಿ ಹೋಗುವಂತಹ ಪರಿಸ್ಥಿತಿ ಬಂದಿದೆ ಎಂದರು.

ಪಾಟೀಲ್‌ ಆತ್ಮ​ಹತ್ಯೆ ತನಿಖೆ, ಮಹಿ​ಳೆ​ಯ​ರಿಗೆ ದ್ರೋಹ: ಯು.ಟಿ. ಖಾದ​ರ್‌

ಕೇಂದ್ರ ನಾಯ​ಕರಿಂದ ವಿಜ​ಯೇಂದ್ರಗೆ ಟಿಕೆಟ್‌: ಸಚಿವ ಸ್ಥಾನ ನೀಡುವುದು ಬಿಡುವುದು ಪಕ್ಷದ ವರಿಷ್ಠರಿಗೆ ಬಿಟ್ಟವಿಷಯ ಎಂದು ಶಾಸಕ ಕೆ.ಎಸ್‌.ಈಶ್ವರಪ್ಪ ಹೇಳಿದರು. ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿಯಾಗಿ ಅಧಿಕಾರ ಸ್ವೀಕರಿಸಿದ ರೇಖಾ ರಂಗನಾಥ್‌ ಅವರಿಗೆ ಅಭಿನಂದಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ನನಗೆ ಈಗಾಗಲೇ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣದಲ್ಲಿ ‘ಬಿ’ ರಿಪೋರ್ಚ್‌ನಲ್ಲಿ ಕ್ಲೀನ್‌ ಚಿಟ್‌ ನೀಡಿದ್ದು, ಆರೋಪದಿಂದ ಮುಕ್ತನಾಗಿದ್ದೇನೆ. ಮುಂದಿನ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ನನಗೆ ಸಚಿವ ಸ್ಥಾನ ನೀಡಬೇಕೋ ಅಥವಾ ಬೇಡವೇ ಎಂಬುದರ ಬಗ್ಗೆ ವರಿಷ್ಠರು ತೀರ್ಮಾನಿಸುತ್ತಾರೆ ಎಂದರು.

ಹಿರಿಯರಾದ ಬಿ.ಎಸ್‌. ಯಡಿಯೂರಪ್ಪ ತಮ್ಮ ಕ್ಷೇತ್ರವನ್ನು ಪುತ್ರ ವಿಜಯೇಂದ್ರರಿಗೆ ನೀಡುವ ಬಗ್ಗೆ ಘೋಷಿಸಿರುವುದು ರಾಜ್ಯದ ಮತ್ತು ಪಕ್ಷದ ಹಿತದೃಷ್ಠಿಯಿಂದ ತೆಗೆದುಕೊಂಡ ತೀರ್ಮಾನವಾಗಿದೆ. ಇದಕ್ಕೆ ಕೇಂದ್ರದ ವರಿಷ್ಠರು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಾರೆ. ವಿಜಯೇಂದ್ರ ಅವರಿಗೆ ಟಿಕೆಟ್‌ ನೀಡಲು ಕೇಂದ್ರ ನಾಯಕರು ಒಪ್ಪಿಗೆ ನೀಡುತ್ತಾರೆ ಎಂಬ ವಿಶ್ವಾಸದಿಂದ ಹೇಳಿಕೆ ನೀಡಿರಬಹುದು. ಈ ಬೆಳವಣಿಗೆ ಪಕ್ಷದಲ್ಲಿ ಯಾವುದೇ ಗೊಂದಲ ಹುಟ್ಟಿಸುವುದಿಲ್ಲ. ಒಂದು ಪಕ್ಷ ಇದು ಗೊಂದಲವಿದ್ದರೂ ಅದನ್ನು ಸರಿಪಡಿಸುವ ಶಕ್ತಿ ಪಕ್ಷಕ್ಕಿದೆ ಎಂದರು.

ಆಡಳಿತ ಪಕ್ಷ ಗಟ್ಟಿಯಾದಂತೆ ವಿಪಕ್ಷವೂ ಗಟ್ಟಿಯಾದರೆ ಮಾತ್ರ ಪ್ರಜಾಪ್ರಭುತ್ವ ಉಳಿಯಲು ಸಾಧ್ಯ. ಅನೇಕ ರಾಜ್ಯಗಳಲ್ಲಿ ವಿರೋಧ ಪಕ್ಷಗಳೇ ಇಲ್ಲದಂತಾಗಿದೆ. ವಿರೋಧ ಪಕ್ಷ ಇಲ್ಲದಿರುವುದು ಪ್ರಜಾಪ್ರಭುತ್ವದ ಅಣಕು. ದೇಶದಲ್ಲಿ ಕಾಂಗ್ರೆಸ್‌ ತನ್ನ ಅಸ್ತಿತ್ವವನ್ನೇ ಕಳೆದುಕೊಳ್ಳುತ್ತಿದೆ. ಪಕ್ಷದ ನೇತೃತ್ವ ಕೊರತೆಯೋ ಅಥವಾ ನಾಯಕರು, ಕಾರ್ಯಕರ್ತರಿಗೆ ಸಿದ್ಧಾಂತ ಹೇಳುವುದರಲ್ಲಿ ವಿಫಲರಾಗಿರಾದ್ದಾರೆಯೋ? ಇದರಿಂದಾಗಿ ದೇಶದ ಜನ ಕಾಂಗ್ರೆಸ್‌ ಅನ್ನು ತಿರಸ್ಕಾರ ಮಾಡಿದ್ದಾರೆ. ಒಟ್ಟಾರೆ ಕಾಂಗ್ರೆಸ್‌ ದಿನೇ ಕುಸಿದು ಹೋಗುತ್ತಿದೆ ಎಂದು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಿ ಒಡಕು ಹಾಗೂ ಕಿತ್ತಾಟ ಹೆಚ್ಚಾಗುತ್ತಿದೆ. 

ಸುಸೈಡ್ ಕೇಸಿನಲ್ಲಿ ಕ್ಲೀನ್ ಚಿಟ್, ಈಶ್ವರಪ್ಪ ಮೊದಲ ಪ್ರತಿಕ್ರಿಯೆ, ಮತ್ತೆ ಮಂತ್ರಿಯಾಗುವ ಬಗ್ಗೆ ಹೇಳಿದ್ದಿಷ್ಟು

ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇರುವಾಗಲೇ ಈಗಲೇ ಮೂರ್ನಾಲ್ಕು ಮುಖಂಡರು ನಾನೇ ಸಿಎಂ ಎಂದು ಹೇಳುತ್ತಿರುವುದು ನೋಡಿದರೆ ಚುನಾವಣೆ ನಂತರ ಕಾಂಗ್ರೆಸ್‌ ವಿಪಕ್ಷವಾಗಿ ಇರುತ್ತದೆಯೋ ಇಲ್ಲವೋ ಎಂಬ ಅನುಮಾನವಿದೆ. ಸಿದ್ದರಾಮಯ್ಯ ಅವರಿಗೆ ಅಧಿಕಾರ ದಾಹವಿದೆ. ಅದೇ ರೀತಿ ಡಿ.ಕೆ.ಶಿವಕುಮಾರ್‌ ಅವರಿಗೂ ಮುಖ್ಯಮಂತ್ರಿ ಆಗುವ ಹಪಾಹಪಿ ಇದೆ. ಎಸ್‌.ಎಂ.ಕೃಷ್ಣ ಮುಖ್ಯಮಂತ್ರಿ ಆದ ನಂತರ ಒಕ್ಕಲಿಗ ಜನಾಂಗದವರು ಮುಖ್ಯಮಂತ್ರಿ ಆಯ್ಕೆ ಆಗಬೇಕೆಂದು ಡಿ.ಕೆ. ಶಿವಕುಮಾರ್‌ ನೇರವಾಗಿ ಜಾತಿಯ ಲೇಪ ಹಚ್ಚುತ್ತಿದ್ದಾರೆ. ಸಿದ್ದರಾಮಯ್ಯ ಕುರುಬ ನಾಯಕ ಎಂದು ಜಾತಿ ಲೇಪ ಹಚ್ಚುತ್ತಿದ್ದಾರೆ ಎಂದು ಲೇವಡಿ ಮಾಡಿದರು. 

click me!